ರಾಜ್ಯ ಸಚಿವ ಸಂಪುಟ ಸೇರಲು ಆತುರವಿಲ್ಲ, ಸಿಎಂ ಯಡಿಯೂರಪ್ಪ ಕೊಟ್ಟ ಮಾತು ತಪ್ಪಲ್ಲ; ಮುನಿರತ್ನ

ಮಂತ್ರಿ ಮಂಡಲ ವಿಸ್ತರಣೆ ಅಥವಾ ಪುನರಚನೆ ಮಾಡುವುದು ಮುಖ್ಯಮಂತ್ರಿಗಳು, ವರಿಷ್ಠರಿಗೆ ಸಂಬಂಧಪಟ್ಟ ವಿಚಾರ. ಅವರು ಯಾವಾಗ ಮಾಡುತ್ತಾರೆ ಅಲ್ಲಿಯವರೆಗೂ ಕಾಯುತ್ತೇನೆ. ನಮ್ಮ ನಾಯಕರು ಯಾವುದೇ ಖಾತೆಯನ್ನು ಕೊಟ್ಟರು ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಮುನಿರತ್ನ ತಿಳಿಸಿದ್ದಾರೆ.

ಮುನಿರತ್ನ.

ಮುನಿರತ್ನ.

  • Share this:
ಬೆಂಗಳೂರು (ನವೆಂಬರ್​ 19): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತು ತಪ್ಪಲ್ಲ, ಅವರು ನಿಶ್ಚಿತವಾಗಿ ನನಗೆ ಸಚಿವ ಸ್ಥಾನ ನೀಡಲಿದ್ದಾರೆ. ಸಂಪುಟ ವಿಸ್ತರಣೆಗೆ ನನ್ನಿಂದ ಯಾವುದೇ ಆತುರವಿಲ್ಲ. ವಿಸ್ತರಣೆ ಮಾಡುವವರೆಗೂ ಕಾಯುತ್ತೇನೆ ಎಂದು ನೂತನ ಶಾಸಕ ಮುನಿರತ್ನ ಹೇಳಿದ್ದಾರೆ. ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ನೂತನ ಶಾಸಕ ಮುನಿರತ್ನ ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾದರು.ಚುನಾವಣೆ ಫಲಿತಾಂಶ ಬಂದ ನಂತರ ಕಟೀಲ್ ರನ್ನು ಭೇಟಿಯಾಗಿರದ ಮುನಿರತ್ನ ಇಂದು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಕೆಲಕಾಲ  ಮಾತುಕತೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, "ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರನ್ನು ಭೇಟಿಯಾಗಿದ್ದೇನೆ ಅವರಿಗೆ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆದಿದ್ದೇನೆ. ಅರುಣ್ ಕುಮಾರ್ ಅವರನ್ನು ಭೇಟಿ ಮಾಡಿದ್ದೇನೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಮುಂದಿನ ದಿನಗಳಲ್ಲಿ ಇಲ್ಲಿ ಪಕ್ಷವನ್ನು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಸಂಘಟನೆ ಮಾಡಿ ಪಕ್ಷವನ್ನು ನಮ್ಮ ಕ್ಷೇತ್ರದಲ್ಲಿ ಬೆಳೆಸುವ ಭರವಸೆಯನ್ನು ಅವರಿಗೆ ನೀಡಿದ್ದೇನೆ. ಬಿಜೆಪಿ ಶಾಸಕನಾಗಿ ಪ್ರಾಮಾಣಿಕವಾಗಿ ಸೇವೆ ಮಾಡುವುದಾಗಿ ನಮ್ಮ ಅಧ್ಯಕ್ಷರಿಗೆ ತಿಳಿಸಿದ್ದೇನೆ" ಎಂದಿದ್ದಾರೆ.

"ಸಚಿವ ಸಂಪುಟ ವಿಸ್ತರಣೆ ನಮ್ಮ ಪಕ್ಷಕ್ಕೆ, ಮುಖ್ಯಮಂತ್ರಿಗಳಿಗೆ ರಾಜ್ಯಾಧ್ಯಕ್ಷರಿಗೆ ಸೇರಿದ ವಿಷಯ. ಸಂಪುಟ ವಿಸ್ತರಣೆ ಸಂಬಂಧ ಅವರೇನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷದ ಒಬ್ಬ ಶಿಸ್ತಿನ ಸಿಪಾಯಿಯಾಗಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಸಂಪುಟ ವಿಸ್ತರಣೆ ಕುರಿತು ವರಿಷ್ಠರು ಏನುಬೇಕಾದರೂ ತೀರ್ಮಾನ ಮಾಡಬಹುದು. ನಾವು ಪಕ್ಷದಲ್ಲಿ ಕೆಲಸ ಮಾಡುತ್ತೇವೆ. ಆರ್. ಶಂಕರ್, ಎಂಟಿಬಿ ನಾಗರಾಜ್ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಲ್ಲರೂ ಒಟ್ಟಾಗಿ ಬಂದಿದ್ದರೂ ಕೂಡ ನಾನು ಪಕ್ಷದ ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ.

ಇದನ್ನೂ ಓದಿ : BTS 2020 - ತಂತ್ರಜ್ಞಾನವೇ ಭವಿಷ್ಯದ ಶಕ್ತಿ: ಬೆಂಗಳೂರು ಟೆಕ್ ಸಮಿಟ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ

ಮಂತ್ರಿ ಮಂಡಲ ವಿಸ್ತರಣೆ ಅಥವಾ ಪುನರಚನೆ ಮಾಡುವುದು ಮುಖ್ಯಮಂತ್ರಿಗಳು, ವರಿಷ್ಠರಿಗೆ ಸಂಬಂಧಪಟ್ಟ ವಿಚಾರ. ಅವರು ಯಾವಾಗ ಮಾಡುತ್ತಾರೆ ಅಲ್ಲಿಯವರೆಗೂ ಕಾಯುತ್ತೇನೆ. ನಮ್ಮ ನಾಯಕರು ಯಾವುದೇ ಖಾತೆಯನ್ನು ಕೊಟ್ಟರು ಅದನ್ನು ಒಪ್ಪಿಕೊಳ್ಳುತ್ತೇನೆ. ಅವರು ಏನು ತೀರ್ಮಾನಿಸಿದರೂ ಅದಕ್ಕೆ ನಾನು ಬದ್ಧನಿದ್ದೇನೆ. ಸಿಎಂ ಯಡಿಯೂರಪ್ಪ ಕೊಟ್ಟ ಮಾತನ್ನು ತಪ್ಪೋದಿಲ್ಲ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದ್ದಾರೆ ನನಗೆ ಸಚಿವ ಸ್ಥಾನ ನೀಡಲಿದ್ದಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಗೆಲ್ಲುವ ಕಾರ್ಯತಂತ್ರದ ಕುರಿತು ಪ್ರತಿಕ್ರಿಯೆ ನೀಡಿದ ಮುನಿರತ್ನ, ಚುನಾವಣೆ ಬಂದಾಗ ನಮ್ಮ ಪಕ್ಷದ ಕೆಲಸವನ್ನು ನಾವು ಮಾಡಲಿದ್ದೇವೆ. ಅವರವರ ಪಕ್ಷದ ಕೆಲಸವನ್ನು ಅವರು ಮಾಡುತ್ತಾರೆ ನಾನು ನನ್ನ ಕ್ಷೇತ್ರದ ಬಗ್ಗೆ ಮಾತ್ರ ಚರ್ಚೆ ಮಾಡುತ್ತೇನೆ ರಾಜ್ಯ, ನಗರ, ಲೋಕಸಭೆ ಬಗ್ಗೆ ನಾನು ಮಾತನಾಡುವುದಿಲ್ಲ ನಾನು ನನ್ನ ಕ್ಷೇತ್ರಕ್ಕೆ ಸೀಮಿತವಾಗಿ ಮಾತನಾಡುತ್ತೇನೆ ಎಂದರು.
Published by:MAshok Kumar
First published: