Top-5 News: ಮಗಳು ಜಾನಕಿ ಧಾರಾವಾಹಿ ಖ್ಯಾತಿಯ ಮಂಡ್ಯ ರವಿ ಇನ್ನಿಲ್ಲ, ಯಡಿಯೂರಪ್ಪಗೆ ಮತ್ತೆ ಸಂಕಷ್ಟ; ಇಂದಿನ ಟಾಪ್-5 ನ್ಯೂಸ್‌ಗಳು ಇಲ್ಲಿವೆ

ರಾಜ್ಯ, ದೇಶ, ವಿದೇಶದಲ್ಲಿ ಇಂದು ಏನೇನಾಯ್ತು? ರಾಜಕೀಯ, ಉದ್ಯೋಗ, ಕ್ರೀಡೆ, ಸಿನಿಮಾ ಕ್ಷೇತ್ರಗಳ ಅಪ್‌ಡೇಟ್ಸ್ ಏನು? ವಾಣಿಜ್ಯ ಕ್ಷೇತ್ರ ಹೇಗೆ ನಡೀತಿದೆ? ಸೀರಿಯಲ್‌ಗಳಲ್ಲಿ ಏನ್ ಆಗ್ತಿದೆ? ನೀವು ಓದದೇ ಮಿಸ್ ಮಾಡಿಕೊಂಡ ಈ ಸಂಜೆಯ ಬಿಸಿ ಬಿಸಿ ಸುದ್ದಿಗಳು ಇಲ್ಲಿವೆ ಓದಿ..

ಈ ಸಂಜೆಯ ಪ್ರಮುಖ ಸುದ್ದಿಗಳು

ಈ ಸಂಜೆಯ ಪ್ರಮುಖ ಸುದ್ದಿಗಳು

  • Share this:
ಸಿಲಿಕಾನ್ ಸಿಟಿ ಹೋಗಿ ಸಿಂಕ್ ಸಿಟಿ ಆಗಿದೆ- HDK 

ಬೆಂಗಳೂರು (ಸೆ. 14): ಮಳೆಯಿಂದ ರಾಜ್ಯದಲ್ಲಿ ಉಂಟಾದ ಅನಾಹುತಗಳ ಬಗ್ಗೆ ಮಾತಾಡಿ ಮಾಜಿ ಸಿಎಂ H.D ಕುಮಾರಸ್ವಾಮಿ (Kumaraswamy) ವಿಧಾನಸಭೆಯಲ್ಲಿ ಎಲ್ಲರ ಗಮನಸೆಳೆದಿದ್ದಾರೆ. ನಿಯಮ 69ರ  ಅಡಿಯಲ್ಲಿ ಅತಿವೃಷ್ಟಿ (Heavy Rain) ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಕುಮಾರಸ್ವಾಮಿ ರಾಜ್ಯ, ಹಾಗೂ ಕೇಂದ್ರ ಸರ್ಕಾರದ (State And Central Government)  ವಿರುದ್ಧ ಕಿಡಿಕಾರಿದ್ದಾರೆ. ನಮ್ಮ ಬಿಡಿಎ ಮಾಡಿದ ಅನಾಹುತ ಸರಿಪಡಿಸಿಕೊಳ್ಳಲು ಸಾಧ್ಯವಾಗದ ರೀತಿ ಆಗಿದೆ. ಜನರು ಮನೆಗಳಿಗೆ ನೀರು ನುಗ್ಗಿದ್ರಿಂದ ಹೋಟೆಲ್‌ನಲ್ಲಿ ವಾಸ ಮಾಡುವಂತಾಯ್ತು. ನಾನಂತು ಬೆಂಗಳೂರು ನಗರ (Bengaluru City) ವಿಚಾರದಲ್ಲಿ ನಗರಕ್ಕೆ ಮಾರಕ ಆಗುವ ತೀರ್ಮಾನ ತೆಗೆದುಕೊಂಡಿರಲಿಲ್ಲ. ಮನೆಗಳಿಗೆ ನೀರು ನುಗ್ಗಿ ಹೋಟೆಲ್‌ನಲ್ಲಿ ವಾಸವಾಗಿದ್ದಾರೆ.

ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಬೆಂಗಳೂರು (ಸೆ. 14): ಮತ್ತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ (B.S Yediyurappa) ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ (Chief Minister) ಆಗಿದ್ದಾಗ ನಡೆಸಿದ್ದಾರೆ ಎಂಬ ಭ್ರಷ್ಟಾಚಾರ (Corruption) ಆರೋಪ ಪ್ರಕರಣಕ್ಕೆ ಈಗ ನ್ಯಾಯಾಲಯ ಮರುಜೀವ ನೀಡಿದೆ . ಈ ದೂರಿನ ಬಗ್ಗೆ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ಅವರು ಯಡಿಯೂರಪ್ಪ ಮತ್ತು ಆರೋಪ ಹೊತ್ತ ಇತರರ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ಹಾಗೂ ನವೆಂಬರ್ 2 ರ ಒಳಗೆ ವರದಿ ನೀಡುವಂತೆ ಲೋಕಾಯುಕ್ತ ಪೋಲಿಸರಿಗೆ ಕಟ್ಟು ನಿಟ್ಟಿನ ಆದೇಶ ನೀಡಿದ್ದಾರೆ.

ಇದನ್ನೂ ಓದಿ: B S Yediyurappa: ಮತ್ತೆ ಯಡಿಯೂರಪ್ಪಗೆ ಸಂಕಷ್ಟ; ಭ್ರಷ್ಟಾಚಾರದ ಬಗ್ಗೆ ತನಿಖೆಗೆ ಕೋರ್ಟ್​ ಆದೇಶ!

ಕ್ವೀನ್ ಎಲಿಜಬೆತ್ ಅಂತ್ಯಕ್ರಿಯೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಬ್ರಿಟನ್ ರಾಣಿ ಎಲಿಜಬೆತ್ 2 ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತ ಸರ್ಕಾರದ ಪರವಾಗಿ ಅಧಿಕೃತವಾಗಿ ಕ್ವೀನ್ ಎಲಿಜಬೆತ್ 2 ಅವರ ಅಂತ್ಯಕ್ರಿಯೆಯಲ್ಲಿ (Queen Elizabeth Funeral) ಅವರು ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 17ರಂದು ಲಂಡನ್​ಗೆ ಭೇಟಿ ನೀಡಲಿರುವ ಅವರು ಸೆಪ್ಟೆಂಬರ್ 19ರಂದು ಕ್ವೀನ್ ಎಲಿಜಬೆತ್ 2 ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬ್ರಿಟನ್ ರಾಣಿ ಎಲಿಜಬೆತ್ II ನಿಧನಕ್ಕೆ ಬ್ರಿಟನ್​ನಲ್ಲಿ 10 ದಿನಗಳ ಶೋಕಾಚರಣೆ ಘೋಷಿಸಲಾಗಿತ್ತು. ಭಾರತದಲ್ಲೂ 1 ದಿನಗಳ ಶೋಕಾಚರಣೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿತ್ತು. ಬ್ರಿಟನ್ ರಾಣಿ ಎಲಿಜಬೆತ್ II ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿತ್ತು.

ಒಂದೇ ಶಾಲೆಯ ಮೂವರು ಬಾಲಕಿಯರು ನಾಪತ್ತೆ

ಬೆಂಗಳೂರು (ಸೆ.14): ನಗರದಲ್ಲಿ ಮೂವರು ಬಾಲಕಿಯರು (Girls) ನಾಪತ್ತೆಯಾಗಿರೋ ಪ್ರಕರಣ ಬೆಳಕಿಗೆ ಬಂದಿದೆ. ಪುಲಕೇಶಿನಗರ (Pulakeshinagar) ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 3 ವಿದ್ಯಾರ್ಥಿನಿಯರು (Student) ನಾಪತ್ತೆಯಾಗಿದ್ದಾರೆ. ಸೆಪ್ಟೆಂಬರ್ 6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಈ ಸಂಬಂಧ ಪೋಷಕರು (Parents) ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Queen Elizabeth Funeral: ಕ್ವೀನ್ ಎಲಿಜಬೆತ್ ಅಂತ್ಯಕ್ರಿಯೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಮಗಳು ಜಾನಕಿ ಧಾರವಾಹಿ ಖ್ಯಾತಿಯ ಮಂಡ್ಯ ರವಿ ಇನ್ನಿಲ್ಲ

ಮಗಳು ಜಾನಕಿ (Magalu Janaki) ಧಾರಾವಾಹಿ (Serial) ಮೂಲಕ ಕನ್ನಡಿಗರ ಮನಸು ಗೆದ್ದಿದ್ದ ಖ್ಯಾತ ಕಿರುತೆರೆ ಕಲಾವಿದ ಮಂಡ್ಯ ರವಿ (Mandya Ravi) ಅವರು ನಿಧನರಾಗಿದ್ದಾರೆ. ಟಿ.ಎನ್ ಸೀತಾರಾಮ್ ಅವರ ಪ್ರಸಿದ್ಧ ಧಾರಾವಾಹಿಗಳಲ್ಲಿ ನಟಿಸುತ್ತಾ ಬಂದಿರುವ ಹಿರಿಯ ಕನ್ನಡ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಟನೆಯಿಂದ ಕನ್ನಡಿಗರ ಮೆಚ್ಚುಗೆ ಗಳಿಸಿದ್ದರು. ಕನ್ನಡ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟರಾಗಿದ್ದ ಅವರು ಇಂದಿಗೂ ಜನಪ್ರಿಯ ಧಾರಾವಾಹಿಗಳಲ್ಲಿ  (Serial) ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಾ ಕಿರುತೆರೆಯಲ್ಲಿ (Small Screen) ಡಿಮ್ಯಾಂಡ್ ಉಳಿಸಿಕೊಂಡಿದ್ದರು.
Published by:ಪಾವನ ಎಚ್ ಎಸ್
First published: