DK Shivakumar: ಮತ್ತೆ ಇಡಿ ಇಕ್ಕಳದಲ್ಲಿ ಸಿಲುಕುತ್ತಾರಾ ಡಿಕೆಶಿ? ಕೋರ್ಟ್ಗೆ ಸಲ್ಲಿಕೆಯಾಯ್ತು ಚಾರ್ಜ್ಶೀಟ್!
ಡಿಕೆ ಶಿವಕುಮಾರ್ ವಿರುದ್ಧ ದೆಹಲಿ ಕೋರ್ಟ್ನಲ್ಲಿ ಇಡಿ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, "ಅವರಿಗೆ ಸ್ವಾಗತ ಕೋರುತ್ತೇನೆ, ಚಾರ್ಜ್ ಶೀಟ್ ಸಿಕ್ಕಿದ ಬಳಿಕ ಮಾತನಾಡುತ್ತೇನೆ" ಎಂದಿದ್ದಾರೆ.
ನವ ದೆಹಲಿ: ಕೆಪಿಸಿಸಿ ಅಧ್ಯಕ್ಷ (KPCC President) ಡಿಕೆ ಶಿವಕುಮಾರ್ (DK Shivakumar) ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಹಣ (Money) ಅಕ್ರಮ ವಹಿವಾಟು ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ 2019ರಲ್ಲಿ ದಾಖಲಿಸಿದ್ದ ಪ್ರಕರಣ (Case) ಸಂಬಂಧ ದೆಹಲಿಯ (Delhi) ಇಡಿ ಅಧಿಕಾರಿಗಳು (ED Officers) ದೋಷಾರೋಪ ಪಟ್ಟಿ (Charge Sheet) ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಒಡೆತನಕ್ಕೆ ಸೇರಿದ ಪ್ಲಾಟ್ ನಲ್ಲಿ 8.5 ಕೋಟಿ ರೂ. ಬೇನಾಮಿ ಹಣ ಪತ್ತೆಯಾದ ಬಗ್ಗೆ ಐಟಿ ಅಧಿಕಾರಿಗಳು (IT Officers) ನೀಡಿದ ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ಪಿಎಂಎಲ್ಎ ಕಾಯ್ದೆ (PMLA Act) ಅಡಿ 2018 ರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಹೊಸದಾಗಿ ಆರೋಪ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಇದ್ದರೂ ಕೂಡ ಕಾನೂನಿಗೆ ವಿರುದ್ಧವಾಗಿ ಆದಾಯ ತೆರಿಗೆ ಇಲಾಖೆಯವರು ಸಾಕಷ್ಟು ಆರೋಪಗಳನ್ನು ಸೃಷ್ಟಿ ಮಾಡಿದ್ದಾರೆ. ನನಗೆ ಪ್ರತಿ ಬರಲಿ, ಈ ದೇಶದಲ್ಲಿ ಕಾನೂನು, ನ್ಯಾಯ ನೀತಿ ಇದೆ, ಅವುಗಳ ಮೇಲೆ ನಂಬಿಕೆಯಿದೆ, ನಾನು ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ರಾಜಕೀಯಾಗಿ ನನ್ನ ವಿರುದ್ಧ ನಡೆಸಿದ ಷಡ್ಯಂತ್ರ ಎಂದಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
ಡಿಕೆ ಶಿವಕುಮಾರ್ ವಿರುದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಒಡೆತನಕ್ಕೆ ಸೇರಿದ ಪ್ಲಾಟ್ ನಲ್ಲಿ 8.5 ಕೋಟಿ ರೂ. ಬೇನಾಮಿ ಹಣ ಪತ್ತೆಯಾದ ಬಗ್ಗೆ ಐಟಿ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ಪಿಎಂಎಲ್ ಎ ಕಾಯ್ದೆ ಅಡಿ 2018 ರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಇದೀಗ ಕೋರ್ಟ್ಗೆ ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ಲಾಟ್ನಲ್ಲಿ ಪತ್ತೆಯಾಗಿತ್ತು 8.5 ಕೋಟಿ ಹಣ
ಐಟಿ ದಾಳಿ ವೇಳೆ ಡಿ.ಕೆ. ಶಿವಕುಮಾರ್ ಅವರ ಮಾಲೀಕತ್ವದ ದೆಹಲಿಯ ಅಪಾರ್ಟ್ಮೆಂಟ್ ಗಳಲ್ಲಿ 8.5 ಕೋಟಿ ಹಣ ಪತ್ತೆಯಾಗಿತ್ತು. ಈ ಹಣದ ಮೂಲದ ಬಗ್ಗೆ ತನಿಖೆ ನೆಡಸಿರುವ ಇಡಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಚಾರ್ಜ್ ಶೀಟ್ನಲ್ಲಿ ಡಿ.ಕೆ. ಶಿವಕುಮಾರ್ ಮೊದಲ ಅರೋಪಿಯಾಗಿದ್ದು, ಸಚಿನ್ ನಾರಾಯಣ್, ಪಾಲುದಾರ ಸ್ನೇಹಿತ ಸುನೀಲ್ ಕುಮಾರ್ ಶರ್ಮಾ ಮತ್ತಿತರರ ವಿರುದ್ಧ ಬೇನಾಮಿ ವಹಿವಾಟು ನಡೆಸಿದ ಅರೋಪ ಹೊರಿಸಲಾಗಿದೆ.
2019ರಲ್ಲಿ ಬಂಧನಕ್ಕೆ ಒಳಗಾಗಿದ್ದ ಡಿಕೆಶಿ
2019 ರಲ್ಲಿ ಈ ಪ್ರಕರಣದ ವಿಚಾರಣೆ ಸಂಬಂಧ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದರು. ಸ್ಪಷ್ಟ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿಡಲಾಗಿತ್ತು. ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಲು ತಿರಸ್ಕರಿಸಿತ್ತು. ಆ ಬಳಿಕ ಹೈಕೋರ್ಟ್ ಜಾಮೀನು ಪಡೆದ ಡಿಕೆಶಿ, ಜೈಲಿನಿಂದ ಬಿಡುಗಡೆಯಾಗಿದ್ದರು.
ಇನ್ನು ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾಕ್, ನನ್ನ ವಿರುದ್ಧ ಹೊಸದಾಗಿ ಆರೋಪ ಸೃಷ್ಟಿ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಇದ್ದರೂ ಕೂಡ ಕಾನೂನಿಗೆ ವಿರುದ್ಧವಾ ಗಿ ಆದಾಯ ತೆರಿಗೆ ಇಲಾಖೆಯವರು ಸಾಕಷ್ಟು ಆರೋಪಗಳನ್ನು ಸೃಷ್ಟಿ ಮಾಡಿದ್ದಾರೆ. ನನಗೆ ಚಾರ್ಜ್ ಶೀಟ್ ಪ್ರತಿ ಬರಲಿ, ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ಅದಕ್ಕೆ ಶುಭ ಕೋರುತ್ತೇನೆ ಎಂದಿದ್ದಾರೆ. ಈ ದೇಶದಲ್ಲಿ ಕಾನೂನು, ನ್ಯಾಯ ನೀತಿ ಇದೆ, ಅವುಗಳ ಮೇಲೆ ನಂಬಿಕೆಯಿದೆ, ನಾನು ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ರಾಜಕೀಯಾಗಿ ನನ್ನ ವಿರುದ್ಧ ನಡೆಸಿದ ಷಡ್ಯಂತ್ರ ಅಂತ ಆರೋಪಿಸಿದ್ದಾರೆ.
Published by:Annappa Achari
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ