ಎತ್ತಿನಹೊಳೆ ಕಾಮಗಾರಿ ಮತ್ತೆ ಪ್ರಾರಂಭ, ಮಾರ್ಚ್ ಅಂತ್ಯಕ್ಕೆ ಪೂರ್ಣ; ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

ಹುಟ್ಟಿನಿಂದಲೂ ನಾನು ಕಾಂಗ್ರೆಸ್ಸಿಗ. ಪಕ್ಷ ಕಡೆಗಣಿಸಿದಾಗಲೇ ನಮ್ಮ ಶಕ್ತಿ ತೋರಿಸಿದ್ದೇವೆ. ನಾನು ರಾಜಣ್ಣ ಅವರೆಲ್ಲ ಸೇರಿ ಸರ್ಕಾರ ಕೆಡವಿದ್ದೇವೆ. ಆದರೆ ರಾಜಣ್ಣ ಅವರು ಬಿಜೆಪಿಗೆ ಬರುತ್ತಿಲ್ಲ. ಆಗಲೂ ಜೊತೆಗಿದ್ದೇವೆ, ಈಗಲೂ ಜೊತೆಗಿದ್ದೇವೆ ಬಿಜೆಪಿಗೆ ಬನ್ನಿ ಎಂದು ರಾಜಣ್ಣ ಅವರಿಗೆ ರಮೇಶ್ ಜಾರಕಿಹೊಳಿ ಆಹ್ವಾನ ನೀಡಿದರು.

ಎತ್ತಿನಹೊಳೆ ಕಾಮಗಾರಿಯ ಸಾಂದರ್ಭಿಕ ಚಿತ್ರ

ಎತ್ತಿನಹೊಳೆ ಕಾಮಗಾರಿಯ ಸಾಂದರ್ಭಿಕ ಚಿತ್ರ

  • Share this:
ತುಮಕೂರು: ಜಲ ಸಂಪನ್ಮೂಲ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಯೋಜನೆಗಳ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇಲಾಖೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿಯಲ್ಲಿ ಎತ್ತಿನಹೊಳೆ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸಕಲೇಶಪುರ ಬಳಿ ಯೋಜನೆಯಲ್ಲಿದ್ದ ಲೋಪ ದೋಷಗಳನ್ನು ಸರಿಪಡಿಸಲಾಗಿದ್ದು, ಮಾರ್ಚ್ ಅಂತ್ಯದೊಳಗೆ ಎತ್ತಿನಹೊಳೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಎತ್ತಿನ ಹೊಳೆ ಕಾಮಗಾರಿಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಭೂಸ್ವಾಧೀನಕ್ಕಾಗಿ 100 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವುದಕ್ಕಾಗಿ ಕಂದಾಯ ಮತ್ತು ಜಲಸಂಪನ್ಮೂಲ ಇಲಾಖೆಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಗುತ್ತಿಗೆದಾರರಿಗೆ ಎಚ್ಚರಿಕೆ

ಕೊರೋನಾ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜಲಸಂಪನ್ಮೂಲ ಇಲಾಖೆ ಕಾಮಗಾರಿಯನ್ನು ವಿಳಂಬಗೊಳಿಸುವಂತಿಲ್ಲ ಎಂದು ಗುತ್ತಿಗೆದಾರರಿಗೆ ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದರು. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಲಸಂಪನ್ಮೂಲ ಇಲಾಖೆಯಲ್ಲಿ ಅನುದಾನಕ್ಕೆ ಕೊರತೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ವೈ ಅವರಿಗೆ ಜಲಸಂಪನ್ಮೂಲ ಇಲಾಖೆಯ ಬಗ್ಗೆ ವಿಶೇಷ ಪ್ರೀತಿ ಇದ್ದು, ಕೊರೋನಾ ಸಂಕಷ್ಟದಲ್ಲಿಯೂ ಇಲಾಖೆಯ ಅನುದಾನವನ್ನು ಕಡಿತಗೊಳಿಸಿಲ್ಲ. ಹಾಗಾಗಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವುದಾಗಿ ಅವರು ಸಚಿವರು ಭರವಸೆ ನೀಡಿದರು.

ಇದನ್ನು ಓದಿ: ‘ಎಂಪಿಎಂಸಿ ಕಾಯ್ದೆಗೆ ತಿದ್ದುಪಡಿ ಕೈಬಿಡಿ, ಇಲ್ಲವಾದರೆ ಹೋರಾಟ ಎದುರಿಸಿ’ - ಸರ್ಕಾರಕ್ಕೆ ಎಚ್​​ಡಿಕೆ ಎಚ್ಚರಿಕೆ

ರಾಜಣ್ಣನಿಗೆ ಆಹ್ವಾನ

ರಾಜ್ಯದಲ್ಲಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಕಾಂಗ್ರೆಸ್ ಇಲ್ಲ. ಪಕ್ಷದಲ್ಲಿ ಮುಖಂಡರಿಗೆ ಬೆಲೆ ಇಲ್ಲ. ಕಾಂಗ್ರೆಸ್ ಪಕ್ಷ ಬಿಟ್ಟು ಬನ್ನಿ ಎಂದರು ಕೆ.ಎನ್. ರಾಜಣ್ಣ ಬರುತ್ತಿಲ್ಲ. ಬಿಜೆಪಿಗೆ ಸೇರ್ಪಡೆಯಾಗುವ ಬಗ್ಗೆ ಮಾಜಿ ಶಾಸಕ ರಾಜಣ್ಣ ಅವರು ತೀರ್ಮಾನ ತೆಗೆದುಕೊಳ್ಳುತ್ತಿಲ್ಲ. ಹುಟ್ಟಿನಿಂದಲೂ ನಾನು ಕಾಂಗ್ರೆಸ್ಸಿಗ. ಪಕ್ಷ ಕಡೆಗಣಿಸಿದಾಗಲೇ ನಮ್ಮ ಶಕ್ತಿ ತೋರಿಸಿದ್ದೇವೆ. ನಾನು ರಾಜಣ್ಣ ಅವರೆಲ್ಲ ಸೇರಿ ಸರ್ಕಾರ ಕೆಡವಿದ್ದೇವೆ. ಆದರೆ ರಾಜಣ್ಣ ಅವರು ಬಿಜೆಪಿಗೆ ಬರುತ್ತಿಲ್ಲ. ಆಗಲೂ ಜೊತೆಗಿದ್ದೇವೆ, ಈಗಲೂ ಜೊತೆಗಿದ್ದೇವೆ ಬಿಜೆಪಿಗೆ ಬನ್ನಿ ಎಂದು ರಾಜಣ್ಣ ಅವರಿಗೆ ರಮೇಶ್ ಜಾರಕಿಹೊಳಿ ಆಹ್ವಾನ ನೀಡಿದರು.

ಈ ವೇಳೆ ಸಂಸದ ಜಿ.ಎಸ್.ಬಸವರಾಜು, ಮಾಜಿ ಶಾಸಕ ಕೆ.ಎನ್.ರಾಜಣ್ಣ, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಲಕ್ಷ್ಮಣ್ ರಾವ್ ಪೇಶ್ವೆ, ಎತ್ತಿನಹೊಳೆ ಮುಖ್ಯ ಎಂಜನಿಯರ್ ಮಾಧವ, ಸೂಪರಿಡೆಂಟ್ ಎಂಜನಿಯರ್ ಶಿವಕುಮಾರ್, ವಿಶೇಷಾಧಿಕಾರಿ ರುದ್ರಯ್ಯ, ಇಇ ರಘುನಂದನ್, ಎಇ ಸುರೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.
First published: