ನವದೆಹಲಿ: ಕರ್ನಾಟಕ ನೂತನ ಸಿಎಂ (new CM of Karnataka) ಆಯ್ಕೆ ಕಗ್ಗಂಟು ಮತ್ತಷ್ಟು ಜಟಿಲವಾಗುತ್ತಿದೆ. ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಹೈಕಮಾಂಡ್ (Congress High Command) ಮಾತಿಗೂ ಜಗ್ಗುತ್ತಿಲ್ಲ, ಬಗ್ಗುತ್ತಿಲ್ಲ. ಇಂದು ದೆಹಲಿಯಲ್ಲಿ (Delhi) ಮೀಟಿಂಗ್ ಮೇಲೆ ಮೀಟಿಂಗ್ ನಡೆದಿದೆ. ಆದರೂ ಇಬ್ಬರೂ ತಮ್ಮ ಪಟ್ಟು ಸಡಿಲಿಸುತ್ತಿಲ್ಲ. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಡಿಕೆಶಿ ಜೊತೆ ತಮ್ಮ ನಿವಾಸದಲ್ಲಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್, “ಸಿದ್ದರಾಮಯ್ಯ ಜೊತೆ ಯಾವುದೇ ಕಾರಣಕ್ಕೂ ಅಧಿಕಾರ ಹಂಚಿಕೆ ಇಲ್ಲ, ಸಿಎಂ ಸ್ಥಾನ ಬಿಟ್ಟುಕೊಡುವ ಮಾತೇ ಇಲ್ಲ” ಎಂದಿದ್ದಾರೆ ಅಂತ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಪರೋಕ್ಷ ವಾಗ್ದಾಳಿ
ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷವಾಗಿ ಕಿಡಿ ಕಾರಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಜೊತೆಗಿನ ಮಾತುಕತೆ ವೇಳೆ, ಮುಖ್ಯಮಂತ್ರಿ ಸ್ಥಾನವನ್ನು ಕೆಲವರು ತಮ್ಮ ಪೂರ್ವಜರ ಆಸ್ತಿ ಎಂದು ಭಾವಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಅವರ ಜೊತೆ ಅಧಿಕಾರ ಹಂಚಿಕೆ ಇಲ್ಲ ಅಂತ ಖಡಾಖಂಡಿತವಾಗಿ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗಬೇಕು!
ಶಾಸಕರ ಅಭಿಪ್ರಾಯ ಏನೇ ಇರಲಿ, ಕೆಪಿಸಿಸಿ ಅಧ್ಯಕ್ಷರಾದ ವೇಳೆ ಅವರ ಸಾರಥ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಅವರನ್ನೇ ಸಿಎಂ ಮಾಡುವುದು ಕಾಂಗ್ರೆಸ್ ಸಂಪ್ರದಾಯ ಎಂದಿದ್ದಾರೆ. ಎಸ್.ಎಂ. ಕೃಷ್ದ ಕೆಪಿಸಿಸಿ ಅಧ್ಯಕ್ಷರಾದ ವೇಳೆ ಇದೇ ಮಾದರಿಯನ್ನು ಅನುಸರಿಸಲಾಗಿತ್ತು. ಇದೇ ಮಾದರಿಯನ್ನು ಇಲ್ಲಿಯೂ ಅನುಸರಿಸುವಂತೆ ಡಿಕೆಶಿ ಒತ್ತಡ ಹೇರಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: Karnataka CM: ದೆಹಲಿಯಲ್ಲಿ ಮೀಟಿಂಗ್ ಮೇಲೆ ಮೀಟಿಂಗ್! ಇಂದು ಸಂಜೆ ಸಿಎಂ ಹೆಸರು ಘೋಷಣೆ?
ಸಿಎಂ ಸ್ಥಾನ ಕೊಟ್ಟವರಿಗೆ ಇನ್ನು ಎಷ್ಟು ಬಾರಿ ಕೊಡುತ್ತೀರಿ?
ಸಿದ್ದರಾಮಯ್ಯ ತಮಗೆ ಹೆಚ್ಚು ಶಾಸಕರ ಬೆಂಬಲ ಇದೆ ಎಂದು ಮಾಧ್ಯಮ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಸಭೆಗೂ ಮೊದಲೆ ನಾನೇ ಸಿಎಂ ಎಂದು ಬಿಂಬಿಸಿಕೊಂಡಿದ್ದಾರೆ. ಅಲ್ಲದೇ ಕೆಲ ಶಾಸಕರ ಪ್ರತ್ಯೇಕ ಸಭೆ ನಡೆಸಿದ್ದಾರೆ. ಆದರೆ ವಾಸ್ತವ ಚಿತ್ರಣ ಬೇರೆ ಇದೆ ಅಂತ ಡಿಕೆಶಿ ಖರ್ಗೆಯವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.
ನಾನು ಸಿಎಂ ಹುದ್ದೆ ಬಿಟ್ಟು ಕೊಡಲು ಸಾಧ್ಯವೇ ಇಲ್ಲ ಎಂದು ಡಿಕೆಶಿ ಪಟ್ಟು ಹಿಡಿದ್ದಾರೆ ಎನ್ನಲಾಗಿದೆ. ನನಗೆ ಸಿಎಂ ಹುದ್ದೆ ಬೇಕೆ ಬೇಕು, ಸಿಎಂ ಹುದ್ದೆ ಬಿಟ್ಟು ಕೊಡುವ ಮಾತೇ ಇಲ್ಲ. ಇದು ನನ್ನ ಮರ್ಯಾದೆ ಪ್ರಶ್ನೆ. ಇದುವರೆಗೆ ಏನೆಲ್ಲ ನೋವು ಅನುಭವಿಸಿದ್ದೇನೆ, ಅಭ್ಯರ್ಥಿಗಳಿಗೆ ಆರ್ಥಿಕ ಸಹಾಯ ಮಾಡದೇ ಹೋಗದಿದ್ದರೆ ನೂರು ಸೀಟು ಬರುತ್ತಿರಲಿಲ್ಲ ಅಂತ ಸಿಟ್ಟಿನಿಂದಲೇ ಮಲ್ಲಿಕಾರ್ಜುನ್ ಖರ್ಗೆ ಮುಂದೆ ಡಿಕೆಶಿ ಹೇಳಿದ್ದಾರೆ.
ಇಂದು ಸಂಜೆ ಸಿಎಂ ಹೆಸರು ಘೋಷಣೆ?
ಕರ್ನಾಟಕ ಸಿಎಂ ಆಯ್ಕೆ ವಿಚಾರಕ್ಕೆ ಕುರಿತಂತೆ ಇದೀಗ ಸೋನಿಯಾ ಗಾಂಧಿ ನಿವಾಸದಲ್ಲಿ ಮಹತ್ವದ ಮೀಟಿಂಗ್ ಇದ್ಯಂತೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಆಯ್ಕೆ ಬಗ್ಗೆ ಚರ್ಚಿಸಲಾಗುತ್ತದೆ. ಇಂದು ರಾತ್ರಿ ಒಳಗೆ ಕರ್ನಾಟಕ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: BJP Defeat: ಬಿಜೆಪಿ ಹೀನಾಯ ಸೋಲಿಗೆ ಕಾರಣಗಳೇನು? ಅತಿ ವಿಶ್ವಾಸವೋ, 40 ಪರ್ಸೆಂಟ್ ಆರೋಪವೋ?
ನಾಳೆ ಬೆಂಗಳೂರಿನಲ್ಲಿ ಶಾಸಕಾಂಗ ಸಭೆ
ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡನೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಶಾಸಕರ ಸಹಿ ಪಡೆದು, ಶಾಸಕಾಂಗ ಪಕ್ಷದ ನಾಯಕರಿಂದ ಹಕ್ಕು ಮಂಡನೆ ಮಾಡಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ