Evening Digest: ಬೆಂಗಳೂರಿನ ಅಪಾರ್ಟ್​​ಮೆಂಟ್ಸ್​​ಗೆ ಹೊಸ ರೂಲ್ಸ್: ಬೈಕ್ ಸವಾರರಿಗೆ ‘ನೈಸ್’ ನಿರ್ಬಂಧ: ಇಂದಿನ ಪ್ರಮುಖ ಸುದ್ದಿಗಳು

Kannada News Today: ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳ ಗುಚ್ಛ ಇಲ್ಲಿದೆ.

ಸಂಜೆ ಸುದ್ದಿ

ಸಂಜೆ ಸುದ್ದಿ

  • Share this:
ಬೆಂಗಳೂರಿನ ಅಪಾರ್ಟ್ಮೆಂಟ್ಸ್ಗೆ ಹೊಸ ರೂಲ್ಸ್ : ರಾಜಧಾನಿಯಲ್ಲಿ ಕೊರೋನಾ (Coronavirus) ಹಾಗೂ ಓಮೈಕ್ರಾನ್ (Omicron) ಹೆಚ್ಚಳ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ನಗರದ ನರ್ಸಿಂಗ್ ಕಾಲೇಜು, ಹಾಸ್ಟೆಲ್, ಪಿಜಿಗಳಿಗೆ ಸುತ್ತೋಲೆ ಹೊರಡಿಸಿದೆ. ಕೊರೋನಾ ನಿಯಮಾವಳಿಗಳನ್ನು ತಪ್ಪದೆ ಪಾಲಿಸುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಎರಡು ಡೋಸ್ ಲಸಿಕೆ ಹಾಗೂ ಅಗತ್ಯ ಕ್ರಮ ತೆಗೆದುಕೊಳ್ಳಲು ತಾಕೀತು ಮಾಡಲಾಗಿದೆ. ಕೊರೋನಾ ಹೆಚ್ಚಳವಾದಲ್ಲಿ ತಕ್ಷಣವೇ ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ರವಾನೆ ಕಡ್ಡಾಯ. ಕೊರೋನಾ ಮಿತಿ ಮೀರಿದರೆ ತಾತ್ಕಾಲಿಕವಾಗಿ ಕಾಲೇಜು, ಹಾಸ್ಟೆಲ್, ಪಿಜಿಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ. ನಗರದ ಕೊರೋನಾ ಹಾಟ್ ಸ್ಪಾಟ್ ಗಳಾಗುತ್ತಿರುವ ಅಪಾರ್ಟ್ಮೆಂಟ್ ಗಳ ಸಂಬಂಧವೂ ಪಾಲಿಕೆ ವಿಶೇಷ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ಪೂರ್ತಿ ಓದಿಗಾಗಿ: Bengaluru: ಅಪಾರ್ಟ್​​ಮೆಂಟ್ಸ್​​, ಹಾಸ್ಟೆಲ್ಸ್​​, ಪಿಜಿಗಳಿಗೆ BBMPಯಿಂದ ಹೊಸ ಮಾರ್ಗಸೂಚಿ.. ಸಂಪೂರ್ಣ ಮಾಹಿತಿ ಇಲ್ಲಿದೆ

ಬೈಕ್ ಸವಾರರಿಗೆ ‘ನೈಸ್’ ನಿರ್ಬಂಧ

ಬೆಂಗಳೂರು ಹೊರವಲಯದ ನೈಸ್ ರಸ್ತೆ(Nice road)ನಲ್ಲಿ ಕಳ್ಳಕಾಕರು ಹಾಗೂ ದರೋಡೆಕೋರರ (gangsters) ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ಸಹ ದಾಖಲಾಗಿದೆ. ದರೋಡೆ, ಕಳ್ಳತನಕ್ಕೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ. ಹೀಗಾಗಿಯೇ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ(Two wheelers) ಸಂಚಾರಕ್ಕೆ ನಿರ್ಬಂಧ(Restriction) ಹೇರಲಾಗಿದೆ. ಜನವರಿ 16ರಿಂದ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನಗಳು ನೈಸ್ ರಸ್ತೆಯಲ್ಲಿ ಸಂಚರಿಸುವಂತಿಲ್ಲ. ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ ಆರ್ ರವಿಕಾಂತೇ ಗೌಡ (Dr. B.R. Ravikanthe Gowda IPS, Joint Commissioner of Police, Traffic Bengaluru City) ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರವಾಹನಗಳ ಸಂಚಾರ ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮೊಟಕು
ಮೇಕೆದಾಟು ಯೋಜನೆಗಾಗಿ(Mekedatu Project) ಕಾಂಗ್ರೆಸ್ ನಾಯಕರು(Congress Leaders) ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಾದಯಾತ್ರೆ(Congress Padayatra) 5ನೇ ದಿನಕ್ಕೆ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ. ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರಿಗೆ ಕೊರೋನಾ ಸೋಂಕು (Coronavirus) ತಗುಲಿದೆ. ಈ ಬೆನ್ನಲ್ಲೇ ಪಾದಯಾತ್ರೆ ನಿಲ್ಲಿಸುವಂತೆ ಕಾಂಗ್ರೆಸ್ ಹೈಕಮಾಂಡ್(Congress High Command) ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ಗೆ ಸೂಚನೆ ನೀಡಿದೆ. ಅದರಂತೆ ಇಂದು ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು ಪಾದಯಾತ್ರೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನ ಮಾಡಿದ್ದಾರೆ. ಕೊವೀಡ್ ಕಡಿಮೆ ಆದ ನಂತರ ಪಾದಯಾತ್ರೆಗೆ ಕೈ ನಾಯಕರ ನಿರ್ಧರಿಸಿದ್ದಾರೆ.

ಸಿಎಂ ಆಯ್ಕೆಗೆ SMS ಮೂಲಕ ವೋಟಿಂಗ್
ಪಂಜಾಬ್ ಚುನಾವಣೆಗೆ (Punjab Election) ಇನ್ನೇನು ತಿಂಗಳು ಬಾಕಿ ಉಳಿದಿದೆ. ಈಗಾಗಲೇ ಮಾದರಿ ಪಂಜಾಬ್ ಅನ್ನು ಜನತೆ ಮುಂದಿಟ್ಟಿರುವ ಆಮ್ ಆದ್ಮಿ ಪಕ್ಷದಿಂದ (AAP) ಸಿಎಂ ಅಭ್ಯರ್ಥಿ (CM Candidate) ಯಾರಗಾಗಲಿದ್ದಾರೆ ಎಂಬ ಕುತೂಹಲ ಜನರಲ್ಲಿ ಮೂಡಿತ್ತು. ಈ ಪ್ರಶ್ನೆಗೆ ಉತ್ತರವನ್ನು ಎಎಪಿ ಪ್ರಧಾನ ಸಂಚಾಲಕರೂ ಹಾಗೂ ದೆಹಲಿ ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ (Arvind Kejriwal) ಜನತೆಗೆ ಬಿಟ್ಟಿದ್ದಾರೆ. ತಮ್ಮ ಪಕ್ಷದ ಸಿಎಂ ಅಭ್ಯರ್ಥಿ ಯಾರಾಗ ಬೇಕು ಎಂಬುದನ್ನು ಜನರೇ ನಿರ್ಧರಿಸುತ್ತಾರೆ. ಜನರು ಆಯ್ಕೆ ಮಾಡಿದ ಅಭ್ಯರ್ಥಿಯೇ ಎಎಪಿ ಸಿಎಂ ಆಗಲಿದ್ದಾರೆ ಎಂದಿದ್ದಾರೆ.

ಮೀಟೂ ಕೇಸ್ನಲ್ಲಿ ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್..
2018ರಲ್ಲಿ ಭಾರತೀಯ ಚಿತ್ರರಂಗದಲ್ಲಿ ಒಂದು ವಿಚಾರದ ಸಖತ್ ಸದ್ದು ಮಾಡಿತ್ತು. ಬಾಲಿವುಡ್(Bollywood), ಟಾಲಿವುಡ್(Tollywood), ಕಾಲಿವುಡ್(Kollywood) ಕೊನೆಗೆ ಸ್ಯಾಂಡಲ್ವುಡ್(Sandalwood)ನಲ್ಲೂ ಈ ವಿಚಾರ ಭಾರಿ ಸಂಚಲವನ್ನೇ ಸೃಷ್ಟಿ ಮಾಡಿತ್ತು. ಅದೇ ಮೀಟೂ(Me-too) ಪ್ರಕರಣ. ಬಹುಬಾಷಾ ನಟ ಅರ್ಜುನ್ ಸರ್ಜಾ(Arjun Sarja) ವಿರುದ್ಧ ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್(Sruthi Hariharan) ಮೀಟೂ ಕೇಸ್ ದಾಖಲಿಸಿದ್ದರು. ನನಗೆ ಅರ್ಜುನ್ ಸರ್ಜಾ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೇಳುವ ಮೂಲಕ ಹೊಸ ವಿವಾದವನ್ನೇ ಸೃಷ್ಟಿಸಿದ್ದರು. ಈ ವಿಚಾರ ಎಲ್ಲಕಡೆ ಹಬ್ಬಿಕೊಂಡಿತ್ತು. ಸಾಕಷ್ಟು ಆರೋಪಗಳು, ಪ್ರತ್ಯಾರೋಪಗಳು ಕೇಳಿಬಂದಿತ್ತು. ಆದರೆ, ಅಂದು ಶ್ರುತಿ ಹರಿಹರನ್ ಮಾಡಿದ್ದ ಆರೋಪಗಳಿಗೆ ಇಂದಿಗೂ ಯಾವುದೇ ಸಾಕ್ಷಿ ಸಿಕ್ಕಿಲ್ಲ ಹಾಗಾಗಿ ಪೊಲೀಸರು ನ್ಯಾಯಾಲಯಕ್ಕೆ ಬಿ-ರಿಪೋರ್ಟ್ (B Report) ಸಲ್ಲಿಸಿದ್ದರು. ಈ ವರದಿಗೆ ಶ್ರುತಿ ಹರಿಹರನ್ ಆಕ್ಷೇಪಣೆ ಸಲ್ಲಿಸಿಲ್ಲ. ಈ ಕಾರಣಕ್ಕೆ 8ನೇ ಎಸಿಎಂಎಂ ನ್ಯಾಯಾಲಯ ವರದಿಯನ್ನು ಅಂಗೀಕರಿಸಿದೆ. ಹೀಗಾಗಿ, ಪ್ರಕರಣದಲ್ಲಿ ಅರ್ಜುನ್ ಸರ್ಜಾಗೆ ಗೆಲುವಾಗಿದೆ.
Published by:Kavya V
First published: