ಉಡುಪಿಯಲ್ಲಿ(Udupi) ಹುಟ್ಟಿಕೊಂಡಿದ್ದ ಹಿಜಾಬ್ (Hijab) ವಿವಾದ ಇದೀಗ ಕುಂದಾಪುರ, ಬೈಂದೂರಿಗೂ ವ್ಯಾಪಿಸಿ ಕರ್ನಾಟಕದಲ್ಲಿ (Karnataka) ಕಿಡಿ ಹಚ್ಚಿ,ಈಗ ರಾಷ್ಟ್ರ(National) ಮಾತ್ರವಲ್ಲ ಅಂತಾರಾಷ್ಟ್ರಿಯ(International) ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಬಿಜೆಪಿ(BJP) ಬೆಂಬಲಿಸುವ ಬಲಪಂಥಿಯ ಸಂಘಟನೆಗಳು ಮತ್ತು ಮುಖಂಡರು ಹಿಜಾಬ್ ನಿಷೇಧವಾಗಬೇಕು ಎಂಬ ಒತ್ತಾಯ ಮಾಡುತ್ತಿದ್ದರೆ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್(Congress) ಮತ್ತು ಎಡ ಪಂಥೀಯ ನಾಯಕರು ಹಿಜಾಬ್ಗೆ ಅವಕಾಶ ಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇತ್ತ ಹಿಜಾಬ್ (Hijab) ವಿವಾದದಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ಅರ್ಜಿಯ (Plea) ವಿಚಾರಣೆ ಹೈಕೋರ್ಟ್ (Karnataka High court) ಏಕಸದಸ್ಯ ಪೀಠದಲ್ಲಿ ನಡೆಯಿತು.ಸುಮಾರು ಒಂದೂವರೆ ಗಂಟೆಗಳ ಕಾಲ ವಿಚಾರಣೆ ನಡೆದಿದ್ದು, ಭೋಜನ ವಿರಾಮದ ಬಳಿಕ ಮಧ್ಯಾಹ್ನ 3ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹಿಜಾಬ್ ವಿವಾದ ಹೆಚ್ಚಾಗುತ್ತಲೇ ಇದೆ. ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಒಂದು ವೇಳೆ ಉದ್ವಿಘ್ನ ಪರಿಸ್ಥಿತಿ ಮುಂದುವರೆದರೆ, ಆಯಾ ಕಾಲೇಜುಗಳಿಗೆ ರಜೆ ನೀಡುವಂತೆ ಸಚಿವ ಬಿ.ಸಿ.ನಾಗೇಶ್ ಸೂಚನೆ ನೀಡಿದ್ದಾರೆ. ಅಲ್ಲಿಯ ಡಿಡಿಪಿಐಗಳು ರಜೆ ಘೋಷಣೆ ಮಾಡಬಹುದು. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ರಜೆ ಘೋಷಿಸೋ ಅಧಿಕಾರ ಕೊಟ್ಟಿದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.
ಪರಿಸ್ಥಿತಿ ನೋಡಿ ರಜೆ ಘೋಷಣೆಗೆ ನಿರ್ಧಾರ!
ಹಲವು ಕಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ಕಡೆ ಪ್ರತಿಭಟನೆಗಳು ವಿಕೋಪಕ್ಕೆ ತಿರುಗಿದೆ. ಅಲರ್ಟ್ ಆದ ರಾಜ್ಯ ಸರ್ಕಾರ ಅಲ್ಲಿ ಪರಿಸ್ಥಿತಿ ನೋಡಿ ರಜೆ ನೀಡುವಂತೆ ಎಲ್ಲ ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚನೆ ನೀಡಿದೆ. ದಾವಣಗೆರೆ, ಮಂಗಳೂರು, ಕೊಡಗು ಸೇರಿ ಬಹುತೇಕ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗೃತ ಕ್ರಮವಾಗಿ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಭಜನೆ, ಆರತಿ: ಭಾವೈಕ್ಯತೆಗೆ ಸಾಕ್ಷಿಯಾದ ತಳಬಾಳ ಗ್ರಾಮ
ಮಂಡ್ಯದಲ್ಲಿ ಜೈ ಶ್ರೀರಾಮ್, ಅಲ್ಲಾಹು ಅಕ್ಬರ್ ಘೋಷಣೆ
ಮಂಡ್ಯದ ಸರ್ಕಾರಿ ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯನ್ನ ಸುತ್ತವರೆದು ಕೇಸರಿ ಶಾಲ್ ಧರಿಸಿದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಇದರಿಂದ ಕೋಪಗೊಂಡ ಯುವತಿ ಅಲ್ಲಾಹು ಅಕ್ಬರ್ ಎಂದು ಕೂಗಿದ್ದಾಳೆ. ನಂತರ ಕಾಲೇಜು ಸಿಬ್ಬಂದಿ ಯುವತಿಯನ್ನು ಕರೆದೊಯ್ದಿದಿದ್ದಾರೆ.
ರಬಕವಿ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ
ಬಾಗಲಕೋಟೆ ಜಿಲ್ಲೆಯ ರಬಕವಿ ಸರ್ಕಾರಿ ಪಿಯು ಕಾಲೇಜಿನಲ್ಲಿಯೂ ಕಲ್ಲು ತೂರಾಟ ನಡೆಸಲಾಗಿದೆ. ಓರ್ವನ ತಲೆಗೆ ಕಲ್ಲು ತಾಗಿದ್ದು, ಗಾಯಗೊಂಡಿದ್ದಾನೆ. ಹಿಜಾಬ್ ಪರ ವಿದ್ಯಾರ್ಥಿಗಳ ಗುಂಪು ಕಾಲೇಜಿನ ಮೇಲೆ ಕಲ್ಲು ತೂರಾಟ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಲಾಠಿ ಚಾರ್ಜ್ ನಡೆಸುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿ, ಕೆಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಹಿಜಾಬ್, ಬುರ್ಖಾ, ನಿಕಾಬ್.. ಈ ಮೂರರಲ್ಲೂ ಇರೋ ವ್ಯತ್ಯಾಸವೇನು? ಯಾವ ದಿರಿಸು ಯಾವ ಸಂದರ್ಭದಲ್ಲಿ ತೊಡುತ್ತಾರೆ?
ಶಾಂತಿ ಕಾಪಾಡುವಂತೆ ಸಿಎಂ ಮನವಿ
ಇಂದು ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಹಿನ್ನೆಲೆ ನ್ಯಾಯಾಲಯದ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು. ನ್ಯಾಯಾಲಯದಿಂದ ಯಾವುದೇ ಆದೇಶ ಬಂದ್ರೂ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಂತಿ ಕಾಪಾಡಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನವಿ ಮಾಡಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ