Mangaluru: ನಿಲ್ಲದ ಮಳೆಯ ಆರ್ಭಟ, ಕಾರ್ಮಿಕರು ವಾಸವಿದ್ದ ಶೆಡ್ ಮೇಲೆ ಗುಡ್ಡ ಕುಸಿತ: ಮೂವರ ಸಾವು

ಬಂಟ್ವಾಳದ ಹೆನ್ರಿ ಕಾರ್ಲೊ ಎಂಬುವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಶೆಡ್​ನೊಳಗೆ ಸಿಲುಕಿಕೊಂಡಿದ್ದರು. ಅದರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿತ್ತು. ಓರ್ವ ಸಾವನ್ನಪ್ಪಿದ್ದ, ಚಿಕಿತ್ಸೆ ಫಲಿಸಿದೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.

ಮೂವರು ಕಾರ್ಮಿಕರ ಸಾವು

ಮೂವರು ಕಾರ್ಮಿಕರ ಸಾವು

  • Share this:
ಮಂಗಳೂರು (ಜು.07): ರಾಜ್ಯದ್ಯಂತ ಭಾರೀ ಮಳೆಯಾಗುತ್ತಿದೆ (Heavy Rain), ದಕ್ಷಿಣ ಕನ್ನಡ ಹಾಗೂ ಮಲೆನಾಡ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ.  ಬಂಟ್ವಾಳ (Bantwala) ತಾಲ್ಲೂಕು ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಕಾರ್ಮಿಕರು (Workers) ಉಳಿದುಕೊಂಡಿದ್ದ ಶೆಡ್ ಮೇಲೆ ಗುಡ್ಡ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ (Death).  ಶೆಡ್ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದಾರೆ. ಒಬ್ಬ ಕಾರ್ಮಿಕ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದಾನೆ.

ಶೆಡ್​ನೊಳಗೆ ಸಿಲುಕಿದ್ದ ನಾಲ್ವರು ಕಾರ್ಮಿಕರು

ಬಂಟ್ವಾಳದ ಹೆನ್ರಿ ಕಾರ್ಲೊ ಎಂಬುವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಶೆಡ್ನೊಳಗೆ ಸಿಲುಕಿಕೊಂಡಿದ್ದರು. ಅದರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿತ್ತು. ಒಬ್ಬರು ಮೃತಪಟ್ಟಿದ್ದರು. ಉಳಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಎಸ್ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳ, NDRFನಿಂದ ರಕ್ಷಣಾ ಕಾರ್ಯ

ಪಾಲಕ್ಕಾಡು ನಿವಾಸಿ ಬಿಜು (44) ಬುಧವಾರ ರಾತ್ರಿ ಮೃತಪಟ್ಟವರು. ಬಾಬು (46), ಸಂತೋಷ್ ಅಲ್ಫೊನ್ಸಾ (46) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಣ್ಣೂರು ನಿವಾಸಿ ಜಾನ್ (44) ಬಂಟ್ವಾಳ ಸರ್ಕರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಅಗ್ನಿಶಾಮಕ ದಳ ಹಾಗೂ NDRF ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಚರಣೆ ನಡೆಯಿತು.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಎಸ್ಪಿ ಋಷಿಕೇಶ್ ಸೋನಾವಣೆ, ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ , ತಹಶೀಲ್ದಾರ್ ಸ್ಮಿತಾರಾಮು, ಪಿ.ಡಿ.ಒ.ವಿದ್ಯಾಶಿವಾನಂ ಸ್ಥಳಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ:  Gadaga: ನಗರಸಭೆಯ ಸಾಮಾನ್ಯ ಸಭೆಯಲ್ಲೇ ಕಣ್ಣೀರು ಹಾಕಿದ ಅಧ್ಯಕ್ಷೆ!

ಮಳೆಯ ಅಬ್ಬರ, ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶೃಂಗೇರಿ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿವೆ. ತುಂಗಾ ನದಿ ತಟದಲ್ಲಿರುವ ಕಪ್ಪೆ ಶಂಕರ ದೇವಸ್ಥಾನ ಸಹ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ರಸ್ತೆಗಳನ್ನು ಪೊಲೀಸರು ಸಂಪೂರ್ಣ ಬಂದ್ ಮಾಡಿದ್ದಾರೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಲ್ಕು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಸುಸ್ತಾಗಿರುವ ಕರಾವಳಿ ಜಿಲ್ಲೆಗಳಿಗೆ (Costal District) ಹವಾಮಾನ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದೆ. ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ (Heavy Rainfall) ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ  ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi), ಉತ್ತರ ಕನ್ನಡಕ್ಕೆ (Uttara Kannada) ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಎಂದರೆ 204 mm ಗಿಂತ ಅಧಿಕ ಮಳೆಯಾಗುವ ಮುನ್ಸೂಚನೆ  ಇದೆ ಎಂದರ್ಥ. ಇನ್ನೂ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೂಚನೆ ನೀಡಲಾಗಿದೆ. ಆರೆಂಜ್ ಅಲರ್ಟ್ ಅಂದರೆ 115.6 mm ಇಂದ 204.4 mm ಮಳೆಯಾಗುವ ಸಾಧ್ಯತೆಗಳು ಇರುತ್ತವೆ.

ರಾಯಚೂರು ಮತ್ತು ಯಾದಗಿರಿಯಲ್ಲಿ ಗರಿಷ್ಠ ತಾಪಮಾನ

ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಠ 26 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಇದನ್ನೂ ಓದಿ: BBMP: ಬೀದಿ ಬದಿಯ ಆಹಾರಗಳೂ ಇನ್ಮುಂದೆ ಆನ್​​ಲೈನ್​ನಲ್ಲಿ ಲಭ್ಯ: ಪಾಲಿಕೆ ಸಾಲವನ್ನೂ ನೀಡುತ್ತೆ

ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಂದ ಪದವಿ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಬೇರೆ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ರಜೆಯನ್ನು ವಿಸ್ತರಣೆ ಮಾಡಲಾಗುತ್ತಿದೆ
Published by:Pavana HS
First published: