• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಡ್ರಗ್ಸ್‌ ಹಗರಣದಲ್ಲಿ ಆಡಲಿತ ವೈಫಲ್ಯವನ್ನು ಮುಚ್ಚಿಹಾಕಲು ವಿರೋಧ ಪಕ್ಷದ ಮೇಲೆ ಸುಳ್ಳ ಆರೋಪ ಮಾಡಬೇಡಿ; ಸಿದ್ದರಾಮಯ್ಯ

ಡ್ರಗ್ಸ್‌ ಹಗರಣದಲ್ಲಿ ಆಡಲಿತ ವೈಫಲ್ಯವನ್ನು ಮುಚ್ಚಿಹಾಕಲು ವಿರೋಧ ಪಕ್ಷದ ಮೇಲೆ ಸುಳ್ಳ ಆರೋಪ ಮಾಡಬೇಡಿ; ಸಿದ್ದರಾಮಯ್ಯ

ಸಿದ್ದರಾಮಯ್ಯ.

ಸಿದ್ದರಾಮಯ್ಯ.

ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಇದನ್ನು ಕರ್ನಾಟಕ ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು (ಸೆಪ್ಟೆಂಬರ್‌ 11); ಪ್ರಸ್ತುತ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್‌ ಜಾಲ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಬಂಧಿತ ಎಲ್ಲಾ ಆರೋಪಿಗಳು ಬಿಜೆಪಿ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂಬುದು ಕಾಂಗ್ರೆಸ್‌ ಆರೋಪವಾದರೆ, ಬಿಜೆಪಿ ಸಹ ಇದೇ ರೀತಿಯ ಆರೋಪವನ್ನು ಮುಂದಿಡುತ್ತಿದೆ. ಈ ಸಂಬಂಧ ಇಂದು ಸರಣಿ ಟ್ವೀಟ್‌ ಮೂಲಕ ಬಿಜೆಪಿ ಮತ್ತು ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, "ಯಡಿಯೂರಪ್ಪನವರೇ ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ" ಎಂದು ಹೇಳುವ ಮೂಲಕ ಆಡಳಿತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಡ್ರಗ್ಸ್‌ ಜಾಲಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷದ ವಿರುದ್ಧ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿರುವ ಸಿದ್ದರಾಮಯ್ಯ, "ಯಡಿಯೂರಪ್ಪನವರೇ ಡಿ.ಜೆ. ಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ,
ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿ ಬಿಟ್ಟು ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ. ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ?" ಎಂದು ಆಕ್ರೋಶ ಹೊರಹಾಕಿದ್ದಾರೆ.


ಮತ್ತೊಂದು ಟ್ವೀಟ್‌ನಲ್ಲಿ, "ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ.


ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ ಮುಖ್ಯಮಂತ್ರಿ ಅವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು." ಎಂದು ಒತ್ತಾಯಿಸಿದ್ದಾರೆ.


"ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಇದನ್ನು ಕರ್ನಾಟಕ ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತದೆ.


ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ ಕರ್ನಾಟಕದ ಬಿಜೆಪಿ ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೋನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ" ಎಂದು ಆರೋಪಿಸಿದ್ದಾರೆ.


ಇದೇ ಸಂದರ್ಭದಲ್ಲಿ ಡ್ರಗ್ಸ್‌ ಆರೋಪಿಗಳ ಜೊತೆಗೆ ರಾಜಕಾರಣಿಗಳ ಪೋಟೋ ಹಾಕಿ ಹಗರಣದ ಜೊತೆ ಅವರ ಹೆಸರನ್ನು ಥಳಕು ಹಾಕುವುದರ ವಿರುದ್ಧವೂ ಮಾತನಾಡಿರುವ ಸಿದ್ದರಾಮಯ್ಯ, "ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ. ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ. ಆದರೆ, ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ಹಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ" ಎಂದು ಎಲ್ಲಾ ಪಕ್ಷಗಳಿಗೂ ಕಿವಿಮಾತು ಹೇಳಿದ್ದಾರೆ.

top videos
    First published: