ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka assembly election) 135 ಸ್ಥಾನಗಳ ಭರ್ಜರಿ ಬಹುಮತ ಪಡೆದು ಅತಿ ದೊಡ್ಡ ಪಕ್ಷವಾಗಿ (largest party) ಹೊರಹೊಮ್ಮಿದ ಕಾಂಗ್ರೆಸ್ (Congress), ಇನ್ನೂ ಸರ್ಕಾರ ರಚನೆ ಮಾಡಿಲ್ಲ. ಫಲಿತಾಂಶ ಬಂದ ದಿನದಿಂದ ಸಿಎಂ ಯಾರಾಗಬೇಕು ಎಂಬ ಚರ್ಚೆಯಲ್ಲೇ ಸಮಯ ಕಳೆದಿದೆ. ಅಂತೂ ಇಂತೂ ಸಿದ್ದರಾಮಯ್ಯ (Siddaramaiah) ಅವರನ್ನು ಸಿಎಂ ಆಗಿ, ಡಿಕೆ ಶಿವಕುಮಾರ್ (DK Shivakumar) ಅವರನ್ನು ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಇದೀಗ ಹೊಸ ಸರ್ಕಾರ ರಚನೆಗೆ ರಾಜ್ಯಪಾಲರ ಎದುರು ಹಕ್ಕು ಮಂಡಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ (Dr. G Parameshwar) ಇಂದು ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದೆ.
ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಪರಮೇಶ್ವರ್
ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ ಎನ್ನುವುದು ಪಕ್ಕಾ ಆಗಿದೆ. ಶನಿವಾರ 12.30ಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ನಿಯೋಗವು ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಪರಮೇಶ್ವರ್, ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್‌ಗೆ ಸರ್ಕಾರ ರಚನೆ ಅವಕಾಶ ನೀಡಿ ಎಂದು ಹಕ್ಕು ಮಂಡಿಸಿದ್ದಾರೆ.
ಇದೇ ಶನಿವಾರ, ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಭರದ ಸಿದ್ಧತೆ ನಡೆಯುತ್ತಿದೆ. ಸಿಎಂ, ಡಿಸಿಎಂ ಜೊತೆಗೆ 20 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: Karnataka CM: ಮುಖ್ಯಮಂತ್ರಿಗಳ ಸಂಬಳ ಎಷ್ಟು? ಸಿಎಂ ಆಗಲು ಏನೆಲ್ಲಾ ಅರ್ಹತೆಗಳಿರಬೇಕು ಗೊತ್ತಾ?
ಪ್ರಮಾಣ ವಚನ ಸಮಾರಂಭಕ್ಕೆ ಘಟಾನುಘಟಿಗಳಿಗೆ ಆಹ್ವಾನ
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಮಾಣ ವಚನ ಸಮಾರಂಭಕ್ಕೆ ದೇಶದ ವಿವಿಧ ಪಕ್ಷಗಳ ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ ಅಂತ ಹೇಳಲಾಗುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರಿಗೆ ಖುದ್ದು ಮಲ್ಲಿಕಾರ್ಜುನ್ ಖರ್ಗೆ ಹಾಗೂ ಸಿದ್ದರಾಮಯ್ಯರೇ ದೂರವಾಣಿ ಕರೆ ಮಾಡಿ, ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ