‘ನಾನೋರ್ವ ಆಶಾವಾದಿ; ನನಗೂ ಮಂತ್ರಿಯಾಗುವ ಆಸೆ ಇದೆ‘: ಬಿಜೆಪಿ ಶಾಸಕ ಬಿ.ಸಿ ಪಾಟೀಲ್​​​

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ಹೈಕಮಾಂಡ್​​ ಜತೆ ಚರ್ಚಿಸುವ ಸಲುವಾಗಿ ವಾರಾಂತ್ಯಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​​ ಶಾರೊಂದಿಗೆ ಬಿ.ಎಸ್ ಯಡಿಯೂರಪ್ಪ​​ ಈ ಬಗ್ಗೆ ಚರ್ಚಿಸಲಿದ್ದಾರೆ ಎನ್ನುತ್ತಿವೆ ಉನ್ನತ ಮೂಲಗಳು.

ಬಿ.ಸಿ. ಪಾಟೀಲ್.

ಬಿ.ಸಿ. ಪಾಟೀಲ್.

 • Share this:
  ಹುಬ್ಬಳ್ಳಿ(ಡಿ.28): "ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಮಂತ್ರಿಯಾಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ" ಎನ್ನುವ ಮೂಲಕ ತನಗೂ ಸಚಿವನಾಗಬೇಕು ಎಂಬ ಬಯಕೆ ಶಾಸಕ ಬಿ.ಸಿ ಪಾಟೀಲ್​​​​​ ಬಿಚ್ಚಿಟ್ಟಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಶಾಸಕ ಬಿ.ಸಿ ಪಾಟೀಲ್​​, ಮಂತ್ರಿಯಾಗಲು ಎಲ್ಲರಿಗೂ ಆಸೆ ಇರುತ್ತದೆ. ಆದರೆ, ಆಸೆಪಟ್ಟಂತೆ ಯಾವುದೂ ಆಗುವುದಿಲ್ಲ ಎಂದು ಹೇಳಿದ್ದಾರೆ.

  "ನಾನೋರ್ವ ಆಶಾವಾದಿ. ಯಾವುದೇ ಸಚಿವ ಸ್ಥಾನ ನೀಡಿದರೂ ನಿಭಾಯಿಸುವ ಶಕ್ತಿಯಿದೆ. ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲಿಸುವ ಜಾಯಮಾನ ನನ್ನದಲ್ಲ. ಜಾರ್ಖಂಡ್​​​ ರಾಜ್ಯದ ಚುನಾವಣಾ ಫಲಿತಾಂಶ ಮತ್ತು ದೇಶವ್ಯಾಪಿಯಾಗಿ ಪೌರತ್ವ ಕಾಯ್ದೆ ವಿರುದ್ಧ ಹೋರಾಟ ನಡೆಯುತ್ತಿದೆ. ಇದರಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ" ಎಂದರು.

  ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಸಿಎಂ ಯಡಿಯೂರಪ್ಪಗೆ ನೂತನ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಹಾಗಾಗಿ ಮುಂದಿನ ವರ್ಷ ಜನವರಿ ಮೊದಲ ವಾರದಲ್ಲೇ ಸಚಿವ ಸಂಪುಟ ಮಾಡುವ ನಿರ್ಧಾರ ಸಿಎಂ ಬಿ.ಎಸ್​​ ಯಡಿಯೂರಪ್ಪ ಕೈಗೊಂಡಿದ್ದಾರೆ ಎನ್ನಲಾಗಿದೆ.

  ಇದನ್ನೂ ಓದಿ: ರಾಯಚೂರು ಪ್ರವಾಹ ಸಂತ್ರಸ್ತರ ಬಗ್ಗೆ ತಲೆಕೆಡಿಸಿಕೊಳ್ಳದ ರಾಜ್ಯ ಸರ್ಕಾರ: ಒಂದೊತ್ತು ಊಟಕ್ಕೂ ಪರದಾಡುತ್ತಿರುವ ಜನ

  ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ಹೈಕಮಾಂಡ್​​ ಜತೆ ಚರ್ಚಿಸುವ ಸಲುವಾಗಿ ವಾರಾಂತ್ಯಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​​ ಶಾರೊಂದಿಗೆ ಬಿ.ಎಸ್ ಯಡಿಯೂರಪ್ಪ​​ ಈ ಬಗ್ಗೆ ಚರ್ಚಿಸಲಿದ್ದಾರೆ ಎನ್ನುತ್ತಿವೆ ಉನ್ನತ ಮೂಲಗಳು.

  ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ತವಕದಲ್ಲಿದ್ದಾರೆ. ಸಂಪುಟ ವಿಸ್ತರಣೆ ಮಾಡಿದ ಬಿಜೆಪಿ ಮೂಲೆ ಗುಂಪಾಗಲಿದೆ. ಈಗಾಗಲೇ ಯಶವಂತಪುರ ಶಾಸಕ ಎಸ್​​.ಟಿ ಸೋಮಶೇಖರ್​​ ಸೇರಿದಂತೆ ಹಲವು ನೂತನ ಶಾಸಕರು ಮಾಧ್ಯಮದ ಮುಂದೆ ಈ ಬಗ್ಗೆ ಪರೋಕ್ಷವಾಗಿ ಅಸಮಾನ ತೋಡಿಕೊಂಡಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಭುಗಿಲೇಳುವ ಮುನ್ನವೇ ಸಂಪುಟ ವಿಸ್ತರಣೆ ಮಾಡುವುದು ಒಳಿತು ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್​​ಗೆ ಮನವರಿಕೆ ಮಾಡಲಿದ್ದಾರೆ ಎಂದೇಳಲಾಗುತ್ತಿದೆ.
  Published by:Ganesh Nachikethu
  First published: