ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Election) ಇಂದು ಮುಹೂರ್ತ ನಿಗದಿಯಾಗಲಿದೆ. ಇಂದು ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission ) ಸುದ್ದಿಗೋಷ್ಠಿ ಕರೆದಿದೆ. ದೆಹಲಿಯಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ಚುನಾವಣಾ ದಿನಾಂಕ (Election Date) ಘೋಷಣೆಗೂ ಮುನ್ನವೇ ಕಾಂಗ್ರೆಸ್ (Congress) 124 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಬಿಜೆಪಿ ಮತ್ತು ಜೆಡಿಎಸ್ (BJP And JDS) ಸಹ ಅಬ್ಬರದ ಪ್ರಚಾರ ನಡೆಸುತ್ತಿವೆ.
ಮುಖ್ಯಮಂತ್ರಿ ಗಳ ಅಭಿವೃದ್ಧಿ ಕಾರ್ಯಕ್ರಮ ರದ್ದು?
ಇಂದು ಚುನಾವಣಾ ದಿನಾಂಕ ಘೋಷಣೆಯಾಗುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (CM Basavaraj Bommai) ಅಭಿವೃದ್ಧಿ ಕಾರ್ಯಕ್ರಮ ರದ್ದಾಗುವ ಸಾಧ್ಯತೆಗಳಿವೆ.
The Election Commission of India will announce the schedule of the General Election to the Legislative Assembly of Karnataka at 11:30am today. pic.twitter.com/Pe6BEWMD9c
— ANI (@ANI) March 29, 2023
ಸುದ್ದಿಗೋಷ್ಠಿ ಕರೆದ ಆರ್ ಅಶೋಕ್
ಕೇಂದ್ರ ಚುನಾವಣಾ ಆಯೋಗಕ್ಕೂ ಮುನ್ನ ರಾಜ್ಯದಲ್ಲಿ ಕಂದಾಯ ಸಚಿವ ಆರ್.ಅಶೋಕ್ (Minister R Ashok) ಬೆಳಗ್ಗೆ 10.45ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ. ಒಳ ಮೀಸಲಾತಿ ವಿರೋಧಿಸಿ ರಾಜ್ಯದಲ್ಲಿ ಬಂಜಾರ ಸಮುದಾಯ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ಇದನ್ನೂ ಓದಿ: Coronavirus: ಎಚ್ಚರ ಕರ್ನಾಟಕ! ಮಹಾರಾಷ್ಟ್ರದಲ್ಲಿ ಕೊರೊನಾಗೆ ಒಂದೇ ದಿನದಲ್ಲಿ 3 ಸಾವು, 450 ಹೊಸ ಕೇಸ್ ಪತ್ತೆ!
ಈ ಸಂಬಂಧ ಆರ್ ಅಶೋಕ್ ಸುದ್ದಿಗೋಷ್ಠಿ ನಡೆಸಲಿದ್ದು, ಬಂಜಾರ ಸಮುದಾಯ ಬಂಡಾಯ ಶಮನಕ್ಕೆ ಹೊಸ ಅಸ್ತ್ರ ಪ್ರಯೋಗಿಸುವ ಸಾಧ್ಯತೆಗಳಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ