ಬೆಂಗಳೂರು(ಆ.05): ಐಎಂಎ ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ರೋಷನ್ ಬೇಗ್ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಏಕಕಾಲದಲ್ಲಿ ಒಟ್ಟು 6 ಕಡೆ ದಾಳಿ ನಡೆಸಿದ್ದಾರೆ. ದೆಹಲಿಯಿಂದ ಬಂದಿರುವ ಸುಮಾರು 100 ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಎಂಎ ಕೇಸ್ ಸಂಬಂಧ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಶಿವಾಜಿನಗರದ ಕೋಲ್ಸ್ ಪಾರ್ಕ್ ಬಳಿ ಇರುವ ರೋಷನ್ ಬೇಗ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ರೋಷನ್ ಬೇಗ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ರೋಷನ್ ಬೇಗ್ ಐಎಂಎ ಕಂಪನಿಯಿಂದ ಸುಮಾರು 400 ಕೋಟಿ ಪಡೆದಿದ್ದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಬಿಐ ಅಧಿಕಾರಿಗಳೂ ಸಹ ತನಿಖೆ ನಡೆಸಿದ್ದರು.
ಫ್ರೇಜರ್ ಟೌನ್ ನಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮುಂದುವರೆಸಿದ್ದಾರೆ. ಐಎಂಎ ಹಗರಣ ಸಂಬಂಧ 8 ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ನಿಂದ 400 ಕೋಟಿ ಪಡೆದ ಆರೋಪ ಇದೆ. ಜೊತೆಗೆ ವಿದೇಶಗಳಲ್ಲಿ ಕೋಟ್ಯಾಂತರ ರೂಪಾಯಿ ಹೂಡಿಕೆ ಮಾಡಿರುವ ಬಗ್ಗೆ ಇಡಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಐಎಂಎ ಪ್ರಕರಣದ ಕುರಿತು ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.
ಇದನ್ನೂ ಓದಿ:Zameer Ahmed Khan: ಜಮೀರ್ ಅಹ್ಮದ್ಗೆ ಮತ್ತೊಂದು ಶಾಕ್; ಐಟಿ ದಾಳಿ ಬೆನ್ನಲ್ಲೇ ED ಅಧಿಕಾರಿಗಳ ದಾಳಿ
ಅಕ್ರಮ ಹಣದಿಂದ ಕುಟುಂಬಸ್ಥರ ಹೆಸರಲ್ಲಿ ಆಸ್ತಿ ಸಂಪಾದನೆ ಮಾಡಿರುವ ಆರೋಪವೂ ಕೇಳಿ ಬಂದಿದೆ. ರಾಜ್ಯ ಸರ್ಕಾರ ಕೇವಲ 16 ಕೋಟಿ ಆಸ್ತಿಯನ್ನು ಮಾತ್ರ ಜಪ್ತಿ ಮಾಡಿತ್ತು. ಉಳಿದ ಹಣ ಅಕ್ರಮವಾಗಿ ಹೂಡಿಕೆ ಮಾಡಿರುವ ಆರೋಪ ಹಿನ್ನೆಲೆ, ಇಡಿ ಅಧಿಕಾರಿಗಳು ರೋಷನ್ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಸಿಆರ್‌ಪಿಎಫ್ ಭದ್ರತೆ ನೇತೃತ್ವದಲ್ಲಿ ಇಡಿ ಅಧಿಕಾರಿಗಳಿ ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಐಎಎಂ ಕೇಸ್ ನಲ್ಲಿ ಬೇಗ್ ಆಸ್ತಿಯನ್ನು ಮಾಡಲಾಗಿತ್ತು.
ಇದನ್ನೂ ಓದಿ:Gold Price Today: ಮತ್ತೆ ಕಡಿಮೆಯಾದ ಚಿನ್ನದ ಬೆಲೆ; ಇಂದು ಎಷ್ಟಿದೆ ಗೊತ್ತಾ ರೇಟು?
ಇತ್ತೀಚಿಗೆ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ರೋಷನ್ ಬೇಗ್ ಆಸ್ತಿಯನ್ನು ಜಪ್ತಿ ಮಾಡಿತ್ತು. 16.81 ಕೋಟಿ ಮೌಲ್ಯದ ಆಸ್ತಿ ಸೀಜ್ ಮಾಡಿ, ಅಕೌಂಟ್ ಗಳಲ್ಲಿದ್ದ 2.32 ಕೋಟಿ ಹಣವನ್ನು ಜಪ್ತಿ ಮಾಡಲಾಗಿತ್ತು. 8.91 ಕೋಟಿ ಮೌಲ್ಯದ ಸೈಟ್ಗಳನ್ನು ಸೀಜ್ ಮಾಡಲಾಗಿತ್ತು. 42.4 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಸ್ತುಗಳು ಜಪ್ತಿ ಮಾಡಲಾಗಿತ್ತು. 6.80 ಲಕ್ಷ ಮೌಲ್ಯದ ಶೇರ್ ಮತ್ತು ಹೂಡಿಕೆಯನ್ನು ಸೀಜ್ ಮಾಡಲಾಗಿತ್ತು. 1.73 ಕೋಟಿ ಮೌಲ್ಯದ ರೋಷನ್ ವಾಣಿಜ್ಯ ಕಟ್ಟಡಗಳನ್ನು ಸೀಜ್ ಮಾಡಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ