• Home
  • »
  • News
  • »
  • state
  • »
  • Siddaramaiah: ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ; ಸಿದ್ದರಾಮಯ್ಯ ಪ್ರಶಂಸೆ

Siddaramaiah: ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ; ಸಿದ್ದರಾಮಯ್ಯ ಪ್ರಶಂಸೆ

ಸಿದ್ದರಾಮಯ್ಯ.

ಸಿದ್ದರಾಮಯ್ಯ.

ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

  • Share this:

    ಬೆಂಗಳೂರು (ಏಪ್ರಿಲ್ 01); ಸಚಿವ ಕೆ.ಎಸ್​. ಈಶ್ವರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈಶ್ವರಪ್ಪ ಮತ್ತು ಯಡಿಯೂರಪ್ಪನವರ ನಡುವೆ ತುಂಬಾ ವರ್ಷಗಳಿಂದ ಶೀತಲ ಸಮರ ನಡೆಯುತ್ತಲೇ ಇದೆ. ಆದರೆ, ನಿನ್ನೆ ಅದು ತಾರಕಕ್ಕೆ ಏರಿತ್ತು. ತಮ್ಮ ಇಲಾಖೆಯಲ್ಲಿ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ರಾಜ್ಯಪಾಲರು ಸೇರಿದಂತೆ ಬಿಜೆಪಿ ಹೈಕಮಾಂಡ್ ನಾಯಕರಿಗೆ ಸಿಎಂ ಬಿಎಸ್​ವೈ ವಿರುದ್ದ ಕೆ.ಎಸ್​. ಈಶ್ವರಪ್ಪ ದೂರು ನೀಡಿದ್ದರು. ರಾಜ್ಯಪಾಲರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಗೃಹ ಸಚಿವ ಅಮಿತ್ ಶಾ ಅವರಿಗೂ ಸಿಎಂ ವಿರುದ್ಧ ಈಶ್ವರಪ್ಪ ದೂರು ನೀಡಿದ್ದರು. ಈ ವಿಚಾರ ಇದೀಗ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಕೋಲಾಹಲವನ್ನೇ ಸೃಷ್ಟಿಸಿದೆ. ಇದರ ಬೆನ್ನಿಗೆ ಇಂದು ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಸಚಿವ ಈಶ್ವರಪ್ಪ ಅವರ ನಡೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



    ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು.



    ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಕರ್ನಾಟಕ ಬಿಜೆಪಿ ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು.



    ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ.



    ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು.



    ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು" ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.



    ಇದೇ ಸಂದರ್ಭದಲ್ಲಿ ಆಪರೇಷನ್ ಕಮಲದ ಬಗ್ಗೆಯೂ ಕಿಡಿಕಾರಿರುವ ಅವರು, "ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು.



    ಆಪರೇಷನ್ ಕಮಲ‌ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು,ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ.



    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, "ನಾ ಖಾವುಂಗಾ, ನಾ ಖಾನೆ ದೂಂಗಾ" ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು "ಮೈ ಬಿ ಖಾವೂಂಗಾ, ತುಮ್ ಬಿ ಖಾವೋ" ಎಂದು ಬದಲಿಸಿ ಬಿಡಿ.



    ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಬಿಜೆಪಿ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ, ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ.



    ರಾಜ್ಯ ಸರ್ಕಾರದ‌ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಬಿಜೆಪಿ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ‌ ಮೂಲಕ ಬಹಿರಂಗಗೊಳಿಸಿದ್ದಾರೆ"ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು