ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್
ರಾಜ್ಯದಲ್ಲಿ ಶಾಲಾ ಹಾಗೂ ಕಾಲೇಜುಗಳು ಮೇ 16 ರಿಂದ ಪುನಾರಂಭವಾಗಲಿವೆ ಎಂದು ರಾಜ್ಯ ಸರಕಾರ ಘೋಷಿಸಿದೆ. ಮಕ್ಕಳು ಶಾಲೆಗೆ ಹೋಗಲು ತಯಾರಿ ಕೂಡ ಮಾಡಿಕೊಂಡಿದ್ದಾರೆ. ಇನ್ನು ಬಸ್ ಪಾಸಿನ ಬಗ್ಗೆ ಮಕ್ಕಳು ಹಾಗೂ ಪೋಷಕರಲ್ಲಿ ಗೊಂದಲ ಏರ್ಪಟ್ಟಿತ್ತು. ಹಳೇ ಬಸ್ ಜೂನ್ ವರೆಗೂ ಇದ್ದು ಜೂನ್ವರೆಗೂ ಸ್ಕೂಲ್, ಕಾಲೇಜ್ ಪಾಸ್ಗಳನ್ನು ಬಸ್ಗಳಲ್ಲಿ ಸ್ವೀಕರಿಸುತ್ತಾರಾ ಎಂಬ ಪ್ರಶ್ನೆ ಮೂಡಿತ್ತು ಇದೀಗ KSRTC ತನ್ನ ಪ್ರಕಟಣೆ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಪಾಸ್ ಮಾನ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆ ನೀಡಿದೆ.
ರಾಜ್ಯಸಭೆಗೆ ನಿರ್ಮಲಾ ಸೀತಾರಾಮನ್
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲು ಬಿಜೆಪಿ ಕೋರ್ ಕಮಿಟಿಯಲ್ಲಿ ತೀರ್ಮಾನಿಸಲಾಗಿದೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಮಹತ್ವದ ಕೋರ್ ಕಮಿಟಿ ಸಭೆ ನಡೆದಿದ್ದು, ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲು ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ. ಜೊತೆಗೆ ಕೇಂದ್ರ ವಿತ್ತ ಸಚಿವೆ ನಿರ್ಮನಾ ಸೀತಾರಾಮನ್ ಅವರನ್ನು ಮತ್ತೊಮ್ಮೆ ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಆಜಾನ್ ಕೂಗದಿರಲು ನಿರ್ಧಾರ
ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಮಸೀದಿಗಳು ಇನ್ಮುಂದೆ ಆಜಾನ್ ಕೂಗದಿರಲು ಬೆಂಗಳೂರಿನಲ್ಲಿ ನಿರ್ಧರಿಸಿದೆ. ಈ ಸಂಬಂಧ ಮುಸ್ಲಿಂ ಮುಖಂಡರು ಸಭೆ ನಡೆಸಿದ್ದು, ಅದರಲ್ಲಿ ಇನ್ಮುಂದೆ ಧ್ವನಿ ವರ್ಧಕದ ಮೂಲಕ ಆಜಾನ್ ಕೂಗದಿರಲು ನಿರ್ಧರಿಸಲಾಗಿದೆ. ಧ್ವನಿ ವರ್ಧಕ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ಬೆಳಗ್ಗೆ 5 ಗಂಟೆಗೆ ಆಜಾನ್ ಕೂಗದಿರಲು ನಿರ್ಧರಿಸಲಾಗಿದೆ. ಬೆಳಗ್ಗೆ 6 ಗಂಟೆ ಬಳಿಕ ಪೊಲೀಸರ ಅನುಮತಿ ಪಡೆದು ಆಜಾನ್ ಕೂಗಲು ಅನುಮತಿ ಪಡೆಯಲಾಗಿದೆ
ಬಹುಮಾನ ಘೋಷಿಸಿದ ಕಮಿಷನರ್
ಬೆಂಗಳೂರಲ್ಲಿ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ ನಾಗೇಶ್ನನ್ನು ಬಂಧಿಸಿ ಕರ್ನಾಟಕಕ್ಕೆ ಕರೆತರಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ಪೊಲೀಸರಿಗೆ ಸಿಗದೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಆರೋಪಿ ನಾಗೇಶ್ನನ್ನು ನಿನ್ನೆ ಬಂಧಿಸಲಾಗಿದೆ. ಆರೋಪಿಯನ್ನು ಹಿಡಿದ ಪೊಲೀಸರಿಗೆ (Police) 5 ಲಕ್ಷ ರೂಪಾಯಿ ಬಹುಮಾನ ಧನ ನೀಡೋದಾಗಿ ಕಮಲ್ ಪಂತ್ ಹೇಳಿದ್ದಾರೆ.
ತ್ರಿಪುರಾ ಸಿಎಂ ರಾಜೀನಾಮೆ
ತ್ರಿಪುರಾ ವಿಧಾನಸಭಾ ಚುನಾವಣೆಗೆ ಇನ್ನೇನು ಒಂದು ತಿಂಗಳು ಬಾಕಿ ಇರುವ ಸಮಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಹೈ ಕಮಾಂಡ್ ಸೂಚನೆ ಹಿನ್ನಲೆ ಅವರು ರಾಜೀನಾಮೆ ನೀಡಿದ್ದು, ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರಿಗೆ ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಬಿಪ್ಲಬ್ ದೇಬ್, ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ. ತ್ರಿಪುರಾದಲ್ಲಿ ಬಿಜೆಪಿ ಅಧಿಕಾರವನ್ನು ಮುಂದಿನ ಅವಧಿಗೂ ನಿರೀಕ್ಷೆ ಮಾಡಾಗಿದ್ದು, ಹೆಚ್ಚು ಕಾಲ ಪಕ್ಷವನ್ನು ಅಧಿಕಾರದಲ್ಲಿ ಇಡಬೇಕಿದೆ. ಈ ಹಿನ್ನಲೆ ಈ ನಿರ್ಧಾರ ನಡೆಸಿರುವುದಾಗಿ ತಿಳಿಸಿದ್ದಾರೆ.
ಯುಎಇಗೆ ಹೊಸ ಅಧ್ಯಕ್ಷ
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನರಾದ ಒಂದು ದಿನದ ನಂತರ ಯುಎಇಯ ಮುಂದಿನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸುಪ್ರೀಂ ಕೌನ್ಸಿಲ್ ಶನಿವಾರ ಘೋಷಿಸಿದೆ. 61 ವರ್ಷದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ದೇಶದ ಮೂರನೇ ಅಧ್ಯಕ್ಷರಾಗಲಿದ್ದಾರೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ