HOME » NEWS » State » DK SHIVAKUMAR TAKING OATH AS KPCC PRESIDENT ON MAY 31 IN BANGALORE SCT

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್​

ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿ ಮುಂಭಾಗದಲ್ಲೇ ಸರಳ ಕಾರ್ಯಕ್ರಮದಲ್ಲಿ ಮೇ 31ರಂದು ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

news18-kannada
Updated:May 15, 2020, 7:56 PM IST
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್​
ಡಿ.ಕೆ. ಶಿವಕುಮಾರ್
  • Share this:
ಬೆಂಗಳೂರು (ಮೇ 15): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಮಾರ್ಚ್​ 11ರಂದು ಕಾಂಗ್ರೆಸ್ ಹೈಕಮಾಂಡ್​ ನೇಮಕ ಮಾಡಿತ್ತು. ಕೆಪಿಸಿಸಿ ನೂತನ ಸಾರಥಿಯಾಗಿ ನೇಮಕಗೊಂಡಿರುವ ಡಿಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಮೇ 31ರಂದು ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

15 ಕ್ಷೇತ್ರಗಳ ಉಪಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್​ಗೆ ಭಾರೀ ಹಿನ್ನಡೆಯಾಗಿತ್ತು. ಇದಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ನೇಮಕ ಮಾಡಿತ್ತು. ಈ ಸ್ಥಾನಕ್ಕೆ ಕೆ.ಎಚ್​. ಮುನಿಯಪ್ಪ, ಎಂ.ಬಿ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಹೆಸರು ಕೇಳಿಬಂದಿತ್ತು. ಆದರೆ, ಎಐಸಿಸಿ ನಾಯಕರು ಅಂತಿಮವಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿಂದು ದಾಖಲೆಯ 69 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 1,056ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಸಂಕಷ್ಟ ಎದುರಾಗಿರುವುದರಿಂದ ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿ ಮುಂಭಾಗದಲ್ಲೇ ಸರಳ ಕಾರ್ಯಕ್ರಮದಲ್ಲಿ ಮೇ 31ರಂದು ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನೊಣವಿನಕೆರೆ ಅಜ್ಜಯ್ಯನ ಆಶೀರ್ವಾದದಂತೆ ಮೇ 31ರಂದು ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ ನೆರವೇರಲಿದೆ. ಆಯ್ದ 60 ಗಣ್ಯರಿಗಷ್ಟೇ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುವುದು. ಆಹ್ವಾನಿತರಿಗೆ ಮಾತ್ರ ಪಾಸ್ ನೀಡಲು ಕೆಪಿಸಿಸಿ ನಿರ್ಧಾರ ಮಾಡಿದೆ ಎಂದು ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
First published: May 15, 2020, 7:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories