ಗ್ರಾ.ಪಂ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿದ ಚುನಾವಣಾ ಆಯೋಗ; ಜಿಲ್ಲಾಡಳಿತಕ್ಕೆ ಸೂಚನೆ

ಇದೀಗ ಆರು ತಿಂಗಳೊಳಗೆ ಚುನಾವಣೆ ನಡೆಸಬೇಕಾಗಿರುವ ಕಾರಣ ಚುನಾವಣಾ ಆಯೋಗ ಕೊನೆಗೂ ಗ್ರಾಮಪಂಚಾಯತ್‌ ಚುನಾವಣೆಗೆ ಹಸಿರು ನಿಶಾನೆ ನೀಡಿದೆ. ಅಲ್ಲದೆ, ಚುನಾವಣೆಗಾಗಿ ಆಡಳಿತಾಧಿಕಾರಿಗಳ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದೆ.

news18-kannada
Updated:July 7, 2020, 9:56 PM IST
ಗ್ರಾ.ಪಂ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿದ ಚುನಾವಣಾ ಆಯೋಗ; ಜಿಲ್ಲಾಡಳಿತಕ್ಕೆ ಸೂಚನೆ
ಸಾಂದರ್ಭಿಕ ಚಿತ್ರ.
  • Share this:
ಬೆಂಗಳೂರು (ಜುಲೈ 07): ಮಾರ್ಚ್‌-ಏಪ್ರಿಲ್‌ನಲ್ಲೇ ನಡೆಯಬೇಕಿದ್ದ ಗ್ರಾಮ ಪಂಚಾಯತ್‌ ಚುನಾವಣೆಯನ್ನು ನಡೆಸಲು ಕೊನೆಗೂ ಚುನಾವಣಾ ಆಯೋಗ ನಿರ್ಧಾರ ಮಾಡಿದೆ ಎನ್ನಲಾಗುತ್ತಿದೆ. ಚುನಾವಣೆಗೆ ಈಗಿನಿಂದಲೇ ಸಿದ್ದತೆ ಆರಂಭಿಸಿರುವ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಹಲವಾರು ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು. ಆದರೆ, ಕೊರೋನಾ ಕಾರಣದಿಂದಾಗಿ ಆಯೋಗ ಚುನಾವಣೆಯನ್ನು ಮುಂದೂಡಿತ್ತು. ಆದರೆ, ಇದೀಗ ಲಭ್ಯವಿರುವ ಮಾಹಿತಿಯ ಪ್ರಕಾರ ಅಕ್ಟೋಬರ್ ನಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತಯಾರಿ ನಡೆಸಿದೆ.

ಚುನಾವಣಾ ಆಯೋಗ ಹೊರಡಿಸಿರುವ ಪ್ರಕಟಣೆ.

ಚುನಾವಣಾ ಆಯೋಗ ಹೊರಡಿಸಿರುವ ಪ್ರಕಟಣೆ.

ಇದೀಗ ಆರು ತಿಂಗಳೊಳಗೆ ಚುನಾವಣೆ ನಡೆಸಬೇಕಾಗಿರುವ ಕಾರಣ ಚುನಾವಣಾ ಆಯೋಗ ಕೊನೆಗೂ ಗ್ರಾಮಪಂಚಾಯತ್‌ ಚುನಾವಣೆಗೆ ಹಸಿರು ನಿಶಾನೆ ನೀಡಿದೆ. ಅಲ್ಲದೆ, ಚುನಾವಣೆಗಾಗಿ ಆಡಳಿತಾಧಿಕಾರಿಗಳ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದೆ.
Published by: MAshok Kumar
First published: July 7, 2020, 9:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading