Eid ul-Adha 2019: ದೇಶಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ; ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ

ಇಸ್ಲಾಮಿಕ್ ಕ್ಯಾಲೆಂಡರಿನ ದುಲ್ಹಜ್ಜ್ ತಿಂಗಳ 10ರಂದು ಬಕ್ರೀದ್ ಆಚರಿಸಲಾಗುತ್ತಿದ್ದು,  ಈದ್ಗಾ ಮೈದಾನ ಮತ್ತು ಮಸೀದಿಗಳಲ್ಲಿ ವಿಶೇಷ ನಮಾಜ್ ನೆರವೇರುತ್ತದೆ.

Vinay Bhat | news18
Updated:August 12, 2019, 9:59 AM IST
Eid ul-Adha 2019: ದೇಶಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ; ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ
ಬಕ್ರೀದ್ ಸಂಭ್ರಮ
Vinay Bhat | news18
Updated: August 12, 2019, 9:59 AM IST
ಬೆಂಗಳೂರು (. 12): ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್​ ​ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಜ್ಯದಲ್ಲು ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.

ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸೇರಿ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.

'ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯ ಸೇವೆಯನ್ನು ಈದ್‌ ಸಂಕೇತಿಸುತ್ತದೆ. ಈ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗಿರೋಣ' ಎಂದು ರಾಷ್ಟ್ರಪತಿ ಕೋವಿಂದ್ ಶುಭ ಹಾರೈಸಿದ್ದಾರೆ.

 



Karnataka Rains LIVE: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇಂದು ಸಿಎಂ ಯಡಿಯೂರಪ್ಪ ಭೇಟಿ

'ಬಕ್ರೀದ್‌ ಹಬ್ಬದ ಶುಭಾಶಯಗಳೊಂದಿಗೆ, ಈ ಹಬ್ಬ ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸಲಿ' ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

 



ಇಂದು ಮುಂಜಾನೆಯಿಂದಲೇ ಸಾರ್ವಜನಿಕ ಮೈದಾನಗಳಲ್ಲಿ ಎಲ್ಲಾ ಮುಸ್ಲಿಂ ಬಾಂಧವರು ಸೇರಿ ಮಳೆ, ಚಳಿಯನ್ನು ಲೆಕ್ಕಿಸದೆ ಶ್ರದ್ಧೆಯಿಂದ ವಿಶೇಷ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ. ಕಣಿವೆ ರಾಜ್ಯ ಕಾಶ್ಮೀರದಲ್ಲೂ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಇಸ್ಲಾಮಿಕ್ ಕ್ಯಾಲೆಂಡರಿನ 'ದುಲ್ಹಜ್ಜ್' ತಿಂಗಳ 10ರಂದು ಬಕ್ರೀದ್ ಆಚರಿಸಲಾಗುತ್ತಿದ್ದು,  ಈದ್ಗಾ ಮೈದಾನ ಮತ್ತು ಮಸೀದಿಗಳಲ್ಲಿ ವಿಶೇಷ ನಮಾಜ್ ನೆರವೇರುತ್ತದೆ. ಬೆಂಗಳೂರಿನ ಖುದ್ದೂಸ್ ಶಾ ಈದ್ಗಾ ಮೈದಾನ, ಚಾಮರಾಜಪೇಟೆ, ಬನ್ನೇರುಘಟ್ಟ ಸೇರಿದಂತೆ ಹಲವು ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ನಮಾಜ್ ನಡೆಯುತ್ತಿದೆ.

First published:August 12, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...