ನವದೆಹಲಿ: ಇಂದು ನವ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ (Election Commission) ಕರ್ನಾಟಕ ವಿಧಾನಸಭಾ ಎಲೆಕ್ಷನ್ (Karnataka Assembly Election) ಡೇಟ್ ಘೋಷಣೆ ಮಾಡಿತು. ಇಂದಿನಿಂದಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ (Election Code Of Conduct) ಜಾರಿಗೆಯಾಗಲಿದೆ. ಮೇ 10ರಂದು ರಾಜ್ಯದಲ್ಲಿ ಒಂದು ಹಂತದ ಮತದಾನ ನಡೆಯಲಿದೆ. ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ 15ನೇ ವಿಧಾನಸಭೆಯ ಅವಧಿಯೂ ಮೇ 24ಕ್ಕೆ ಅಂತ್ಯವಾಗಲಿದೆ.
80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ
ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ (Senior Citizens) ಮನೆಯಲ್ಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ.
ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರ (Voter) ಅನುಕೂಲಕ್ಕಾಗಿ ಮತದಾನ ಕೇಂದ್ರದಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು.
First-time voters have increased from 2018-19 by 9.17 lakhs in Karnataka. All young voters who are turning 18 years of age by April 1, will be able to vote in Karnataka Assembly elections: Chief Election Commissioner Rajiv Kumar pic.twitter.com/fNlVxVcta6
— ANI (@ANI) March 29, 2023
ಚುನಾವಣಾ ದಿನಾಂಕಗಳು
ಏಪ್ರಿಲ್ 13ರಂದು ಅಧಿಸೂಚನೆ
ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ
ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನ
ಮೇ 10 ರಂದು ವಿಧಾನಸಭೆ ಚುನಾವಣೆ
ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ
ಇದನ್ನೂ ಓದಿ: Karnataka Election Dates 2023 Live Updates: ಚುನಾವಣಾ ಆಯೋಗದ ಸುದ್ದಿಗೋಷ್ಠಿ ಆರಂಭ, ಕೆಲವೇ ಕ್ಷಣಗಳಲ್ಲಿ ಡೇಟ್ ಅನೌನ್ಸ್
15ನೇ ವಿಧಾನಸಭೆಯಲ್ಲಿ ಮೂರು ಸಿಎಂಗಳು
ಕರ್ನಾಟಕ 15ನೇ ವಿಧಾನಸಭಾ ಮೂರು ಸಿಎಂಗಳನ್ನು ಕಂಡಿದ್ದಾರೆ. 2018ರ ಚುನಾವಣಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸ್ಥಾನ ಅಲಂಕರಿಸಿದ್ರು.
ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಗೊಂಡ ಬಳಿಕ ಬಿಜೆಪಿಯ ರಾಜಾಹುಲಿ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ತದನಂತರ ಬದಲಾದ ರಾಜಕೀಯದಲ್ಲಿ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದರಿಂದ ಬಸವರಾಜ್ ಬೊಮ್ಮಾಯಿ ಸಿಎಂ ಕುರ್ಚಿ ಏರಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ