ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ; ಸಚಿವ ಸುರೇಶ್​ ಕುಮಾರ್ ಸ್ಪಷ್ಟನೆ

ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ಬಿರುದನ್ನೂ ನನಗೆ ಕೊಟ್ಟಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ  ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್​ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಸಚಿವ ಸುರೇಶ್​ ಕುಮಾರ್

ಸಚಿವ ಸುರೇಶ್​ ಕುಮಾರ್

 • Share this:
  ಮಂಡ್ಯ(ಆ.13): ಕೊರೋನಾ ಭೀತಿ ನಡುವೆ  ರಾಜ್ಯದಲ್ಲಿ ಸೆಪ್ಟೆಂಬರ್​​​​​​ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಆದರೆ ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸ್ಪಷ್ಟನೆ ನೀಡಿದ್ದಾರೆ. 

  ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ.  ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ಬಿರುದನ್ನೂ ನನಗೆ ಕೊಟ್ಟಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ  ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್​ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

  ದಕ್ಷಿಣ ಕನ್ನಡದಿಂದ ಕೇರಳಕ್ಕೆ ವಾಹನ ಸಂಚಾರ ಬಂದ್​​ - ಜಿಲ್ಲಾಡಳಿತ ವಿರುದ್ಧ ಪ್ರತಿಭಟನೆಗೆ ಮುಂದಾದ ಬಿಜೆಪಿ

  ಮುಂದುವರೆದ ಅವರು, ನನಗೆ ಬಹಳ ಮುಖ್ಯವಾದ ಆದ್ಯತೆ ಅಂದ್ರೆ, ನಮ್ಮ ಮಕ್ಕಳ ಆರೋಗ್ಯ. ಅದನ್ನ ಬಹಳ ಸುರಕ್ಷತಾ ದೃಷ್ಠಿಯಿಂದ ನೋಡಬೇಕು. ಜೊತೆಗೆ ನಮ್ಮ ಮಕ್ಕಳ ಕಲಿಕೆ ಹೇಗೆ? ಯಾವ ರೀತಿ ಕಲಿಕೆಯನ್ನು ಮುಂದುವರಿಸಬಹುದು ಎಂಬುದಕ್ಕೆ ಈಗಾಗಲೇ ನಮ್ಮ ರಾಜ್ಯದಲ್ಲಿ ವಿದ್ಯಾಗಮನ ಎಂಬ ಯೋಜನೆಯನ್ನು ತರಲಾಗಿದೆ. ಈ ವಿದ್ಯಾಗಮನ ಯೋಜನೆ ಇಡೀ ರಾಷ್ಟ್ರವೇ ನೋಡುವಂತ ಅತ್ಯುತ್ತಮ ಯೋಜನೆ ಎಂದು ಹೇಳಿದರು.

  ಇದೇ ವೇಳೆ, ಶಿಕ್ಷಕರು ಮಕ್ಕಳು ಇರುವ ಕಡೆ ಹೋಗಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ ಎಂದರು. ಮಳವಳ್ಳಿ ತಾಲೂಕಿನ ಕೆಂಪ್ಪಯ್ಯನದೊಡ್ಡಿಗೆ ಹೋಗಿದ್ದೆ. ಶಿಕ್ಷಕರು ಊರಿನ ಪಡಶಾಲೆಯಲ್ಲಿ ಮಕ್ಕಳಿಗೆ ಮಾಡ್ತಿದ್ದಾರೆ. ಕೊರೋನಾ ಕಾಲದಲ್ಲಿ ಕೂಡ ನಮ್ಮ ಮಕ್ಕಳು ಯಾವುದೇ ಖಿನ್ನತೆಗೆ ಒಳಗಾಗಬಾರದು‌. ಅದಕ್ಕಾಗಿ ಅವರಿಗೆ ಕಲಿಕೆ ಮುಂದುವರಿಸಬೇಕು ಎಂದು ತಿಳಿಸಿದರು.

  ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದೇವೆ. ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್​ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಸಮಾಜಕ್ಕೆ ಭರವಸೆ ಕೊಡುವ ಕಾರ್ಯವನ್ನ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದರು.
  Published by:Latha CG
  First published: