ನ. 5ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ; ಸಚಿವ ಸುರೇಶ್​ ಕುಮಾರ್​​

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮೊದಲು ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಆದ್ಯತೆ ನೀಡುವ ಭರವಸೆಯನ್ನು ಅವರು ನೀಡಿದ್ದಾರೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಅ.21): ಬಹುದಿನಗಳಿಂದ ಎದುರು ನೋಡುತ್ತಿದ್ದ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ನ.5ರಿಂದ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ತಿಳಿಸಿದ್ದಾರೆ. ಈಗಾಗಲೇ ಶಿಕ್ಷಣ ಇಲಾಖೆಯಿಂದ ವರ್ಗಾವಣೆಗೆ ಸಿದ್ಧತೆ ನಡೆಸಲಾಗಿದೆ. ರಾಜ್ಯದಲ್ಲಿ ಉಪಚುನಾವಣೆ ನೀತಿ ಸಂಹಿತೆ ಹಿನ್ನಲೆ ಇದಕ್ಕೆ ತಾತ್ಕಲಿಕ ನಡೆ ನೀಡಲಾಗಿತ್ತು. ವರ್ಗಾವಣೆಗೆ ಎದುರು ನೋಡುತ್ತಿದ್ದ ಶಿಕ್ಷಕರು ಇದರಿಂದ ನಿರಾಸೆಗೆ ಒಳಗಾಗಿದ್ದರು. ಈಗ ಇದಕ್ಕೆ ಚಾಲನೆ ಸಿಕ್ಕಿದೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಮತ್ತು ವೇಳಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮೊದಲು ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಆದ್ಯತೆ ನೀಡುವ ಭರವಸೆಯನ್ನು ಅವರು ನೀಡಿದ್ದಾರೆ.ಶಿಕ್ಷಕರ ವರ್ಗಾವಣೆ ಕುರಿತು ಈಗಾಗಲೇ ಕರಡು ನಿಯಮ ಸಿದ್ಧ ಪಡಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ಶಿಕ್ಷಕರು ಕೂಡ ಆಕ್ಷೇಪಣೆ ಸಲ್ಲಿಸಿದ್ದು, ಅವುಗಳನ್ನು ಕ್ರೋಡಿಕರಿಸಿ ಅಂತಿಮ ನಿಯಮ ಸಿದ್ದಪಡಿಸಲಾಗಿದೆ.
Published by:Seema R
First published: