DK Shivakumar: ಕಾಲೇಜುಗಳಿಗೆ ಯಾಕೆ ರಜೆ? ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ? ಡಿಕೆ ಶಿವಕುಮಾರ್ ಪ್ರಶ್ನೆ

ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ? ರೋಡಲ್ಲಿ ಏನು ಸೆಕ್ಯುರಿಟಿ ಕೊಡಬೇಕೋ ಕೊಡಿ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​

  • Share this:
ಇಂದು ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (KPCC President DK Shivakumar), ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಾಲಗಂಗಾಧರನಾಥ ಸ್ವಾಮೀಜಿ ಇತಿಹಾಸ, ಶಿವಕುಮಾರ ಸ್ವಾಮೀಜಿ ಇತಿಹಾಸ, ಶಂಕರಾಚಾರ್ಯರು ಎಲ್ಲರ ಬಗ್ಗೆಯೂ ಪಠ್ಯದಲ್ಲಿ (Text Book Row) ಅವಮಾನ ಆಗಿದೆ. ಕೆಲವು ಸ್ವಾಮೀಜಿಗಳು (Swamiji) ಟ್ವೀಟ್ ಮಾಡಿ ದೂರು ಕೊಡುವ ಕೆಲಸ ಮಾಡಿದ್ದಾರೆ. ಆದರೆ ಇನ್ನಷ್ಟು ಸ್ವಾಮೀಜಿಗಳು ಧ್ವನಿ ಎತ್ತಬೇಕು. ಸ್ವಾಮೀಜಿಗಳು ರಾಜಕಾರಣಕ್ಕೆ (Politics) ಬೆಂಬಲ ಕೊಡುವುದು ಬೇಡ. ಅವರು ಇರುವುದು ಸಂಸ್ಕೃತಿ ನ್ಯಾಯ ಉಳಿಸಲು ಸ್ವಾಮೀಜಿಗಳು ಇರುವುದು ಪ್ರಯತ್ನ ಮಾಡ್ತಿರುವುದು. ಸರ್ಕಾರಕ್ಕೆ ಹೆದರಿಕೊಂಡು ಸ್ವಾಮೀಜಿಗಳು ಸುಮ್ಮನಿರಿವುದು ಬೇಡ ಎಂದರು.

ಅವರೇ ಧ್ವನಿ ಎತ್ತದಿದ್ದರೆ ಯಾರು ಎತ್ತಬೇಕು? ಒಂದು ಜಾತಿ ಧರ್ಮದ ವಿಚಾರ ಅಲ್ಲ. ಎಲ್ಲರೂ ಕೂಡ ಒಗ್ಗಟ್ಟು ಇರಬೇಕು. ಶಾಂತಿ ಭಂಗ ಮಾಡುವ ಕೆಲಸ ಸರ್ಕಾರ ಮಾಡ್ತಿದೆ. ಅವಮಾನ ಆದಾಗ ಒಕ್ಕಲಿಗರ ಸಂಘ ಯಾಕೆ ಮಾತಾಡ್ತಿಲ್ಲ? ಬೇರೆ ಸಂಘಟನೆಗಳು ಯಾಕೆ ಮಾತಾಡ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ರಾಜಕಾರಣಿಗಳು ಕೆಲವರು ಅಡ್ಸಜ್ಟ್ ಮಾಡ್ಕೊಂಡು ರಾಜಕಾರಣ ಮಾಡ್ತಿರಬಹುದು. ಆದರೆ ಇದರಲ್ಲಿ ಹಾಗೆ ಇರಬಾರದು ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: Ashwath Narayan: ಜೂನ್ 20ರಂದು ಬೆಂಗಳೂರಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ; ಪ್ರತಿಷ್ಠಿತ ಕಾಲೇಜುಗಳಿಗೆ ರಜೆ ಘೋಷಣೆ

ಶಾಲೆ ಕಾಲೇಜುಗಳಿಗೆ ರಜೆ ಯಾಕೆ?

ಇದೇ ವೇಳೆ ಪ್ರಧಾನಿ ಮೋದಿ ಅವರು ಪ್ರಯಾಣಿಸುವ ರಸ್ತೆಗಳಲ್ಲಿ ಕಾಲೇಜುಗಳಿಗೆ ರಜೆ ವಿಚಾರದ ನಿರ್ಧಾರಕ್ಕೆ ಡಿಕೆ ಶಿವಕುಮಾರ್ ಕೆಂಡಾಮಂಡಲರಾದರು. ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ? ರೋಡಲ್ಲಿ ಏನು ಸೆಕ್ಯುರಿಟಿ ಕೊಡಬೇಕೋ ಕೊಡಿ. ರೋಡ್ ಶೋ ಮಾಡಿ. ಆದ್ರೆ ರಾಜಕೀಯ ಮಾಡಿ. ಆದರೆ ವಿದ್ಯಾರ್ಥಿ ಗಳನ್ನು ಯಾಕೆ ಅನುಮಾನದಿಂದ ನೋಡ್ತಿದ್ದೀರಾ? ನಮ್ಮ ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ ಎಂದು ಕಿಡಿಕಾರಿದರು.

ಬಡವರ ಮಕ್ಕಳು ಸೆಕ್ಯೂರಿಟಿ ಗಾರ್ಡ್​ ಗಳಾಬೇಕಾ?

ಅಗ್ನಿಪಥ್ ಯೋಜನೆ ತಂದಿದ್ದೀರಾ ಆ ಮಕ್ಕಳು ಡಿಗ್ರಿ ಪಾಸ್ ಮಾಡಬಾರದಾ.? ಇಷ್ಟು ವರ್ಷ ದೇಶವನ್ನು ಎಂಥೆಂತ ಸಂದರ್ಭಗಳಲ್ಲಿ ರಕ್ಷಣೆ ಮಾಡಿದ್ದಾರಲ್ಲ. ಮಂತ್ರಿಗಳು ಅವರ ಮಕ್ಕಳನ್ನು ಅಗ್ನಿ ಪಥ್ ಯೋಜನೆಗೆ ಕಳಿಸಲಿ ನೋಡೋಣ. ಮಂತ್ರಿಗಳ ಮಕ್ಕಳು ಇಂಜಿನಿಯರ್ ಆಗಬೇಕು ಡಾಕ್ಟರ್ ಆಗಬೇಕು ಆದರೆ ಬಡವರ ಮಕ್ಕಳು ಮಾತ್ರ ಸೆಕ್ಯುರಿಟಿ ಗಾರ್ಡ್ಸ್ ಗಳಾಗಬೇಕಾ?

ಮೋದಿ ಬರುತ್ತಿರುವುದು ಜನಕ್ಕೆ ಅನುಕೂಲ ಅಲ್ಲ, ನಾಯಕರ ಅನುಕೂಲದ ಕಾರ್ಯಕ್ರಮಗಳಿಗೆ. ಪ್ರಧಾನಿ ಮೋದಿ ಅವರು 40 ಪರ್ಸೆಂಟ್ ಸರ್ಕಾರ ಅಂದಿದ್ದಕ್ಕೆ ಮೊದಲು ಉತ್ತರ ಕೊಡಲಿ. ನಮ್ಮ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಕೇಳಿದ ಪ್ರಶ್ನೆ ಗಳಿಗೆ ಮೋದಿ ಉತ್ತರ ಕೊಡಲಿ ಎಂದು ಆಗ್ರಹಿಸಿದರು.

ಎಲ್ಲ ಧರ್ಮಕ್ಕೂ ಗೌರವ ಕೊಡಬೇಕು

ಡಿಕೆಶಿ ಹಿಂದು ವಿರೋಧಿ ಎಂಬ ಬಿಜೆಪಿ ಟ್ವೀಟ್ ವಿಚಾರಕ್ಕೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷರು, ನನ್ನ ಕ್ಷೇತ್ರದಲ್ಲಿ 300-400 ದೇವಸ್ಥಾನಗಳನ್ನ ಜೀರ್ಣೋದ್ಧಾರ ಮಾಡಿಸಿದ್ದೇನೆ. ಬೇಕಾದ್ರೆ ಬಂದು ನೋಡಲಿ, ನಾನೊಬ್ಬ ಹಿಂದು, ಎಲ್ಲ ಧರ್ಮಕ್ಕೂ ಗೌರವ ಕೊಡಬೇಕು. ನಾವು ಯಾರ ಬೇಕಾದರೂ ಅಧಿಕಾರ ಕೊಡ್ತೇವೆ ಇವರಿಗೆ ಏನಾಗಬೇಕು ಎಂದು ಕೇಳಿದರು.

ಇದನ್ನೂ ಓದಿ:  Belagavi: ಸಾಮಾಜಿಕ ಕಾರ್ಯಕರ್ತನ ಕೊಲೆ; ನಾಲ್ಕು ಕಾರ್, ಟ್ರ್ಯಾಕ್ಟರ್, ಎರಡು ಟೆಂಪೋ ಸೇರಿ ಮೇವಿನ ಬಣವೆಗಳಿಗೆ ಬೆಂಕಿ

ಇವರ ಪಾರ್ಟಿಗೆ ಏನಾಗಬೇಕು,? ಅವರಿಗೆ ನಮ್ಮ ಯುವಕರ ಬಗ್ಗೆ ಭಯವಿದೆ‌. ಸಂಘಟನೆಗಳ ಬಗ್ಗೆ ಭಯವಿದೆ ಎಂದು ನಲಪಾಡ್ ಬಗ್ಗೆ ಪ್ರಶ್ನಿಸಿದ್ದ ಬಿಜೆಪಿಗೆ ತಿರುಗೇಟು ನೀಡಿದರು.

ಈ ಕಾಲೇಜುಗಳಿಗೆ ರಜೆ

ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ .
Published by:Mahmadrafik K
First published: