HOME » NEWS » State » DYCM ASHWATHNARAYAN SAYS CBI RAIDS ON DK SHIVAKUMAR IS NOT POLITICALLY MOTIVATED HK

ಡಿಕೆ ಶಿವಕುಮಾರ್ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ ಅಲ್ಲ : ಡಿಸಿಎಂ ಅಶ್ವತ್ಥನಾರಾಯಣ

ನಿಖೆಗೆ ಸಹಕಾರ ನೀಡುವುದಾಗಿ ಸ್ವತಃ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದರಂತೆ ಅವರು ಸಹಕಾರ ನೀಡಲಿ. ತಮ್ಮ ಪ್ರಾಮಾಣಿಕತೆಯನ್ನು ಸಾಬೀತು ಮಾಡಲು ಇದೊಂದು ಅವಕಾಶ. ಸಿಕ್ಕಿದ ಅವಕಾಶವನ್ನು ಅವರು ಸದ್ಬಳಕೆ ಮಾಡಿಕೊಳ್ಳಲಿ

news18-kannada
Updated:October 5, 2020, 3:28 PM IST
ಡಿಕೆ ಶಿವಕುಮಾರ್ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ ಅಲ್ಲ : ಡಿಸಿಎಂ ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ
  • Share this:
ಬೆಂಗಳೂರು(ಅಕ್ಟೋಬರ್​.05): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಮೇಲೆ ನಡೆದಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಡಿ.ಕೆ.ಶಿವಕುಮಾರ್‌ ಅವರ ಮೇಲೆ ಆದಾಯ ತೆರಿಗೆ ಹಾಗೂ ಇಡಿ ದಾಳಿ ನಡೆದಿತ್ತು. ಅದರ ಮುಂದುವರಿದ ಭಾಗವಾಗಿ ಸಿಬಿಐ ದಾಳಿ ನಡೆದಿರಬಹುದು. ಹೀಗಾಗಿ ಇದಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ ಎಂದರು. ಸಮಾಜದಲ್ಲಿ ವ್ಯಕ್ತಿಗಿಂತ ವ್ಯವಸ್ಥೆಯೇ ದೊಡ್ಡದು. ಇದರಲ್ಲಿ ನಂಬಿಕೆ ಹೆಚ್ಚುವ ರೀತಿಯಲ್ಲಿ ಸಿಬಿಐ ತನಿಖೆ ನಡೆಯುತ್ತಿದೆ. ಸತ್ಯ ಏನೆಂದು ಹೊರಬರಲಿ. ಇನ್ನು ತನಿಖೆಗೆ ಸಹಕಾರ ನೀಡುವುದಾಗಿ ಸ್ವತಃ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದರಂತೆ ಅವರು ಸಹಕಾರ ನೀಡಲಿ. ತಮ್ಮ ಪ್ರಾಮಾಣಿಕತೆಯನ್ನು ಸಾಬೀತು ಮಾಡಲು ಇದೊಂದು ಅವಕಾಶ. ಸಿಕ್ಕಿದ ಅವಕಾಶವನ್ನು ಅವರು ಸದ್ಬಳಕೆ ಮಾಡಿಕೊಳ್ಳಲಿ ಎಂದು ಡಿಸಿಎಂ ಹೇಳಿದರು.

ಇಂಥ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಇದೊಂದು ರಾಜಕೀಯ ಪ್ರೇರಿತ ಎಂದು ಹೇಳುವ ಮೂಲಕ ಕೆಲವರು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಉಪ ಚುನಾವಣೆಗೂ ಈ ದಾಳಿಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರದಿಂದ ಹಣ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದರಿಂದ ಇಂದು ಮುಂಜಾನೆ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ ಐವರು ಸಿಬಿಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇಂದು ಮುಂಜಾನೆ 6 ಗಂಟೆಗೆ ಸಿಬಿಐ ದಾಳಿ ನಡೆಸಲಾಗಿದೆ. ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಹಣ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಡಿಕೆ ಶಿವಕುಮಾರ್ ಜೈಲು ಸೇರಿದ್ದರು.

ಇದನ್ನೂ ಓದಿ : ದಸರಾದಿಂದ ನಿವೃತ್ತನಾದರೂ ಅರ್ಜುನ ಆನೆಗೆ ಈಗ ಪುಂಡಾನೆ ಹಿಡಿಯುವ ಕಾಯಕ

ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಹಿನ್ನೆಲೆಯಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆದಿರುವ ಸಾಧ್ಯತೆಯಿದೆ.
ಡಿ.ಕೆ. ಶಿವಕುಮಾರ್ ಮನೆ ಜೊತೆಗೆ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಈಗಾಗಲೇ ಐಟಿ ಮತ್ತು ಇಡಿ ಎರಡೂ ತನಿಖಾ ಸಂಸ್ಥೆಗಳಿಂದ ಡಿಕೆಶಿ ವಿಚಾರಣೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿಬಿಐ ಅಧಿಕಾರಿಗಳಿಂದ ವಿಚಾರಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.
Published by: G Hareeshkumar
First published: October 5, 2020, 3:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories