ಬೆಂಗಳೂರು: ಸಿದ್ದರಾಮಯ್ಯ (CM Siddaramaia) ಅವರೇ ಪೂರ್ಣಾವಧಿಗೆ ಸಿಎಂ ಆಗಿರ್ತಾರೆ ಎಂಬ ಸಚಿವ ಎಂಬಿ ಪಾಟೀಲ್ (Minister MB Patil) ಹೇಳಿಕೆ ಕಾಂಗ್ರೆಸ್ನಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಗೆ ಡಿಕೆ ಸೋದರರು (DK Brothers) ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ತೀಕ್ಷ್ಣವಾಗಿ ಮಾತನಾಡಬಲ್ಲೆ. ನಾನು ಸಚಿವರ ಹೇಳಿಕೆಗೆ ಉತ್ತರ ಕೊಡಬಲ್ಲೆ ಎಂಬುದನ್ನು ಎಂ.ಬಿ.ಪಾಟೀಲ್ ಅವರಿಗೆ ಹೇಳಿ ಎಂದು ಸಂಸದ ಡಿಕೆ ಸುರೇಶ್ (MP DK Suresh) ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಎಂಬಿ ಪಾಟೀಲ್ ಹೇಳಿಕೆ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕು ಅಂದ್ರೆ ನೀವೇ ರಣ್ದೀಪ್ ಸುರ್ಜೇವಾಲ ಹತ್ತಿರ ಮಾತನಾಡಿ. ಎಂಬಿ ಪಾಟೀಲ್ಗೆ ಹೇಳಿ ಇದೆಲ್ಲ ಬೇಡ ಎಂದು ನೇರವಾಗಿ ಎಚ್ಚರಿಕೆ ಸಂದೇಶವನ್ನು ರವಾನಿಸಿದರು.
ಡಿಕೆ ಶಿವಕುಮಾರ್ ಕೆಂಡಾಮಂಡಲ
ಮಾಧ್ಯಮಗಳ ಮುಂದೆ ಹೀಗೆಲ್ಲಾ ಬಹಿರಂಗ ಹೇಳಿಕೆ ನೀಡೋದಾದ್ರೆ ಸರ್ಕಾರ ನಡೆಸೋದು ಕಷ್ಟ ಆಗುತ್ತದೆ. ಇದು ಹೀಗೆ ಮುಂದುವರಿದ್ರೆ ನನಗೆ ಸರ್ಕಾರದಲ್ಲಿ ಯಾವ ಹುದ್ದೆಯೂ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದರು.
ಇದನ್ನೂ ಓದಿ: Arun Kumar Puthila: ಕರಾವಳಿಯಲ್ಲಿ ಬಿಜೆಪಿಗೆ ಕಂಟಕವಾಗುತ್ತಾ ಪುತ್ತಿಲ ನಡೆ? RSSಗೇ ಶಾಕ್ ಕೊಟ್ಟ ಹಿಂದೂ ಮುಖಂಡ
ಎಂಬಿ ಪಾಟೀಲ್ ಹೇಳಿದ್ದೇನು?
ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆ ಬಳಿಕ ರಾಜ್ಯದ ಸಿಎಂ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ