ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ಮಾಡುವುದು ಪ್ರತಿಷ್ಠೆಯ ಪ್ರಶ್ನೆಯಲ್ಲ; ಇದು ಕರ್ತವ್ಯದ ಒಂದು ಭಾಗ; ಶಿಕ್ಷಣ ಸಚಿವ ಸುರೇಶ್ ಕುಮಾರ್

ಕಳೆದ ವರ್ಷ 6,75,277  ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 7,01,651 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ 26,374ಕ್ಕೂ ಹೆಚ್ಚು ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ ಎಂದರು.

ಸಚಿವ ಸುರೇಶ್ ಕುಮಾರ್

ಸಚಿವ ಸುರೇಶ್ ಕುಮಾರ್

  • Share this:
ಚಿತ್ರದುರ್ಗ(ಏ.10): ಮೇ, ಜೂನ್ ತಿಂಗಳಲ್ಲಿ ಬರುವ ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ಮಾಡುವುದು ಪ್ರತಿಷ್ಠೆಯ ಪ್ರಶ್ನೆಯಲ್ಲ. ಇದು ಕರ್ತವ್ಯದ ಒಂದು ಭಾಗ. ಪರೀಕ್ಷೆಯಲ್ಲಿ ಸಂಖ್ಯಾತ್ಮಕತೆಯ ಜೊತೆಗೆ ಗುಣಾತ್ಮಕತೆ ಬಹಳ ಮುಖ್ಯ. ಆದ್ದರಿಂದ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕು. ಪರೀಕ್ಷೆಯ ಪಾವಿತ್ರ್ಯತೆಯನ್ನು ಭಂಗ ಮಾಡಿದಲ್ಲಿ ಸಮಾಜವನ್ನು ಹಾಳುಮಾಡಿದಂತಾಗುತ್ತದೆ. ಪರೀಕ್ಷೆ ಎನ್ನುವುದು ದೊಡ್ಡ ಕಾರ್ಯ ಅದರಲ್ಲಿ ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆಯಲು ಅಗತ್ಯ ಕ್ರಮವಹಿಸಬೇಕು ಎಂದು ಚಿತ್ರದುರ್ಗದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 2020-21ನೇ ಸಾಲಿನ SSLC, ಪಿಯುಸಿ ಪರೀಕ್ಷಾ ಸಿದ್ಧತೆ ಕುರಿತಂತೆ ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐ, ಡಿಡಿಪಿಐ, ಡಯಟ್ ಪ್ರಾಂಶುಪಾಲರು ಹಾಗೂ ಬಿಇಒಗಳ ಪೂರ್ವಸಿದ್ಧತಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಶಿಕ್ಷಣ  ಸಚಿವ ಸುರೇಶ್ ಕುಮಾರ್, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಮಕ್ಕಳ ಹಿತದೃಷ್ಠಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳನ್ನು ಮಕ್ಕಳ ಸುರಕ್ಷಾ ಕೇಂದ್ರಗಳನ್ನಾಗಿ ಮಾಡಿ, ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸ್ ಮಾಡುವುದು, ಗುಂಪು ಸೇರದಂತೆ ನೋಡಿಕೊಳ್ಳಲಾಯಿತು. ಈ ಬಾರಿಯು ಎಸ್​ಎಸ್​ಎಲ್​ಸಿ ಪಾಲಿಸಿಯನ್ನು ಪಾಲನೆ ಮಾಡುವುದರ ಮೂಲಕ ಎಲ್ಲ ರೀತಿಯ ಕೋವಿಡ್‍ನ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Astrology: ಶನಿವಾರದ ಈ ದಿನ ಯಾವ ರಾಶಿಗೆ ಯಾವ ಫಲ; ಇಲ್ಲಿದೆ ದ್ವಾದಶ ರಾಶಿ ಭವಿಷ್ಯ

ಇನ್ನೂ  ಈ ಸಾರಿ ಸ್ವಯಂ ಸೇವಾ ಸಂಸ್ಥೆಗಳು, ಜನಪ್ರತಿನಿಧಿಗಳು ಶಿಕ್ಷಣದ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ. ಮಕ್ಕಳಿಗೆ ಸಂವಾದ ಸೇರಿದಂತೆ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್​ಎಸ್​ಎಲ್​ಸಿ, ಪಿಯುಸಿ  ಪರೀಕ್ಷೆಯನ್ನು ಯಾವುದೇ ಮಗುವಿಗೆ ತೊಂದರೆಯಾಗದಂತೆ, ಅಡೆತಡೆಗೆ ಆಸ್ಪದ ನೀಡದೆ ಮಕ್ಕಳ ಭವಿಷ್ಯಕ್ಕಾಗಿ ಪರೀಕ್ಷೆ ಮಾಡೋಣ ಎಂದು ಹೇಳಿದರು.

ಅಲ್ಲದೇ ರಾಜ್ಯಾದ್ಯಂತ 480 ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ಮಕ್ಕಳು ನಾವು ಪರೀಕ್ಷೆ ಬರೆದೇ ಪಾಸಾಗುತ್ತೇವೆಯೇ ಹೊರತು ಕೊರೊನಾ ವರ್ಷದ ಪಾಸಾದ ಅಭ್ಯರ್ಥಿಗಳು ಎನ್ನಿಸಿಕೊಳ್ಳುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಶಿಕ್ಷಣ ಇಲಾಖೆ ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ಮಾಡುವುದು ಪ್ರತಿಷ್ಠೆಯ ಪ್ರಶ್ನೆಯಲ್ಲ.ಇದು ಕರ್ತವ್ಯದ ಒಂದು ಭಾಗವಾಗಿದೆ. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 8,75,709 ವಿದ್ಯಾರ್ಥಿಗಳು ನೊಂದಣಿಯಾಗಿದ್ದಾರೆ.ಕಳೆದ ವರ್ಷ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿಯಾಗಿದ್ದರು. ಕಳೆದ ವರ್ಷಕ್ಕಿಂತ ಈ ಬಾರಿ 28 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನೋಂದಣಿಯಾಗಿದ್ದಾರೆ ಎಂದರು.

ಕಳೆದ ವರ್ಷ 6,75,277  ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 7,01,651 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ 26,374ಕ್ಕೂ ಹೆಚ್ಚು ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ ಎಂದರು.

ಎಸ್​ಎಸ್​ಎಲ್​ಸಿ ಪರೀಕ್ಷೆಗಾಗಿ ರಾಜ್ಯದಲ್ಲಿ 3020 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆ ಸೇರಿದಂತೆ ಒಟ್ಟು ನಾಲ್ಕು ಜಿಲ್ಲೆಗಳಿಂದ 309 ಪರೀಕ್ಷಾ ಕೇಂದ್ರಗಳಿದ್ದು,79,862 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಈ ಬಾರಿ ತರಗತಿಗಳು ತಡವಾಗಿ ಪ್ರಾರಂಭವಾಗಿದ್ದು,ಈ ಹಿನ್ನಲೆಯಲ್ಲಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಯಾವುದೇ ಮಗುವೂ ಪರೀಕ್ಷೆಯಿಂದ ವಂಚಿತರಾಗಬಾರದು.ಈ ನಿಟ್ಟಿನಲ್ಲಿ ಮುಖ್ಯ ಶಿಕ್ಷಕರು, ಬಿಇಒಗಳು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
Published by:Latha CG
First published: