Doctors Strike: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ರಾಜ್ಯದಲ್ಲೂ ಖಾಸಗಿ ಆಸ್ಪತ್ರೆಗಳ ಓಪಿಡಿಗಳು ಬಂದ್

ದೇಶಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಕರ್ನಾಟಕದ ಖಾಸಗಿ ಆಸ್ಪತ್ರೆಗಳ ವೈದ್ಯರೂ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಯಾವ ವೈದ್ಯರೂ ರಜೆ ತೆಗೆದುಕೊಳ್ಳದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಕಟ್ಟಪ್ಪಣೆ ಹೊರಡಿಸಲಾಗಿದೆ.

Sushma Chakre | news18
Updated:June 17, 2019, 8:30 AM IST
Doctors Strike: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ರಾಜ್ಯದಲ್ಲೂ ಖಾಸಗಿ ಆಸ್ಪತ್ರೆಗಳ ಓಪಿಡಿಗಳು ಬಂದ್
ಬಂಗಾಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು
  • News18
  • Last Updated: June 17, 2019, 8:30 AM IST
  • Share this:
ಬೆಂಗಳೂರು (ಜೂ.17): ಪಶ್ಚಿಮ ಬಂಗಾಳದ ಕೋಲ್ಕತದಲ್ಲಿ ಇತ್ತೀಚೆಗೆ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಅಲ್ಲಿನ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲ ಸೂಚಿಸಿ ಹಾಗೂ ವೈದ್ಯರ ಸುರಕ್ಷತೆಗೆ ಸಂಬಂಧಿಸಿದಂತೆ ಕೆಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಸ್ಥೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಈ ಮುಷ್ಕರಕ್ಕೆ ರಾಜ್ಯದಲ್ಲೂ ಖಾಸಗಿ ಆಸ್ಪತ್ರೆಗಳು ಬೆಂಬಲ ಸೂಚಿಸಿದ್ದು, ಇಂದು ಬೆಳಗ್ಗೆ 6ರಿಂದ ನಾಳೆ ಬೆಳಗ್ಗೆ 6ರವರೆಗೆ ಖಾಸಗಿ ಆಸ್ಪತ್ರೆಗಳ ಓಪಿಡಿಗಳು ಬಂದ್​ ಆಗಲಿವೆ. ಸರ್ಕಾರಿ ಆಸ್ಪತ್ರೆಗಳು ಎಂದಿನಂತೆ ತೆರೆದಿರಲಿವೆ.

ದೇಶಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಕರ್ನಾಟಕದ ವೈದ್ಯರೂ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಯಾವ ವೈದ್ಯರೂ ರಜೆ ತೆಗೆದುಕೊಳ್ಳದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಕಟ್ಟಪ್ಪಣೆ ಹೊರಡಿಸಲಾಗಿದೆ. ರಾಜ್ಯದ ಖಾಸಗಿ ಆಸ್ಪತ್ರೆಗಳು 24 ಗಂಟೆಗಳ ಕಾಲ ಓಪಿಡಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ. ಹೀಗಾಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ವೈದ್ಯರಿರುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಸಿಎಂ ಮಮತಾ ಜೊತೆ ಮಾತುಕತೆಗೆ ಸಿದ್ಧ ಎಂದ ವೈದ್ಯರು: ಮುಷ್ಕರ ಕೈಬಿಡುವ ಸಾಧ್ಯತೆ

ಧಾರವಾಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ ಆಗಿದ್ದು, ಇಂದು ಸಂಜೆ 6ರವರೆಗೆ ಮುಚ್ಚಿರಲಿದೆ. ಪಶ್ಚಿಮ ಬಂಗಾಳದ ವೈದ್ಯರ ಮುಷ್ಕರಕ್ಕೆ ಜಿಲ್ಲೆಯ 40 ಖಾಸಗಿ ಆಸ್ಪತ್ರೆಗಳ ಓಪಿಡಿಗಳನ್ನು ಬಂದ್​ ಮಾಡಿ ಬೆಂಬಲ ನೀಡಲಾಗಿದೆ ಎಂದು ಐಎಂಎ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಅಶ್ವಿನ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ. ಇಂದು ತುಮಕೂರು ‌ಜಿಲ್ಲೆಯಲ್ಲಿ‌ ಎಲ್ಲಾ ಖಾಸಗಿ ಆಸ್ಪತ್ರೆಗಳು ಬಂದ್ ಆಗಲಿದ್ದು, ಎಂದಿನಂತೆ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿವೆ. ವೈದ್ಯರು ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದು, ಯಾವುದೇ ಪ್ರತಿಭಟನೆ ನಡೆಸದಿರಲು ನಿರ್ಧರಿಸಿದ್ದಾರೆ. ಹಾಗೇ, ಕೊಡಗು, ಬಳ್ಳಾರಿ, ತುಮಕೂರು, ಬೆಳಗಾವಿ, ಹುಬ್ಬಳ್ಳಿ, ಬಾಗಲಕೋಟೆ, ಉಡುಪಿ, ಹಾಸನ, ಮಂಡ್ಯದಲ್ಲೂ ಖಾಸಗಿ ಆಸ್ಪತ್ರೆಗಳ ಓಪಿಡಿಗಳು ಬಂದ್​ ಆಗಿವೆ.

ಸರ್ಕಾರಿ ಆಸ್ಪತ್ರೆಗಳು ಯಾವುದೇ ಸಂಧರ್ಭದಲ್ಲಿ ಚಿಕಿತ್ಸೆ ನೀಡಲು ಸಿದ್ದವಾಗಿದೆ ಎನ್ನುವ ವಿಚಾರ ಹಾಗೂ ಉತ್ತರ ಪ್ರದೇಶದಲ್ಲಿ ವೈದ್ಯರ ಧರಣಿ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಸರ್ಕಾರಿ ಆಸ್ಪತ್ರೆಗಳಿಗೆ ಸವಾಲ್​ ಹಾಕಿವೆ. ಇಂದು ಎಲ್ಲಾ ಖಾಸಗಿ ಆಸ್ಪತ್ರೆಗಳ ಓಪಿಡಿಗಳು ಬಂದ್ ಆಗಲಿದ್ದು, ನೆಲಮಂಗಲದ 6 ಆಸ್ಪತ್ರೆಗಳ ಓಪಿಡಿ ಹಾಗೂ 50ಕ್ಕೂ ಹೆಚ್ಚು ಕ್ಲಿನಿಕ್​ಗಳು ಬಂದ್ ಆಗಲಿವೆ ಎಂದು ನೆಲಮಂಗಲ ತಾಲೂಕು ಐಎಂಎ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್ ಮಾಹಿತಿ ನೀಡಿದ್ದಾರೆ.

ನಿಮ್ಮ ಬೇಡಿಕೆಗಳಿಗೆ ಒಪ್ಪಿಗೆ ಇದೆ, ಪ್ರತಿಭಟನೆ ನಿಲ್ಲಿಸಿ: ವೈದ್ಯರಿಗೆ ಮಮತಾ ಬ್ಯಾನರ್ಜಿ ಮನವಿ

ಮುಷ್ಕರಕ್ಕೆ ಕಾರಣವೇನು?:ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎನ್‌ಆರ್‌ಎಸ್‌ ಮೆಡಿಕಲ್ ಕಾಲೇಜಿನಲ್ಲಿ ಸಾವಿಗೀಡಾದ ರೋಗಿಯೊಬ್ಬರ ಸಂಬಂಧಿಕರು ಆ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಇಬ್ಬರು ಕಿರಿಯ ವೈದ್ಯರಿಗೆ ಗಂಭೀರ ಗಾಯಗಳಾಗಿತ್ತು. ಈ ಹಲ್ಲೆಯನ್ನು ಖಂಡಿಸಿ 6 ದಿನಗಳಿಂದ ಪಶ್ಚಿಮ ಬಂಗಾಳದಲ್ಲಿ ಕಿರಿಯ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಆ ಮುಷ್ಕರಕ್ಕೆ ಮಹಾರಾಷ್ಟ್ರ, ಹೈದರಾಬಾದ್​ ಮುಂತಾದ ಭಾಗಗಳಲ್ಲೂ ವೈದ್ಯರು ಬೆಂಬಲ ಸೂಚಿಸಿದ್ದರು. ಇಂದು ಐಎಂಎ ಘೋಷಿಸಿರುವ ದೇಶವ್ಯಾಪಿ ಮುಷ್ಕರಕ್ಕೆ ಕರ್ನಾಟಕದ ಖಾಸಗಿ ಆಸ್ಪತ್ರೆಗಳೂ ಬೆಂಬಲ ವ್ಯಕ್ತಪಡಿಸಿವೆ. ಸೇವ್ ಡಾಕ್ಟರ್ಸ್​ ಎಂಬ ಅಭಿಯಾನಕ್ಕೆ ರಾಜ್ಯದ ವೈದ್ಯರೂ ಜೊತೆಯಾಗಲಿದ್ದಾರೆ.

 

First published:June 17, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ