ಬೆಂಗಳೂರು (ಜುಲೈ 28); ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSP ಪಕ್ಷದ ಎಲ್ಲಾ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರನ್ನು ಕುಟುಕಿದ್ದಾರೆ.
ಈ ಹಿಂದೆ ಆಪರೇಷನ್ ಕಮಲದ ಮೂಲಕ ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿದ್ದ ಬಿಜೆಪಿ ಇದೀಗ ರಾಜಸ್ಥಾನದಲ್ಲೂ ಅದೇ ಕೆಲಸಕ್ಕೆ ಮುಂದಾಗಿದೆ. ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದೇ ಕಾರಣಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ನಿನ್ನೆಯಿಂದ ದೇಶದಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟಕ್ಕೆ ಮುಂದಾಗಿದೆ.
ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSPಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ?
1/7
— H D Kumaraswamy (@hd_kumaraswamy) July 28, 2020
ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ 'ಅಪರಾಧಿ'ಗಳೇ ಎಂದಿದ್ದಾರೆ.
ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ.ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ.ಇದರತ್ತ ಚರ್ಚೆಗಳಾದರೂ ನಡೆಯಲಿ.ಪ್ರಜಾಪ್ರಭುತ್ವ ಉಳಿಯಲಿ.
6/7
— H D Kumaraswamy (@hd_kumaraswamy) July 28, 2020
2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಹಾರದಲ್ಲಿ ಕಾಂಗ್ರೆಸ್ ನಿಪುಣ. 'ಕುದುರೆ ವ್ಯಾಪಾರ' ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್‌ನಿಂದ ಎಂದು ಟೀಕಿಸಿದ್ದಾರೆ.
ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು.ಸ್ವಾಮಿ,ಜೀವ ಅಮೂಲ್ಯ.ನೀವು ಪ್ರಾಣ ಕೊಡುವುದು ಬೇಡ.ಕಾಂಗ್ರೆಸ್ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ.ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ.ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ.
7/7
— H D Kumaraswamy (@hd_kumaraswamy) July 28, 2020
ಇದನ್ನೂ ಓದಿ : ಪಾಕಿಸ್ತಾನ, ಅಫ್ಘಾನಿಸ್ತಾನ, ನೇಪಾಳ ಜೊತೆಗೆ ಚೀನಾ ಜಂಟಿ ವರ್ಚುವಲ್ ಅಧಿವೇಶನ; ಭಾರತಕ್ಕೆ ಕಳವಳ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ