ಮಂಗಳೂರು(ಮೇ.25): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mangaluru International Airport) ಟೇಕಾಫ್ ಆಗಲು ಸಿದ್ಧವಾಗಿದ್ದ ವಿಮಾನವೊಂದು ಅಪಾಯವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಹೌದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ ದುಬೈಗೆ (Dubai) ಹೊರಟಿದ್ದ ವಿಮಾನ ಟೇಕಾಫ್ ಆಗಲು ಸಿದ್ಧತೆ ನಡೆಸಿತ್ತು. ಈ ವೇಳೆ ಏಕಾಏಕಿ ವಿಮಾನದ ರೆಕ್ಕೆಗೆ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: Harish Poonja: ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜಾ! ಪ್ರಕರಣ ದಾಖಲು
ಇಂದು ಪ್ರಯಾಣಿಕರ ಸಹಿತ ಬೆಳಗ್ಗೆ 8.30ಕ್ಕೆ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್ ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಿಮಾನವನ್ನು ವಾಪಾಸ್ ತಂದಿದ್ದಾರೆ.
ಬಳಿಕ ಪ್ರಯಾಣಿಕರನ್ನು ಇಳಿಸಿ ವಿಮಾನದ ತಪಾಸಣೆ ನಡೆಸಿದ್ದಾರೆ.
ಇದನ್ನೂ ಓದಿ: Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!
ಬಳಿಕ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರಿಗೆ ದುಬೈಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ. ಈ ಘಟನೆ ಬಳಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ