• Home
  • »
  • News
  • »
  • state
  • »
  • B.C Nagesh ಮನೆ ಮೇಲೆ ಮುತ್ತಿಗೆ ಕೇಸ್; ಕೆಲ NSUI ಕಾರ್ಯಕರ್ತರ ಬಂಧನ

B.C Nagesh ಮನೆ ಮೇಲೆ ಮುತ್ತಿಗೆ ಕೇಸ್; ಕೆಲ NSUI ಕಾರ್ಯಕರ್ತರ ಬಂಧನ

ಬಿ.ಸಿ.ನಾಗೇಶ್​

ಬಿ.ಸಿ.ನಾಗೇಶ್​

ಈಗಾಗಲೇ 15 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಎರಡು ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಈ ರೀತಿಯಾದ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲ ಎಂದು ಅರಗ ಜ್ಞಾನೇಂದ್ರ ಕಿಡಿ ಕಾರಿದ್ದಾರೆ.

  • Share this:

ತುಮಕೂರು (ಜೂನ್​ 2):  ಶಿಕ್ಷಣ ಸಚಿವ ಬಿ.ಸಿ ನಾಗೇಶ್ (B.C Nagesh) ಮನೆಗೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಿಗೆ ಹಾಕಿದ್ದ ಕೆಲ NSUI ಕಾರ್ಯಕರ್ತರನ್ನು (Activist)  ತಿಪಟೂರು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಇದೇ ವೇಳೆ NSUI ಕಾರ್ಯಕರ್ತರ ಮೇಲೆ BJP ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪ ಸಹ ಕೇಳಿ ಬಂದಿದೆ. ತಿಪಟೂರಿನ ಕೋರ್ಟ್​ ಮುಂಭಾಗ ಟೀ ಕುಡಿಯುತ್ತಿದ್ದಾಗ NSUI ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರಂತೆ. ಸ್ಥಳಕ್ಕೆ ಭೇಟಿ ನೀಡದ ತಿಪಟೂರು ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ತಿಪಟೂರು ನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ನಾಗೇಶ್ ಮನೆಗೆ ಬೆಂಕಿ ಹಾಕೋದಿಕ್ಕೆ ಮುಂದಾಗಿದ್ದರು


ಶಿಕ್ಷಣ ಸಚಿವ ಬಿ.ಸಿ ನಾಗೇಶ ಮನೆಗೆ ಮುತ್ತಿಗೆ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿ ಇವತ್ತು ಮಧ್ಯಾಹ್ನ ಬಿಸಿ ನಾಗೇಶ್ ಅವರ ಮನೆಗೆ ಕಾಂಗ್ರೆಸ್ ಕೆಲ ಕಾರ್ಯಕರ್ತರು ಮನೆಗೆ ನುಗ್ಗಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ನಾಗೇಶ್ ಮನೆಗೆ ಬೆಂಕಿ ಹಾಕೋದಿಕ್ಕೆ ಮುಂದಾಗಿದ್ದರು. ಈಗಾಗಲೇ 15 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಎರಡು ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಈ ರೀತಿಯಾದ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲ ಎಂದು ಕಿಡಿ ಕಾರಿದ್ದಾರೆ.


ಕಿಡಿಗೇಟಿಗಳನ್ನು ಬಂಧಿಸಿ ಸೂಕ್ತ ಕ್ರಮ


ಈ ಪ್ರಕರಣದ ಹಿಂದೆ ಯಾರಿದ್ದಾರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರಿಂದ ಐವರು ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು‌ ಎನ್‌ಎಸ್‌ಐಯು ಮುಖಂಡರು ಬಂದಿದ್ದಾರೆ. ಪೂರ್ವಯೋಜನೆ ಮಾಡಿಕೊಂಡೇ ಬಂದಿದ್ದಾರೆ. ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ಯಾರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: Exclusive: ಸಿದ್ದುಗೆ ಟಕ್ಕರ್, ಕುಪೇಂದ್ರ ರೆಡ್ಡಿಗೆ ಬಂಪರ್! ಮಲ್ಲಿಕಾರ್ಜುನ್ ಖರ್ಗೆ, ದೇವೇಗೌಡರಿಂದ ಹೊಸ ದಾಳ


ನಾಗೇಶ್ ಮನೆಗೆ​ ಮುತ್ತಿಗೆ- ಬೊಮ್ಮಾಯಿ ಖಂಡನೆ


ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ NSUI ಕಾರ್ಯಕರ್ತರು ಮುತ್ತಿಗೆ ಹಾಕಲು ಪ್ರಯತ್ನಿಸಿರುವ ಕ್ರಮವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಖಂಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ಧಾರೆ.


ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ


ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ ಅವರು ‘ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.’ ಎಂದು ತಿಳಿಸಿದ್ಧಾರೆ.


ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮನೆಗೆ ಮುತ್ತಿಗೆ


ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕುವೆಂಪುಗೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ರಾಷ್ಟ್ರಕವಿ ಕುವೆಂಪು ಬಗ್ಗೆ ಅವಹೇಳನಕಾರಿ ಹೇಳಿಕೆ ಮತ್ತು ಅವರು ರಚಿಸಿರುವ ನಾಡಗೀತೆಯನ್ನು ತಿರುಚಲಾಗಿದೆ ಎಂದು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯವನ್ನು ವಜಾಗೊಳಿಸಬೇಕು ಮತ್ತು ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ.


ಇದನ್ನೂ ಓದಿ: Hijab Controversy: ಹಿಜಾಬ್ ಧರಿಸಿ ಕಾಲೇಜ್‌ಗೆ ಬಂದ ವಿದ್ಯಾರ್ಥಿನಿಯರು! ಉಪ್ಪಿನಂಗಡಿಯಲ್ಲಿ 6 ಮಂದಿ ಅಮಾನತು


ಇದೀಗ ಎನ್ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಕಾರ್ಯಕರ್ತರು ಸಚಿವ ನಾಗೇಶ್ ಮನೆ ಎದುರು ಜಮಾಯಿಸಿದ್ದರು. ಹತ್ತು ನಿಮಿಷಗಳ ಕಾಲ ನಾಗೇಶ್ ಅವರ ಮನೆ ಎದುರು ಘೋಷಣೆ ಕೂಗುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು. ಈ ನಡುವೆ ಪೊಲೀಸರ ಜೊತೆ ಕಾರ್ಯಕರ್ತರು ಮಾತಿನ ಚಕಮಕಿ ನಡೆಯಿತು.

Published by:Pavana HS
First published: