ಬೆಂಗಳೂರು (ಏ.4): ರಾಜ್ಯದಲ್ಲಿ ಬೆಲೆ ಏರಿಕೆ (Price Rise) ಬಿಸಿ ಸಾರ್ವಜನಿಕರನ್ನು ತಟ್ಟುತ್ತಲೇ ಇದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ (Gas) ದರ ಈಗಾಗಲೇ ಗಗನಕ್ಕೇರಿದೆ. ಇದೀಗ ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಮತ್ತೊಂದು ಶಾಕ್ ಕೊಟ್ಟಿದೆ. ಪ್ರತಿ ಯೂನಿಟ್ ಗೆ 5 ಪೈಸೆ ಏರಿಕೆ ಮಾಡಿದೆ. ಏಪ್ರಿಲ್ 1 ರಿಂದಲೇ ದರ ಏರಿಕೆ ಜಾರಿ ಮಾಡಿರೋದಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅಧ್ಯಕ್ಷ ಮಂಜುನಾಥ್ (Manjunath) ಹೇಳಿದ್ದಾರೆ. ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, (BESCOM) ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಕಳೆದ ಬಾರಿ 1 ರೂಪಾಯಿ 39 ಪೈಸೆ ಹೆಚ್ಚಳಕ್ಕೆ ಪ್ರಸ್ತಾಪ ಇಡಲಾಗಿತ್ತು, KERC ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ ಮಾತ್ರ ಈ ಬಾರಿ ಪ್ರತಿ ಯೂನಿಟ್ ಗೆ ಒಂದು ರೂಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಸಾರ್ವಜನಿಕರಿಗೆ ವಿದ್ಯುತ್ ಶಾಕ್
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡ್ತಿದೆ. ಈ ಬೆನ್ನಲ್ಲೇ ಇದೀಗ ಸಾರ್ವಜನಿಕರಿಗೆ KERC ವಿದ್ಯುತ್ ಶಾಕ್ ನೀಡಿದೆ. ಇಂಧನ ನಿರ್ವಹಣೆ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟು ವಿದ್ಯುತ್ ದರ ಪರಿಷ್ಕರಣೆಗೆ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ವು. ಕಳೆದ ಬಾರಿ 1 ರೂಪಾಯಿ 39 ಪೈಸೆ ಹೆಚ್ಚಳಕ್ಕೆ ಪ್ರಸ್ತಾಪ ಇಡಲಾಗಿತ್ತು, KERC ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ ಮಾತ್ರ ಈ ಬಾರಿ ಪ್ರತಿ ಯೂನಿಟ್ ಗೆ ಒಂದು ರೂಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದ್ರೆ KERC ಪ್ರತಿ ಯೂನಿಟ್ಗೆ 5 ಪೈಸೆ ದರ ಏರಿಕೆ ಮಾಡಿ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ:39.56 ಕೋಟಿ ರೂಪಾಯಿ Electricity Bill ಬಾಕಿ! ಈ ಜಿಲ್ಲೆಯ ಗ್ರಾಮಸ್ಥರ ಬದುಕು ಇನ್ನು ಕತ್ತಲು!
ಯಾವ ವರ್ಷ ಎಷ್ಟೆಷ್ಟು ದರ ಪರಿಷ್ಕರಣೆಯಾಗಿತ್ತು..?
- 2009 ರಲ್ಲಿ ಪ್ರತಿ ಯೂನಿಟ್ ಗೆ 34 ಪೈಸೆ ಹೆಚ್ಚಳ
- 2010 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ
- 2011 ರಲ್ಲಿ ಪ್ರತಿ ಯೂನಿಟ್ ಗೆ 28 ಪೈಸೆ ಹೈಚ್ಚಳ
- 2012 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ ಹೆಚ್ಚಳ
- 2013 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ ಹೈಕ್
- 2017 ರಲ್ಲಿ ಪ್ರತಿ ಯೂನಿಟ್ ಗೆ 48 ಪೈಸೆ ಹೆಚ್ಚಳ
- 2019 ರಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ
- 2020 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ
ಶೀಘ್ರವೇ ಹಾಲು ಕೂಡ ‘ಬಿಸಿ’ಯಾಗೋ ಸಾಧ್ಯತೆ!
ಇನ್ನು ಈ ಏಪ್ರಿಲ್ನಿಂದ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಹಾಲು ಒಕ್ಕೂಟಗಳು ಬೆಲೆ ಏರಿಕೆಗೆ ಪಟ್ಟು ಹಿಡಿದಿದ್ದು, 5 ರೂಪಾಯಿ ಏರಿಕೆಗೆ ಮನವಿ ಮಾಡಿವೆ. ಕನಿಷ್ಠ 2 ರೂಪಾಯಿ ಏರಿಕೆ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದೆ. ಅಧಿವೇಶನ ಮುಗಿದ ಬಳಿಕವೇ ದರ ಏರಿಕೆಗೆ ಅನುಮತಿ ನೀಡಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ: ಹಿಜಾಬ್, ಹಲಾಲ್ ಆಯ್ತು ಇದೀಗ ಮಸೀದಿ ಮೈಕ್ ನಿಷೇಧಕ್ಕೆ ಆಗ್ರಹ; ನಿಮ್ಮ ಅಲ್ಲಾ ಕಿವುಡಾನಾ ಅಂದ್ರು ಈ ಸ್ವಾಮೀಜಿ
ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ
ಕೊರೊನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಜನರಿಗೆ ಈಗ ಮತ್ತೆ ಬೆಲೆ ಏರಿಕೆಯ ಶಾಕ್ ತಟ್ಟಲಿದೆ. ಈಗಾಗಲೇ ದೈನಂದಿನ ವಸ್ತುಗಳ ಬೆಲೆಗಳು ಮುಗಿಲು ಮುಟ್ಟುತ್ತಿದ್ದು, ಜನರು ತತ್ತರಿಸುತ್ತಿದ್ದಾರೆ. ಮೊನ್ನೆಯಷ್ಟೇ LPG ದರ ದುಬಾರಿಯಾಗಿತ್ತು. ಈ ನಡುವೆ ವಿದ್ಯುತ್, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಮತ್ತೆ ಏರಿಕೆಯಾಗುವ ಮುನ್ಸೂಚನೆ ಸಿಕ್ಕಿದೆ. ಇದರ ಬೆನ್ನಲ್ಲೇ ವಿದ್ಯುತ್ ಹಾಗೂ ಅಗತ್ಯ ವಸ್ತುಗಳ ದರ ಏರಿಕೆಯಾದರೆ ಜನರ ಜೇಬಿಗೆ ಮತ್ತಷ್ಟು ಹೊರೆ ಬೀಳಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ