Evening Digest: ಕೇಂದ್ರದ ಬಜೆಟ್​ ಮಂಡನೆ; Love Mocktail 2 ಟ್ರೈಲರ್​​ ಬಿಡುಗಡೆ; ಈ ದಿನದ ಸುದ್ದಿಗಳಿವು

Kannada News Today: ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳ ಗುಚ್ಛ ಇಲ್ಲಿದೆ.

ಸಂಜೆ ಸುದ್ದಿ

ಸಂಜೆ ಸುದ್ದಿ

 • Share this:
  ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವರು
  ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ​​ ಅವರು ಕೇಂದ್ರ ಬಜೆಟ್​ನ್ನು ಮಂಡಿಸಿದರು. ಇದು ಮೋದಿ ಸರ್ಕಾರದ 10 ನೇ ಬಜೆಟ್​ ಹಾಗೂ ನಿರ್ಮಲಾ ಸೀತಾರಾಮನ್​ ಹಣಕಾಸು ಸಚಿವರಾದ ಬಳಿಕ ಮಂಡಿಸಿದ 4ನೇ ಬಜೆಟ್ ಆಗಿದೆ. ಈ ವರ್ಷ ಭಾರತದ ಆರ್ಥಿಕ ಬೆಳವಣಿಗೆ ಶೇ.9.2ರಷ್ಟು ಬೆಳವಣಿಗೆಯಾಗಲಿದೆ. ಕೇಂದ್ರ ಬಜೆಟ್ ಮುಂದಿನ 25 ವರ್ಷಗಳಿಗೆ ನೀಲ ನಕ್ಷೆಯಾಗಿದೆ ಎಂದು ಹಣಕಾಸು ಸಚಿವರು ಹೇಳಿದರು. ಆದಾಯ ತೆರಿಗೆ ವಿಷಯದಲ್ಲಿ ಸರ್ಕಾರದಿಂದ ದೊಡ್ಡ ಘೋಷಣೆಯನ್ನು ಜನಸಾಮಾನ್ಯರೂ ನಿರೀಕ್ಷಿಸುತ್ತಿದ್ದರು. ಆದರೆ ಈ ಬಾರಿಯ ಬಜೆಟ್​​ನಲ್ಲಿ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ಇಲ್ಲಿ ಗಮನಾರ್ಹ ಸಂಗತಿಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪೇಪರ್ ಲೆಸ್ ಬಜೆಟ್ ಮಂಡಿಸಿದರು. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ ಆಗಿದೆ.

  ನಿವೃತ್ತ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣ
  ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ರಹಿತ ನೂರಾರು ಕೋಟಿ ರೂ ಹಣ ಪತ್ತೆಯಾಗಿದೆ. ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್​- 50ರಲ್ಲಿರುವ ಮಾಜಿ ಐಪಿಎಸ್​​ ಅಧಿಕಾರಿಗಳ ಮನೆ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಖಲೆ ರಹಿತ ಹಣವನ್ನು ಅಧಿಕಾರಿಗಳು ತಮ್ಮ ಮನೆಯ ನೆಲಅಂತಸ್ತಿನಲ್ಲಿ ಇಟ್ಟಿದ್ದರು. ಈ ನೆಲ ಅಂತಸ್ತಿನಲ್ಲಿ 650 ಲಾಕರ್ ಕೂಡ ಪತ್ತೆಯಾಗಿದೆ

  ಯಲ್ಲಮ್ಮನ ಗುಡಿ ಪ್ರವೇಶ ಮುಕ್ತ
  ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಕೊಂಚ ಕಮ್ಮಿಯಾದ ಬಳಿಕ ದೇವಸ್ಥಾನದಲ್ಲಿ ದರ್ಶನಕ್ಕೆ ನಿರ್ಬಂಧ ಹೇರಿದ್ದ ಆದೇಶ ತೆರವು ಮಾಡಲಾಗಿದೆ. ಸವದತ್ತಿ ಯಲ್ಲಮ್ಮನ ದೇವಸ್ಥಾನ ಸೇರಿದಂತೆ ಜಿಲ್ಲೆಯ ಪ್ರಮುಖ ದೇವಾಲಯ ಓಪನ್ ಆಗಿದ್ದು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೋನಾ ಕೊಂಚ ಇಳಿಮುಖ ಆಗಿದೆ. ಹೀಗಾಗಿ ದೇವಾಲಯದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ.‌ ಬೆಳಗಾವಿಯ ಜಿಲ್ಲೆಯ ಸವದತ್ತಿ ತಾಲೂಕಿನ ಸವದತ್ತಿ ಯಲ್ಲಮ್ಮನ ದೇವಸ್ಥಾನ ಬಾಗಿಲು ಓಪನ್ ಆಗಿದ್ದು, ಸಾರ್ವಜನಿಕ ದರ್ಶನಕ್ಕೆ ವಿಧಿಸಿದ್ದ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ತೆರವು ಮಾಡಿದ್ದಾರೆ.

  ಜನರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ
  ಬಹು ನಿರೀಕ್ಷಿತ ಕೇಂದ್ರ ಸರ್ಕಾರದ ಬಜೆಟ್​ ಮಂಡನೆಯಾಗಿದ್ದು, ಕಳೆದ ವರ್ಷದಂತೆ ಈ ವರ್ಷವೂ ಕಾಗದ ರಹಿತ ಬಜೆಟ್ ಮಾಡಲಾಗಿದೆ. ಬಜೆಟ್ ನಲ್ಲಿ ಜನ ಸಾಮಾನ್ಯರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಇನ್ನು ಈ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಸಬಲೀಕರಣಕ್ಕೂ ಒತ್ತು ನೀಡಿದ್ದಾರೆ. ಆದರೆ ಕರ್ನಾಟಕಕ್ಕೆ ಮಾತ್ರ ಯಾವುದೇ ರೀತಿ ಲಾಭವಿಲ್ಲ ಎಂದು ವಿರೋಧ ಪಕ್ಷದ ಸದಸ್ಯರು ಆರೋಪಿಸಿದ್ದಾರೆ.

  ಉಪ್ಪು-ಖಾರವಿಲ್ಲದ ಬಜೆಟ್
  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ನಾಲ್ಕನೇ ಬಜೆಟ್ ಮಂಡಿಸಿದ್ದು, ಇದು ಬಜೆಟ್ ಎಂಬುದಕ್ಕಿಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕ ಭಾಷಣಗಳಲ್ಲಿ ಹೇಳುವ ಸರ್ಕಾರದ ಸಾಧನೆಯ ಪಟ್ಟಿಯನ್ನು ಎಲ್ಲಾ ಸಂಸದರನ್ನು ಕೂರಿಸಿಕೊಂಡು ಒಪ್ಪಿಸುವಂತಿದೆ. ಒಟ್ಟಾರೆ 39 ಲಕ್ಷ ಕೋಟಿ ರೂಪಾಯಿ ಬಜೆಟ್ ನಲ್ಲಿ ಕೋವಿಡ್ ಪಿಡುಗಿನ ಸಂದರ್ಭ ಕೆಲಸ ಮಾಡಿದವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದು ಬಿಟ್ಟರೆ ಉಳಿದಂತೆ ಸಂಕಷ್ಟಕ್ಕೆ ಸಿಲುಕಿದವರಿಗೆ ಯಾವುದೇ ರೀತಿಯ ಭರವಸೆ ಮೂಡಿಸುವ ಅಂಶಗಳಿಲ್ಲ. ಈ ಬಜೆಟ್ ನಲ್ಲಿ ಉಪ್ಪು, ಉಳಿ, ಖಾರ ಯಾವುದೂ ಇಲ್ಲ. ಕಾರಣ ಮೋದಿ ಅವರು 'ಯಾರೂ ತಿನ್ನಬೇಡಿ' ಎಂದು ಹೇಳಿರುವುದರಿಂದ ಇವರು ಜನಸಾಮಾನ್ಯರೂ ಏನನ್ನೂ ತಿನ್ನದಂತೆ ಮಾಡಲು ಹೊರಟಿದ್ದಾರೆ ಎಂದು ಸಂಸದ ಡಿ.ಕೆ‌.‌ ಸುರೇಶ್ ಹೇಳಿದ್ದಾರೆ.

  ಲವ್​ ಮಾಕ್ಟೇಲ್​ 2 ಟ್ರೈಲರ್​​ ರಿಲೀಸ್​​
  ವ್​ ಮಾಕ್​ಟೈಲ್​ 1 ಸಿನಿಮಾದ ಯಶಸ್ಸಿನಲ್ಲಿರುವಾಗಲೇ ಚಿತ್ರತಂಡ, ಲವ್​ ಮಾಕ್​ಟೈಲ್​ 2 ಸಿನಿಮಾ ಮಾಡುವುದಾಗಿ ಹೇಳಿದ್ದರು. ಇದೀಗ ಸಿನಿಮಾ ಕೂಡ ರೆಡಿಯಾಗಿದೆ. ಸಿನಿಮಾದ ಟ್ರೈಲರ್​ ಕೂಡ ಇಂದು ರಿಲೀಸ್​ ಆಗಿದೆ. ಈ ಟ್ರೈಲರ್​​ನಲ್ಲಿ ಮತ್ತೆ ಆದಿ ನೆನೆಪು ಆವರಿಸಿದೆ. ನಿಧಿಮಾ ನೆನಪಲ್ಲೇ ಆದಿ ಇದ್ದಾರೆ ಎಂಬುಂದು ಈ ಟ್ರೈಲರ್​ನಲ್ಲೇ ತಿಳಿದು ಬರುತ್ತೆ. ಅಷ್ಟೇ ಅಲ್ಲದೇ ಮತ್ತೊಂದು ಮದ್ವೆಗೆ ಆದಿ ರೆಡಿಯಾಗುತ್ತಿದ್ದಾರೆ. ಚಿತ್ರದ ಕಥೆಯನ್ನ ಟ್ರೈಲರ್​ನಲ್ಲಿ ತೋರಿಸಲಾಗಿದೆ. ಮತ್ತೆ ಕಮಾಲ್​ ಮಾಡೋದರಲ್ಲಿ ಯಾವುದೆ ಅನುಮಾನ ಇಲ್ಲ.
  Published by:Seema R
  First published: