ಐಎಎಸ್ ಪರೀಕ್ಷೆ ಪಾಸಾಗಿ ಸಂದರ್ಶನಕ್ಕೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ - ದರ್ಶನ್ ಸಾಧನೆಗೆ ಜನತೆ ಮೆಚ್ಚುಗೆ

ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಗಿಸಿ ಅಮೆರಿಕಾದಲ್ಲಿ ಸುಮಾರು ಮೂರು ವರ್ಷ ಕೆಲಸ ಮಾಡಿದ್ದರು. ದರ್ಶನ್ ಐಎಎಸ್ ಮಾಡಬೇಕೆಂಬ ಕನಸು ಕಂಡಿದ್ದರು. ಅದಕ್ಕಾಗಿ ಎರಡೂವರೆ ಲಕ್ಷದ ಸಂಬಳದ ಕೆಲಸಕ್ಕೆ ಗುಡ್ ಬೈ ಹೇಳಿ ಊರಿಗೆ ವಾಪಸ್ಸಾಗಿದ್ದರು.

news18-kannada
Updated:January 16, 2020, 7:16 PM IST
ಐಎಎಸ್ ಪರೀಕ್ಷೆ ಪಾಸಾಗಿ ಸಂದರ್ಶನಕ್ಕೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ - ದರ್ಶನ್ ಸಾಧನೆಗೆ ಜನತೆ ಮೆಚ್ಚುಗೆ
ಕನ್ನಡದಲ್ಲಿ ಐಎಎಸ್ ಪಾಸು ಮಾಡಿದ ಇಂಜಿನಿಯರ್ ದರ್ಶನ್​​​​​​
  • Share this:
ಹಾಸನ(ಜ.16) : ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ಯುವಕನೊಬ್ಬ ಕೇಂದ್ರ ಲೋಕಸೇವಾ ಯೋಗ ನಡೆಸುವ ಐಎಎಸ್ ಮುಖ್ಯ ಪರೀಕ್ಷೆಯಲ್ಲಿ ಪಾಸ್ ಆಗಿ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. 

ಜಿಲ್ಲೆಯ ಅರಸೀಕೆರೆ ತಾಲೂಕಿನ ಹರಳಕಟ್ಟ ಗ್ರಾಮದ ದರ್ಶನ್ ಐಎಎಸ್ ಪಾಸ್ ಮಾಡಿರುವ ಯುವಕ. ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಗಿಸಿ ಅಮೆರಿಕಾದಲ್ಲಿ ಸುಮಾರು ಮೂರು ವರ್ಷ ಕೆಲಸ ಮಾಡಿದ್ದರು. ದರ್ಶನ್ ಐಎಎಸ್ ಮಾಡಬೇಕೆಂಬ ಕನಸು ಕಂಡಿದ್ದರು. ಅದಕ್ಕಾಗಿ ಎರಡೂವರೆ ಲಕ್ಷದ ಸಂಬಳದ ಕೆಲಸಕ್ಕೆ ಗುಡ್ ಬೈ ಹೇಳಿ ಊರಿಗೆ ವಾಪಸ್ಸಾಗಿದ್ದರು.

ದೆಹಲಿ, ಬೆಂಗಳೂರಿನಲ್ಲಿ ಕೋಚಿಂಗ್ ಕೂಡ ಪಡೆದಿದ್ದರು. ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದಿರುವ ದರ್ಶನ್ ಎರಡು ಬಾರಿ ಪೂರ್ವಭಾವಿ ಪರೀಕ್ಷೆಯನ್ನು ಕೂಡ ಪಾಸ್ ಮಾಡಿದ್ದರು.

ಇದನ್ನೂ ಓದಿ : ಶಾಂತಿ ಕದಡೋ ದುರುದ್ದೇಶದಿಂದ ಮಾಜಿ ಶಾಸಕರಿಂದ ಪ್ರತಿಭಟನೆ ; ಸತೀಶ್ ಸೈಲ್ ವಿರುದ್ಧ ಶಾಸಕಿ ರೂಪಾಲಿ ನಾಯ್ಕ ಕಿಡಿ

ಇದೀಗ ಮೂರನೇ ಪ್ರಯತ್ನದಲ್ಲಿ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲೆಗೆ, ಕುಟುಂಬಕ್ಕೆ ಕೀರ್ತಿಯನ್ನು ತಂದಿದ್ದಾರೆ.  ಫೆಬ್ರವರಿ ತಿಂಗಳಲ್ಲಿ ಸಂದರ್ಶನ ನಡೆಯಲಿದ್ದು, ಐಎಎಸ್ ಫಲಿತಾಂಶ ಬಂದ ನಂತರ ದರ್ಶನ್ ಇಂದು ಸ್ವಗ್ರಾಮಕ್ಕೆ ಆಗಮಿಸಿದ್ದಾರೆ.

ಗ್ರಾಮಕ್ಕೆ ಆಗಮಿಸಿದ ದರ್ಶನ್ ಅವರಿಗೆ ಸಂಬಂಧಿಕರು ಮತ್ತು ಹಿತೈಷಿಗಳು ಹಾರ ಹಾಕಿ, ಸಿಹಿ ತಿನಿಸಿ ಸಂಭ್ರಮದಿಂದ ಸ್ವಾಗತಿಸಿದ್ದಾರೆ‌.
First published:January 16, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ