ಬೆಂಗಳೂರು: ಸಿಎಂ ಆಯ್ಕೆ ಚೆಂಡು ಕಾಂಗ್ರೆಸ್ ಹೈಕಮಾಂಡ್ (Congress High Command) ಅಂಗಳ ತಲುಪಿದೆ. ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಸಿಎಂ ಸ್ಥಾನಕ್ಕೆ ಬಿಗಿಪಟ್ಟು ಹಿಡಿದ ಹಿನ್ನೆಲೆ ಇಬ್ಬರಿಗೂ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿದೆ. ಇಂದು ಡಿಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬ ಹಿನ್ನೆಲೆ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಡಿಕೆ ಶಿವಕುಮಾರ್ ಅವರನ್ನೇ ಸಿಎಂ ಮಾಡಬೇಕೆಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಕಾರ್ಯಕರ್ತರು ಆಯೋಜನೆ ಮಾಡಿದ್ದ ಬರ್ತ್ ಡೇ ಕಾರ್ಯಕ್ರಮಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕೇಕ್ ಕತ್ತರಿಸಿ ಮಾತನಾಡಿದರು.
ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಹೈಕಮಾಂಡ್ ನನಗೆ ಗಿಫ್ಟ್ ಕೊಡುತ್ತೋ ಇಲ್ವೋ ಗೊತ್ತಿಲ್ಲ. ಆದ್ರೆ ಈ ರಾಜ್ಯದ ಜನರು 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಿ ಗಿಫ್ಟ್ ನೀಡಿದ್ದಾರೆ. ತುಂಬಾ ತೊಂದರೆ ಅನುಭವಿಸಿದ್ದೇನೆ. ಇವತ್ತು ಹುಟ್ಟಿದ ಹಬ್ಬ, ನಾನು ನಂಬಿರೋ ದೇವರ ಬಳಿ ಹೋಗಬೇಕು. ನಾನು ಇವತ್ತು ದೆಹಲಿಗೆ ಹೋಗ್ತೀನೋ ಇಲ್ವೋ ಗೊತ್ತಿಲ್ಲ ಎಂದು ಹೇಳಿದರು.
ತಂದೆಗೆ ಮಗಳ ವಿಶ್
ಇನ್ನು ಡಿಕೆ ಶಿವಕುಮಾರ್ ಹುಟ್ಟುಹಬ್ಬಕ್ಕೆ ಮಗಳು ಐಶ್ವರ್ಯಾ, ತಂದೆಗೆ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ತಮ್ಮ ಮದುವೆ ಸಂದರ್ಭದಲ್ಲಿ ಅಪ್ಪಾ ಐ ಲವ್ ಯು ಹಾಡಿಗೆ ಹೆಜ್ಜೆ ಹಾಕಿದ್ದ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಡಿಕೆ ಶಿವಕುಮಾರ್ ಅಂದು ಮಗಳ ತಮಗಾಗಿ ಮಾಡಿದ್ದ ಡ್ಯಾನ್ಸ್ ಕಂಡು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಈ ವಿಡಿಯೋದಲ್ಲಿ ತಂದೆ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
View this post on Instagram
ಸಿಎಲ್ಪಿ ಸಭೆ ಬಳಿಕ ಖಾಸಗಿ ಹೋಟೆಲ್ನಲ್ಲಿ ಕೇಕ್ ಕತ್ತರಿಸಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬರ್ತ್ ಡೇ ಆಚರಣೆಯಲ್ಲಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ