ಬರ ಪೀಡಿತ ತಾಲೂಕುಗಳಿಗೆ ಅನುದಾನ ಬಿಡುಗಡೆ ಮಾಡಿದ ಸರ್ಕಾರ

ರಾಜ್ಯದಲ್ಲಿ ಒಟ್ಟು 162 ತಾಲೂಕುಗಳು ಬರ ಪೀಡಿತ ತಾಲೂಕುಗಳಾಗಿವೆ. ಮುಂಬರುವ ಬೇಸಿಗೆ ಸಮಯದಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ತೀವ್ರವಾಗಿದೆ

G Hareeshkumar | news18
Updated:February 12, 2019, 10:53 PM IST
ಬರ ಪೀಡಿತ ತಾಲೂಕುಗಳಿಗೆ ಅನುದಾನ ಬಿಡುಗಡೆ ಮಾಡಿದ ಸರ್ಕಾರ
ಸಾಂದರ್ಭಿಕ ಚಿತ್ರ
G Hareeshkumar | news18
Updated: February 12, 2019, 10:53 PM IST
- ಕೃಷ್ಣ ಜಿ.ವಿ

ಬೆಂಗಳೂರು (ಫೆ. 12) :  ರಾಜ್ಯ ಸರ್ಕಾರ ಬರ ಪೀಡಿತ ತಾಲೂಕುಗಳಿಗೆ ಬರ ಪರಿಹಾರದ ಹಣವಾಗಿ 162 ಕೋಟಿ ರೂಪಾಯಿ ಹಣವನ್ನು ಬರ ಪೀಡಿತ ತಾಲ್ಲೂಕುಗಳಿಗೆ ತಲಾ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಒಟ್ಟು 162 ತಾಲೂಕುಗಳು ಬರ ಪೀಡಿತ ತಾಲೂಕುಗಳಾಗಿವೆ. ಮುಂಬರುವ ಬೇಸಿಗೆ ಸಮಯದಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ತೀವ್ರವಾಗಿದೆ. ತುರ್ತು ಕುಡಿಯುವ ನೀರಿನ ಸರಬರಾಜು ಹಾಗೂ ಜಾನುವಾರುಗಳ ಸಂರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಅನುದಾನ ಅವಶ್ಯವಿರುವುದರಿಂದ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ :  ಮಹತ್ವದ ಸಭೆ: ಸಾಲಮನ್ನಾ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅಧಿಕಾರಿಗಳ ಜತೆ ಸಿಎಂ ಚರ್ಚೆ

ಬಿಡುಗಡೆ ಮಾಡಿರುವ ಅನುದಾನವನ್ನು ಯಾವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು. ಅನುದಾನ ವೆಚ್ಚ ಮಾಡಿದ್ದಕೆ ಸಂಬಂಧಿಸಿ ಹಣ ಬಳಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಇದರಲ್ಲಿ ಲೋಪವಾದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಯನ್ನು ಜವಾಬ್ದಾರನ್ನಾಗಿ ಮಾಡಲಾಗುವುದು ಎಂದು ಕಂದಾಯ ಇಲಾಖೆ ಹೇಳಿದೆ.ತೀವ್ರ ಬರಗಾಲದಿಂದ ತತ್ತರಿಸಿರುವ ರಾಜ್ಯದ ಬಹುತೇಕ ಭಾಗಗಳಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ಆದಷ್ಟು ಬೇಗ ಎನ್.ಡಿ.ಆರ್.ಎಫ್ ವತಿಯಿಂದ ಪರಿಹಾರ ಬಿಡುಗಡೆ ಮಾಡಬೇಕೆಂದು ಕೋರಿ ಪ್ರಧಾನಮಂತ್ರಿ, ಕೇಂದ್ರ ಗೃಹ ಮತ್ತು ಕೃಷಿ ಸಚಿವರಿಗೆ ರಾಜ್ಯ ಸರ್ಕಾರ ಮನವಿ ಮಾಡಿತ್ತು
Loading... 
First published:February 12, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ