ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಭಾರೀ ಸಂಕಷ್ಟ; ಇನ್ನೂ ಎರಡು ದಿನ ಇಡಿ ವಿಚಾರಣೆ ಸಾಧ್ಯತೆ

ದೆಹಲಿಯ ಲೋಕನಾಯಕ ಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಡಿಕೆಶಿ ನಡುವಿನ ಹಣ ವರ್ಗಾವಣೆ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

news18
Updated:September 20, 2019, 6:41 PM IST
ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಭಾರೀ ಸಂಕಷ್ಟ; ಇನ್ನೂ ಎರಡು ದಿನ ಇಡಿ ವಿಚಾರಣೆ ಸಾಧ್ಯತೆ
ಲಕ್ಷ್ಮೀ ಹೆಬ್ಬಾಳ್ಕರ್​.
  • News18
  • Last Updated: September 20, 2019, 6:41 PM IST
  • Share this:
ಬೆಂಗಳೂರು(ಸೆ.20): ಮಾಜಿ ಸಚಿವ​​ ಡಿ.ಕೆ ಶಿವಕುಮಾರ್​​​​ ಅವರಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಕಾಂಗ್ರೆಸ್​​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.  ಶುಕ್ರವಾರ ಮಧ್ಯಾಹ್ನ 12ಗಂಟೆಯಿಂದ ಸತತವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ನಡೆಯುತ್ತಿದೆ.

ದೆಹಲಿಯ ಲೋಕನಾಯಕ ಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಡಿಕೆಶಿ ನಡುವಿನ ಹಣ ವರ್ಗಾವಣೆ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಜತೆಗೆ ಇಂದೇ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ಮುಗಿಯುವ ಸಾಧ್ಯತೆ ಕಡಿಮೆ. ಹಾಗಾಗಿ ಇಡಿ ಅಧಿಕಾರಿಗಳು ಇನ್ನೂ ಎರಡು ದಿನಗಳ ಕಾಲ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ಮುಂದುವರಿಸಲಿದ್ದಾರೆ ಎಂದು ನ್ಯೂಸ್​​-18ಗೆ ಉನ್ನತ ಮೂಲಗಳು ತಿಳಿಸಿವೆ.

ಡಿಕೆಶಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಈ ಹಿಂದೆಯೇ ಇಡಿ ನೋಟೀಸ್ ನೀಡಿತ್ತು. ಆದರೆ, ಅದಕ್ಕೆ ಬೆಳಗಾವಿ ಶಾಸಕಿ ಸ್ಪಂದಿಸಿರಲಿಲ್ಲ. ನಿನ್ನೆ ದಿಢೀರ್​​ ವಿಚಾರಣೆಗೆ ಹಾಜರಾಗುವಂತೆ ಮತ್ತೊಮ್ಮೆ ಇಡಿ ನೋಟೀಸ್ ಕಳುಹಿಸಿತ್ತು. ಅದರಂತೆಯೇ ಈಗ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆಗೆ ಹಾಜರಾಗಿದ್ದಾರೆ.

ಅಕ್ರಮ ಹಣ ದೊರೆತ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್​ ಪ್ರಬಲ ನಾಯಕ ಡಿಕೆ ಶಿವಕುಮಾರ್​ ಅವರನ್ನು ವಿಚಾರಣೆ ನಡೆಸುತ್ತಿದೆ. ಡಿಕೆಶಿ ಆಪ್ತರಲ್ಲೊಬ್ಬರಾದ ಲಕ್ಷ್ಮಿ ಹೆಬ್ಬಾಳ್ಕರ್​ ಅವರ ವಿಚಾರಣೆಯೂ ನಡೆಯುತ್ತಿದೆ. ಈ ಸಂಬಂಧ ನ್ಯೂಸ್​​-18 ಕನ್ನಡಕ್ಕೆ ಪ್ರತಿಕ್ರಿಯಿಸಿದ್ದ ಹೆಬ್ಬಾಳ್ಕರ್​​, ನನ್ನ ಜೊತೆಗೆ 184 ಮಂದಿಗೆ ಇಡಿ ನೋಟೀಸ್​​ ನೀಡಿದೆ ಎಂದಿದ್ದರು.

ಇದನ್ನೂ ಓದಿ: ಅಕ್ರಮ ಡಿನೋಟಿಫಿಕೇಷನ್​ ಪ್ರಕರಣ: ರದ್ದುಗೊಳಿಸುವಂತೆ ಹೈಕೋರ್ಟ್​ ಮೊರೆಹೋದ ಮಾಜಿ ಸಿಎಂ ಕುಮಾರಸ್ವಾಮಿ

“ಸೆಪ್ಟೆಂಬರ್​ 14ಕ್ಕೆ ಇಡಿ ನೋಟಿಸ್​ ಬಂದಿತ್ತು. ಟೈಂ ಕೇಳಿದ್ದು ನಿಜ. ಮನೆಯಲ್ಲೇ ವಿಚಾರಣೆಗೆ ಮನವಿ ಮಾಡಿದ್ದೇನೆ. ಇಡಿ ಅವರು ವಿಚಾರಣೆಗೆ ಕರೆದಿದ್ದಾರೆ. ಬೆಂಗಳೂರು, ಬೆಳಗಾವಿಯಲ್ಲೇ ವಿಚಾರಣೆಗೆ ಮನವಿ ಮಾಡಿದ್ದೇನೆ. ನನಗೆ ಈ ಬಗ್ಗೆ ಭಯ ಇಲ್ಲ. 2 ಸಲ ಐಟಿ ದಾಳಿಯಾದಾಗ ಏನೂ ಸಿಕ್ಕಿಲ್ಲ. ಡಿಕೆಶಿ ಜೊತೆ ನನಗೆ ಯಾವುದೇ ವ್ಯವಹಾರವಿಲ್ಲ. ನನಗೂ ಈ ಪ್ರಕರಣಕ್ಕೂ ಸಂಬಂಧವೇ ಇಲ್ಲ ಎಂದು ಹೇಳಿಕೆ ನೀಡಿದ್ದರು ಹೆಬ್ಬಾಳ್ಕರ್​​.

ಏನಿದು ಡಿಕೆಶಿ ಪ್ರಕರಣ?: ದೆಹಲಿಯಲ್ಲಿರುವ ಡಿ.ಕೆ. ಶಿವಕುಮಾರ್​ ಅವರಿಗೆ ಸೇರಿದ ಫ್ಲಾಟ್​ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಅಕ್ರಮ ಹಣ ಪತ್ತೆಯಾಗಿತ್ತು. ಡಿಕೆಶಿ ಹಾಗೂ ಆಪ್ತರ ಮನೆಗಳಲ್ಲಿ ಐಟಿ ಅಧಿಕಾರಿಗಳು 8.59 ಕೋಟಿ ಹಣ ಜಪ್ತಿ ಮಾಡಿದ್ದರು. ಇಡಿ ಸಮನ್ಸ್ ರದ್ದು ಕೋರಿ ಸಚಿವ ಡಿಕೆಶಿ ಹಾಗೂ ಆಪ್ತರು ಅರ್ಜಿ ಸಲ್ಲಿಸಿದ್ದರು. ಹಣದ ಮೂಲದ ಬಗ್ಗೆ ವಿವರಣೆ ನೀಡುವಂತೆ ಡಿಕೆಶಿ ಮತ್ತು ಆಪ್ತರಿಗೆ ಇಡಿ ಸಮನ್ಸ್ ನೀಡಿತ್ತು.---------------
First published:September 20, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ