ಪಠ್ಯ ಕಡಿತ ಅಂತಿಮವಾಗಿಲ್ಲ, ಶೀಘ್ರವೇ ಶಿಕ್ಷಕರ ವರ್ಗಾವಣೆ; ಸಚಿವ ಸುರೇಶ್  ಕುಮಾರ್

ಇಲಾಖೆಯ ತಂತ್ರಜ್ಞಾನಾಧಾರಿತ ಕಲಿಕಾ ನೀತಿಗನುಗುಣವಾಗಿ ಪಠ್ಯ ಬೋಧನೆಯ ಮಾದರಿಗಳನ್ನು ರಚನೆ ಮಾಡಲು ತಾವು ಇಲಾಖಾಧಿಕಾರಿಗಳಿಗೆ  ಸೂಚಿಸಿದ್ದೇವೆ. ಈ ಎಲ್ಲ ಕ್ರಮಗಳು ಅಂತಿಮಗೊಳ್ಳುವ ಪೂರ್ವದಲ್ಲಿಯೇ ಅಚಾತುರ್ಯದಿಂದ ಇಲಾಖೆಯ ಜಾಲತಾಣದಲ್ಲಿ ಅನುಮೋದಿತವಾಗದ ಪಠ್ಯಾಂಶಗಳನ್ನು ಪ್ರಕಟಿಸಲಾಗಿದೆ.

news18-kannada
Updated:July 31, 2020, 9:15 PM IST
ಪಠ್ಯ ಕಡಿತ ಅಂತಿಮವಾಗಿಲ್ಲ, ಶೀಘ್ರವೇ ಶಿಕ್ಷಕರ ವರ್ಗಾವಣೆ; ಸಚಿವ ಸುರೇಶ್  ಕುಮಾರ್
ಸಚಿವ ಸುರೇಶ್​ ಕುಮಾರ್
  • Share this:
ಬೆಂಗಳೂರು(ಜು.31): ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ 1-10ನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದೆ. ಆದರೆ ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು  ಅಂತಿಮಗೊಳಿಸಿಲ್ಲ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಗಮನಿಸಿದ್ದು, ಈ ಶೈಕ್ಷಣಿಕ ವರ್ಷ ಪ್ರಾರಂಭವಾಗದಿರುವುದರಿಂದ ನಮಗೆ ಎಷ್ಟು ದಿನಗಳು ದೊರೆಯುತ್ತವೆಂಬುದು ಇನ್ನೂ ಅಸ್ಪಷ್ಟವಾಗಿರುವುದರಿಂದ ಸಿಲೆಬಸ್‍ನ್ನು ಅಂತಿಮಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಲಭ್ಯ ಅವಧಿಯ ಆಧಾರದ ಮೇಲೆ ಮಾಡಲಾಗುವ ಪಠ್ಯ ಕಡಿತವು ವೈಜ್ಞಾನಿಕವಾಗಿರಲಿದ್ದು, ಯಾವುದೇ ಪಠ್ಯವನ್ನು ಅನಗತ್ಯವಾಗಿ ಕಡಿತ ಮಾಡುವುದಿಲ್ಲ. ಹಾಗಾಗಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲ  ಎಂದು  ಹೇಳಿದ್ದಾರೆ.

ಈ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಾಗಬಹುದಾದ ಬೋಧನಾ ಅವಧಿ, ಸಮೂಹ ಮಾಧ್ಯಮಗಳು ಅಥವಾ ತಂತ್ರಜ್ಞಾನಾಧಾರಿತ ಬೋಧನೆಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬಹುದಾದ ಪಠ್ಯಗಳನ್ನು ಗುರುತಿಸಬೇಕಾಗುತ್ತದೆ. ಇಲಾಖೆಯ ತಂತ್ರಜ್ಞಾನಾಧಾರಿತ ಕಲಿಕಾ ನೀತಿಗನುಗುಣವಾಗಿ ಪಠ್ಯ ಬೋಧನೆಯ ಮಾದರಿಗಳನ್ನು ರಚನೆ ಮಾಡಲು ತಾವು ಇಲಾಖಾಧಿಕಾರಿಗಳಿಗೆ  ಸೂಚಿಸಿದ್ದೇವೆ. ಈ ಎಲ್ಲ ಕ್ರಮಗಳು ಅಂತಿಮಗೊಳ್ಳುವ ಪೂರ್ವದಲ್ಲಿಯೇ ಅಚಾತುರ್ಯದಿಂದ ಇಲಾಖೆಯ ಜಾಲತಾಣದಲ್ಲಿ ಅನುಮೋದಿತವಾಗದ ಪಠ್ಯಾಂಶಗಳನ್ನು ಪ್ರಕಟಿಸಲಾಗಿದೆ.

Coronavirus Updates Karnataka: ವರಮಹಾಲಕ್ಷ್ಮಿ ಹಬ್ಬದ ದಿನ 5483 ಮಂದಿಗೆ ಸೋಂಕು; 84 ಜನ ಕೊರೋನಾಗೆ ಬಲಿ

ಇದನ್ನು ಕೂಡಲೇ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ  ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ, ದಾಖಲೆಯ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಾ ಕೆಡವುವ ಕೆಲಸವನ್ನು ಮಾಡುವುದಿಲ್ಲ. ಇದು ಅನವಶ್ಯಕ ರಾಜಕೀಯ ಗೊಂದಲಗಳಿಗೆ ಅವಕಾಶ  ಕಲ್ಪಿಸಬೇಕಿಲ್ಲ ಎಂದು ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶೀಘ್ರದಲ್ಲಿಯೇ ಶಿಕ್ಷಕರ ವರ್ಗಾವಣೆ ಬಹುನಿರೀಕ್ಷಿತ ಶಿಕ್ಷಕರ‌ ವರ್ಗಾವಣೆ ಪ್ರಕ್ರಿಯೆಗಳನ್ನು 15 ಆಗಸ್ಟ್‌ 2020 ರೊಳಗೆ ಪ್ರಾರಂಭಿಸಬೇಕೆಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವ ಶಿಕ್ಷಕ ಸಮುದಾಯವು ಬಹುದಿನಗಳಿಂದ ವರ್ಗಾವಣೆ ಪ್ರಕ್ರಿಯೆಯನ್ನು ನಿರೀಕ್ಷಿಸುತ್ತಿದ್ದು, ಎಲ್ಲ ತಾಂತ್ರಿಕ ಸಿದ್ಧತೆಗಳನ್ನು ಕೂಡಲೇ ಪೂರ್ಣಗೊಳಿಸಿಕೊಂಡು ವರ್ಗಾವಣೆ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಬೇಕೆಂದು ಸೂಚಿಸಿದ್ದಾರೆ.
ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆಯ ಶಿಕ್ಷೆಗೆ ಒಳಗಾಗಿದ್ದ ಶಿಕ್ಷಕ ಸಮುದಾಯಕ್ಕೆ ಈ ಸಾಲಿನ ವರ್ಗಾವಣಾ ಪ್ರಕ್ರಿಯೆಯಲ್ಲಿ ಮೊದಲ ಆದ್ಯತೆಯ ವರ್ಗಾವಣೆಯನ್ನು ನೀಡಿ ಅನುಕೂಲ ಮಾಡಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಶೀಘ್ರ ವರ್ಗಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಿರ್ದೇಶಿಸಿದರು.
Published by: Latha CG
First published: July 31, 2020, 9:15 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading