ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡದ ಅಧ್ಯಯನ ವರದಿ ಬಂದ ಬಳಿಕ ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

“ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ನಿಧಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುದಾನದಿಂದ ಕಟ್ಟಡ ಪುನರ್ ನಿರ್ಮಾಣ ಅಥವಾ ದುರಸ್ತಿ ಮಾಡಲಾಗುವುದು. ಹಿಂದಿನ ಸರ್ಕಾರಗಳು ಈ ಬಗ್ಗೆ ಗಮನಹರಿಸಿಲ್ಲ. ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದರು.

ಸಚಿವ ಡಾ.ಕೆ.ಸುಧಾಕರ್

ಸಚಿವ ಡಾ.ಕೆ.ಸುಧಾಕರ್

 • Share this:
  ಮೈಸೂರು (ನವೆಂಬರ್ 11); ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಸತಿನಿಲಯ ಕಟ್ಟಡದ ಬಗ್ಗೆ ವರದಿ ನೀಡಲು ಇಂಜಿನಿಯರ್ ಗಳಿಗೆ ಸೂಚಿಸಿದ್ದು, ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

  ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಸತಿನಿಲಯ ಕಟ್ಟಡದ ಪರಿಶೀಲನೆ ನಡೆಸಿದ ಬಳಿ ಮಾತನಾಡಿದ ಅವರು, “ಇದು 58 ವರ್ಷದಷ್ಟು ಹಳೆಯ ಕಟ್ಟಡವಾಗಿದ್ದು, ವಿದ್ಯಾರ್ಥಿಗಳು ಶೋಚನೀಯ ಪರಿಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ದುಃಖವಾಗಿದೆ. ಇದನ್ನು ನವೀಕರಿಸಬೇಕೆ ಅಥವಾ ಹೊಸ ಕಟ್ಟಡ ನಿರ್ಮಿಸಬೇಕೆ ಎನ್ನುವ ಬಗ್ಗೆ ವರದಿ ನೀಡಲು ಇಂಜಿನಿಯರ್ ಗಳಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ತಕ್ಷಣ ಕ್ರಮ ಕೈಗೊಳ್ಳಲಾಗುವುದು” ಎಂದರು.

  ಇದನ್ನು ಓದಿ: ಹಸಿರು ಪಟಾಕಿ ಅಂದ್ರೇನು ಅಂತ ನನಗೆ ಗೊತ್ತಿಲ್ಲ: ಆರೋಗ್ಯ ಸಚಿವ ಡಾ.ಸುಧಾಕರ್ ಹೀಗಂದಿದ್ಯಾಕೆ?

  “ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ನಿಧಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುದಾನದಿಂದ ಕಟ್ಟಡ ಪುನರ್ ನಿರ್ಮಾಣ ಅಥವಾ ದುರಸ್ತಿ ಮಾಡಲಾಗುವುದು. ಹಿಂದಿನ ಸರ್ಕಾರಗಳು ಈ ಬಗ್ಗೆ ಗಮನಹರಿಸಿಲ್ಲ. ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದರು.

  “ಮೈಸೂರಿನಲ್ಲಿ ಕೊರೋನಾ ಪ್ರಕರಣ ಬಹಳ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಗತ್ಯವಿದ್ದರೆ ಮಾತ್ರ ಕೋವಿಡ್ ಕೇರ್ ಸೆಂಟರ್ ಮುಂದುವರಿಸಲಾಗುವುದು. ತಲಕಾಡಿನಲ್ಲಿ ನಡೆಯಲಿರುವ ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಿರುವ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಲಾಗುವುದು” ಎಂದು ತಿಳಿಸಿದರು.
  Published by:HR Ramesh
  First published: