ಬೆಂಗಳೂರು (ಜು. 1): ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿ 4 ತಿಂಗಳಾಗಿದೆ. ಆದರೆ, ಅದೇ ವೇಳೆ ಲಾಕ್ಡೌನ್ ಘೋಷಣೆಯಾದ ಕಾರಣದಿಂದ ಅವರ ಅಧಿಕಾರ ಸ್ವೀಕಾರ ಸಮಾರಂಭ ನಡೆಸಲು ಅನುಮತಿ ಸಿಕ್ಕಿರಲಿಲ್ಲ. ಆದರೆ, ಕೊನೆಗೂ ಡಿ.ಕೆ. ಶಿವಕುಮಾರ್ ಪದಗ್ರಹಣಕ್ಕೆ ಸಮಯ ಕೂಡಿಬಂದಿದ್ದು, ನಾಳೆ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡುವ ಸಮಾರಂಭ ಮೂರು ಬಾರಿ ಮುಂದೂಡಿಕೆಯಾಗಿತ್ತು. ಕೊನೆಗೂ ನಾಳೆ ಅಧಿಕೃತ ಮುಹೂರ್ತ ಫಿಕ್ಸ್ ಆಗಿದ್ದು, ವಿನೂತನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಕೆಪಿಸಿಸಿ ಹೊಸ ಕಚೇರಿಯಲ್ಲಿ ಸಮಾರಂಭ ನಡೆಯಲಿದೆ. ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡುವ ಸಮಾರಂಭ ರಾಜ್ಯದ 7,800 ಗ್ರಾಮ ಪಂಚಾಯ್ತಿಗಳಲ್ಲಿ ನೇರಪ್ರಸಾರವಾಗಲಿದೆ. ನೇರ ಪ್ರಸಾರಕ್ಕೆ ಕಾಂಗ್ರೆಸ್ ಮುಖಂಡರು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕೊರೋನಾದಿಂದಾಗಿ ಕಾರ್ಯಕ್ರಮ ಸರಳವಾಗಿ ನಡೆಯಲಿದೆ.
ಇದನ್ನೂ ಓದಿ: Coronavirus Vaccine: ಕೊರೋನಾಗೆ ಆಯುರ್ವೇದ ಔಷಧ ಕಂಡುಹಿಡಿದ ಡಾ. ಗಿರಿಧರ ಕಜೆ; ಬೆಂಗಳೂರಿನಲ್ಲಿ ವೈದ್ಯಕೀಯ ಪ್ರಯೋಗ ಯಶಸ್ವಿ
ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ 150 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಕೇವಲ ಹಿರಿಯ ಮುಖಂಡರಿಗಷ್ಟೇ ಅವಕಾಶ ಕಲ್ಪಿಸಲಾಗಿದ್ದು, ಕಾರ್ಯಕರ್ತರು, ಬೆಂಬಲಿಗರಿಗೆ ಪ್ರವೇಶವಿಲ್ಲ. ಈಗಾಗಲೇ ಡಿಕೆಶಿ ಕೂಡ ಹೆಚ್ಚು ಜನರು ಬರದಂತೆ ಮನವಿ ಮಾಡಿಕೊಂಡಿದ್ದಾರೆ.
ನಾಳಿನ ಕಾರ್ಯಕ್ರಮದಲ್ಲಿ ಕರ್ನಾಟಕದ ಹೊರಗಿನಿಂದ 7 ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೇರಳದ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತಾಲ್, ಕೇರಳ ಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್, ಸೀಮಾಂಧ್ರದ ಸಾಕೆ ಶೈಲಜನಾಥ್, ಉತ್ತಮ್ ಕುಮಾರ್ ರೆಡ್ಡಿ ನಾಳೆಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಇದನ್ನೂ ಓದಿ: Karnataka Dams Water Level: ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ...
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ