• Home
  • »
  • News
  • »
  • state
  • »
  • Minister Sudhakar: ತುರ್ತು ಚಿಕಿತ್ಸೆಗೆ ಯಾವ ದಾಖಲೆಯೂ ಮುಖ್ಯವಲ್ಲ, ಅಮಾನವೀಯವಾಗಿ ನಡೆದುಕೊಂಡ್ರೆ ವಜಾ- ಸುಧಾಕರ್

Minister Sudhakar: ತುರ್ತು ಚಿಕಿತ್ಸೆಗೆ ಯಾವ ದಾಖಲೆಯೂ ಮುಖ್ಯವಲ್ಲ, ಅಮಾನವೀಯವಾಗಿ ನಡೆದುಕೊಂಡ್ರೆ ವಜಾ- ಸುಧಾಕರ್

ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ ಎಂದು ಸುಧಾಕರ್​ ಹೇಳಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ಬೆಂಗಳೂರು (ನ.04): ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೊಂದಿಗೆ ಚರ್ಚಿಸಲಾಗುವುದು. ಮುಂದಿನ ಅಧಿವೇಶನದಲ್ಲೇ (Session) ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ (Medical Education) ಸಚಿವ ಡಾ.ಕೆ. ಸುಧಾಕರ್‌ (Sudhakar) ತಿಳಿಸಿದ್ದಾರೆ.


ಸರ್ಕಾರದಿಂದಲೇ 5 ಲಕ್ಷ ರೂ. ಎಫ್‌ಡಿ


ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್​ ಅವರು, ನತದೃಷ್ಟ ಹೆಣ್ಣುಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ಸರ್ಕಾರದಿಂದಲೇ 5 ಲಕ್ಷ ರೂ. ಎಫ್‌ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು.


ಜಿಲ್ಲಾ ಸರ್ಜನ್​ಗೆ ಕಾರಣ ಕೇಳಿ ನೋಟಿಸ್​


ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್​ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್‌ ನೋಟಿಸ್‌ ನೀಡಿ 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.


Strict instructions for control of infectious diseases from Health Minister Sudhakar
ಸಚಿವ ಸುಧಾಕರ್​


ತುರ್ತು ಪರಿಸ್ಥಿತಿಯಲ್ಲಿ ಯಾವ ದಾಖಲೆಗಳೂ ಮುಖ್ಯವಲ್ಲ


ಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ ಎಂದರು.


ಕರಾಳ ಘಟನೆ


ಎಲ್ಲಾ ಸೌಲಭ್ಯಗಳು ಇದ್ದರೂ, ಆರೋಗ್ಯ ಸಿಬ್ಬಂದಿ ಮಾಡಿದ ಕೆಲಸದಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಇದು ಇಡೀ ಮಾನವ ಸಂಕುಲಕ್ಕೆ ಕರಾಳ ದಿನವಾಗಿದೆ. ಇದಕ್ಕಾಗಿ ನಾನು ಬಹಳ ವಿಷಾದ, ಸಹಾನುಭೂತಿ ವ್ಯಕ್ತಪಡಿಸುತ್ತೇನೆ ಎಂದರು.


ಬಾಣಂತಿ ಸಂಬಂಧಿಕರು ಪತ್ತೆಗೆ ಹರಸಾಹಸ


ಈ ಕುಟುಂಬದ ಸಂಬಂಧಿಕರನ್ನು ಪತ್ತೆ ಮಾಡಲು 36 ಗಂಟೆಗಳಿಂದ ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಯಾರೂ ಇನ್ನೂ ಮುಂದೆ ಬಂದಿಲ್ಲ. ಇಂತಹ ಪರಿಸ್ಥಿತಿ ಇದ್ದರೂ, ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದರು.


ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು. ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ: Chandrashekar Death: ಆಶ್ರಮಕ್ಕೆ ಬಂದ ಚಂದ್ರಶೇಖರ್​ಗೆ ವಿನಯ್​ ಗುರೂಜಿ ಹೇಳಿದ್ದೇನು? ಸಾವಿನ ಬಗ್ಗೆ ಸುಳಿವು ಕೊಟ್ಟಿದ್ರಾ ಅವಧೂತರು?


ಬಹಿರಂಗ ಸವಾಲು


ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ಜಿಲ್ಲೆಯಲ್ಲಿ ಎಷ್ಟು ಶಿಶುಗಳು ಸತ್ತಿವೆ ಎಂದು ದಾಖಲೆ ನೀಡುತ್ತೇನೆ. ಆಗ ಸಿದ್ದರಾಮಯ್ಯನವರು ಅಥವಾ ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಲಿಲ್ಲ. ಇಂತಹ ವಿಚಾರದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರು ರಾಜಕೀಯ ನಾಯಕರು ಮಾತ್ರವಲ್ಲ, ಒಬ್ಬ ಉತ್ತಮ ಮಾನವನಾಗಲೂ ಸಾಧ್ಯವಿಲ್ಲ ಎಂದ್ರು. ಇಷ್ಟು ಕೆಳ ಹಂತಕ್ಕೆ ಹೋಗಿ ಅವರು ತೀರ್ಮಾನ ಮಾಡಬಾರದು. ಇದರಲ್ಲೂ ರಾಜಕೀಯ ಮಾಡಬಾರದು ಎಂದರು.


ಇದನ್ನೂ ಓದಿ: Renukacharya: ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್​ ಶವ ಪತ್ತೆ, ಕಾಲುವೆಯಲ್ಲಿ ಬಿದ್ದಿದ್ದ ಕಾರು


ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಎಷ್ಟು ಆಸ್ಪತ್ರೆಗಳಲ್ಲಿ ಎಷ್ಟು ಸಾವುಗಳಾಗಿವೆ ಎಂಬ ದಾಖಲೆಗಳನ್ನು ನೀಡುತ್ತೇನೆ. ಅವರು ಕೂಡ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ, ನಾನು ಕೂಡ ಆರೋಗ್ಯ ಸಚಿವನ ಸ್ಥಾನಕ್ಕೆ ನೀಡುತ್ತೇನೆ. ಇದು ಬಹಿರಂಗ ಸವಾಲು ಎಂದರು.

Published by:ಪಾವನ ಎಚ್ ಎಸ್
First published: