ರಾಮನಗರ (ಜನವರಿ 19); ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಕೆ.ಎಸ್, ಈಶ್ವರಪ್ಪ ಅವರ ಮಕ್ಕಳನ್ನು ಸೈನ್ಯಕ್ಕೆ ಕಳುಹಿಸುತ್ತಾರಾ? ಎಂದು ನಾನು ಪ್ರಶ್ನೆ ಮಾಡಿದ್ದರಲ್ಲಿ ತಪ್ಪೇನಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಲ್ಲದೆ, ಈ ಕುರಿತು ಈಶ್ವರಪ್ಪ ವಿರುದ್ಧ ಟ್ವಿಟರ್ ನಲ್ಲಿ ಮುಗಿಬಿದ್ದಿದ್ದಾರೆ.
ಇತ್ತೀಚೆಗೆ ಸಂಸದ ತೇಜಸ್ವಿ ಸೂರ್ಯ ಹಾಗೂ ಬಲಪಂಥೀಯ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ್ದ ಹೆಚ್ಡಿಕೆ, “ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಯುಗ ಪುರುಷರೇ?” ಎಂದು ಲೇವಡಿ ಮಾಡಿದ್ದರು.
ಹೆಚ್ಡಿಕೆ ಹೇಳಿಕೆಗೆ ಟ್ವೀಟರ್ನಲ್ಲಿ ಕಿಡಿಕಾರಿದ್ದ ಸಚಿವ ಕೆ.ಎಸ್. ಈಶ್ವರಪ್ಪ, “ಅಂದು ತಿನ್ನಲು ಗತಿ ಇಲ್ಲದವರು ಮಾತ್ರ ಸೈನ್ಯಕ್ಕೆ ಸೇರುತ್ತಾರೆ ಎಂದು ಹೇಳಿದ ಈ ಯುಗಪುರುಷ, ಪುಲ್ವಾಮ ದಾಳಿಗೆ ಭಾರತೀಯ ಸೈನ್ಯ ಪ್ರತ್ಯುತ್ತರ ನೀಡಿದಾಗ ಸಂಭ್ರಮಾಚರಣೆ ಮಾಡಬೇಡಿ ಒಂದು ಕೋಮಿಗೆ ಬೇಜಾರಾಗುತ್ತದೆ ಎಂದೂ ತಮ್ಮ ಅಣಿಮುತ್ತುಗಳನ್ನು ಉದುರಿಸಿ ಅತ್ತಿದ್ದರು. ಇಂತಹ ಯುಗಪುರುಷನನ್ನು ಪಡೆದ ಕರ್ನಾಟಕವೇ ಧನ್ಯ. ಅವರ ಯೋಗ್ಯತೆಗೆ ತಕ್ಕ ಮಾತು” ಎಂದು ಪ್ರತ್ಯುತ್ತರ ನೀಡಿದ್ದರು.
ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡವನು ನಾನಲ್ಲ. ನಿಮ್ಮ ಮೇಲೆ ಅತ್ಯಾಚಾರ ನಡೆದರೆ ಸರ್ಕಾರ ಏನು ಮಾಡೋಕಾಗುತ್ತೆ ಎಂದು ವರದಿಗಾರ್ತಿಗೆ ಪೆಕರನಂತೆ ಪ್ರಶ್ನಿಸಿದವನು ನಾನಲ್ಲ.
1/5 https://t.co/7PgLDWrngV
— H D Kumaraswamy (@hd_kumaraswamy) January 18, 2020
ನನ್ನ ಕ್ಷೇತ್ರದಲ್ಲಿ 55 ರಿಂದ 60 ಸಾವಿರ ಮುಸ್ಲಿಂರ ವೋಟ್ ಗಳಿವೆ.ಇದೂವರೆಗೂ ಒಬ್ಬ ಮುಸ್ಲಿಂಮನಿಗೂ ನಮಸ್ಕಾರ ಹೊಡೆದು ವೋಟ್ ಕೇಳಿಲ್ಲ.ಆದ್ರೂ 47ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ. ರಾಷ್ಟ್ರಭಕ್ತ ಮುಸ್ಲಿಂ ಬಿಜೆಪಿಗೆ ವೋಟ್ ಹಾಕ್ತಾನೆ ಪಾಕಿಸ್ತಾನ ಪರ ಇರೋ ಮುಸ್ಲಿಂ ಬಿಜೆಪಿಗೆ ವೋಟ್ ಹಾಕಲು ಹಿಂದೆ ಮುಂದೆ ನೋಡ್ತಾರೆ ಎಂದವನು ನಾನಲ್ಲ.
3/5
— H D Kumaraswamy (@hd_kumaraswamy) January 18, 2020
ನನ್ನ ಕ್ಷೇತ್ರದಲ್ಲಿ 55 ರಿಂದ 60 ಸಾವಿರ ಮುಸ್ಲಿಂರ ವೋಟ್ ಗಳಿವೆ.ಇದೂವರೆಗೂ ಒಬ್ಬ ಮುಸ್ಲಿಂಮನಿಗೂ ನಮಸ್ಕಾರ ಹೊಡೆದು ವೋಟ್ ಕೇಳಿಲ್ಲ. ಆದ್ರೂ 47 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ. ರಾಷ್ಟ್ರಭಕ್ತ ಮುಸ್ಲಿಂ ಬಿಜೆಪಿಗೆ ವೋಟ್ ಹಾಕ್ತಾನೆ ಪಾಕಿಸ್ತಾನ ಪರ ಇರೋ ಮುಸ್ಲಿಂ ಬಿಜೆಪಿಗೆ ವೋಟ್ ಹಾಕಲು ಹಿಂದೆ ಮುಂದೆ ನೋಡ್ತಾರೆ ಎಂದವನು ನಾನಲ್ಲ.
ಕುಂದಗೋಳ ವಿಧಾನಸಭೆ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ,ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವಾಗಿತ್ತು,ಈ ಬಗ್ಗೆ ಸಿದ್ದರಾಮಯ್ಯ ನಾನು ಏನು ಮಾಡಬೇಕು ಎಂದಿದ್ದರು.ಒಂದು ವೇಳೆ ಸಿದ್ದರಾಮಯ್ಯ ಅವರ ಮೊಮ್ಮಗಳ ಮೇಲೆ ಅತ್ಯಾಚಾರ ನಡೆದರೆ ಏನು ಮಾಡುತ್ತಾರೆ ಎಂಬ ಕೀಳು ಮಟ್ಟದ ಹೇಳಿಕೆ ನೀಡಿದವನು ನಾನಲ್ಲ.
4/5
— H D Kumaraswamy (@hd_kumaraswamy) January 18, 2020
ಎಂತೆಂತಹ ಅದ್ಭುತವಾದ ಅಣಿಮುತ್ತುಗಳನ್ನು ಉದುರಿಸಿದ ತಮ್ಮಿಂದ ಯುಗಪುರುಷ ಎಂಬ ಸರ್ಟಿಫಿಕೇಟ್ ಪಡೆಯುವ "ಮೂರ್ಖ ಪುರುಷ" ನಾನಲ್ಲ. ದಿಢೀರ್ ನಿದ್ದೆಯಿಂದ ಎದ್ದಂತೆ ಹಳೆಯ ಹೇಳಿಕೆಗೆ ಟ್ವೀಟ್ ಮಾಡುವವನು ನಾನಲ್ಲ.
5/5
— H D Kumaraswamy (@hd_kumaraswamy) January 18, 2020
ಅಲ್ಲದೆ ಈ ಕುರಿತು ರಾಮನಗರದಲ್ಲಿ ಇಂದು ಹೇಳಿಕೆ ನೀಡಿರುವ ಅವರು” ಈಶ್ವರಪ್ಪ ನಾಲಿಗೆಗೆ ಕಡಿವಾಣ ಹಾಕಿಕೊಳ್ಳಬೇಕು. ಹೌದು..! ನಾನು ಹೇಳಿದ್ದೇನೆ ಯಡಿಯೂರಪ್ಪ, ಈಶ್ವರಪ್ಪ ಅವರ ಮಕ್ಕಳನ್ನ ಕಳಿಸ್ತಾರಾ ಸೈನ್ಯಕ್ಕೆ ಅಂತಾ ನಾನು ಹೇಳಿದ್ದರಲ್ಲಿ ತಪ್ಪೇನಿದೆ? ನಾನು ಈಶ್ವರಪ್ಪ ಬಳಿ ಸಲಹೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ.
ಉದ್ಯೋಗ ಇಲ್ಲದವರು ಸೈನ್ಯಕ್ಕೆ ಸೇರಿದ್ದಾರೆ, ಹಲವಾರು ಸೈನಿಕರು ನನ್ನ ಬಳಿ ತಾವು ಯಾವ ಕೆಟಗರಿ ಅಂತಾ ಹೇಳಿಕೊಂಡಿದ್ದಾರೆ. ಈಶ್ವರಪ್ಪ ಅವರು ತಮ್ಮ ಬಾಯಿ ಚಪಲ, ತೆವಲಿಗೋಸ್ಕರ ಬಾಯಿಗೆ ಬಂದಂತೆ ಮಾತನಾಡಬಾರದು” ಎಂದು ಕಿಡಿಕಾರಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ