• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Coronavirus: ಬೆಂಗಳೂರು ನಗರ ಜಿಲ್ಲೆಯಲ್ಲಿ 6-9ನೇ‌ ತರಗತಿ ಸ್ಥಗಿತ; ಶಿಕ್ಷಣ ಸಚಿವ ಸುರೇಶ್ ಕುಮಾರ್

Coronavirus: ಬೆಂಗಳೂರು ನಗರ ಜಿಲ್ಲೆಯಲ್ಲಿ 6-9ನೇ‌ ತರಗತಿ ಸ್ಥಗಿತ; ಶಿಕ್ಷಣ ಸಚಿವ ಸುರೇಶ್ ಕುಮಾರ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ. 

  • Share this:

ಬೆಂಗಳೂರು(ಏ.01): ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ‌ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ‌ ಆದೇಶದವರೆಗೆ ನಿಲ್ಲಿಸಲಾಗುತ್ತದೆ ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ. 


ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.


ಪರೀಕ್ಷೆ ಬಗ್ಗೆ ಸಚಿವರು ಹೇಳಿದ್ದೇನು?


ಕಡ್ಡಾಯ ಶಿಕ್ಷಣ ಕಾಯಿದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ‌ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದೆಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

top videos
    First published: