Evening Digest: ದೇವೇಗೌಡ್ರು ರಾಷ್ಟ್ರಪತಿ ಆಗ್ತಾರಾ? 5ಜಿ ತರಂಗ ಹರಾಜಿಗೆ ಗ್ರೀನ್ ಸಿಗ್ನಲ್; ಇಂದಿನ ಟಾಪ್‌ ನ್ಯೂಸ್‌ಗಳು ಇಲ್ಲಿವೆ

ಇಂದಿನ ಪ್ರಮುಖ ಸುದ್ದಿ ಯಾವುದು? ದೇಶ-ವಿದೇಶಗಳಲ್ಲಿ ಏನೇನಾಯ್ತು? ರಾಜಕೀಯ, ಕ್ರೀಡೆ, ಸಿನಿಮಾ ಕ್ಷೇತ್ರದ ಟಾಪ್ ನ್ಯೂಸ್‌ಗಳೇನು? ನೀವು ಮಿಸ್ ಮಾಡದೆ ಓದಲೇ ಬೇಕಾದ ಟಾಪ್ ಸುದ್ದಿಗಳು ಇಲ್ಲಿವೆ...

ಸಂಜೆ ಸುದ್ದಿ

ಸಂಜೆ ಸುದ್ದಿ

  • Share this:
5ಜಿ ತರಂಗ ಹರಾಜಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

ನವದೆಹಲಿ: ಕೇಂದ್ರ ಸಂಪುಟ‌ ಸಭೆಯಲ್ಲಿ (Union Cabinet) 5ಜಿ ತರಂಗ (5G Telecom Services) ಹರಾಜಿಗೆ ಅನುಮತಿ ನೀಡಲಾಗಿದೆ. ಇದರಿಂದ ದೇಶದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಅತಿ ಹೆಚ್ಚು ವೇಗದ ಅಂತರ್ಜಾಲ ಸೌಲಭ್ಯ ಲಭ್ಯವಾಗಲಿದೆ. 5ಜಿ ಟೆಲಿಕಾಂ ಸೇವೆಗಳಿಗೆ ಸ್ಪೆಕ್ಟ್ರಮ್ ಹರಾಜು ನಡೆಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಸ್ಪೆಕ್ಟ್ರಮ್ ಹರಾಜು ನಡೆಸಲು ದೂರಸಂಪರ್ಕ ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿದೆ, ಅದರ ಮೂಲಕ ಸಾರ್ವಜನಿಕರಿಗೆ ಮತ್ತು ಉದ್ಯಮಗಳಿಗೆ 5G ಸೇವೆಗಳನ್ನು ಒದಗಿಸಲು ಯಶಸ್ವಿ ಸ್ಪೆಕ್ಟ್ರಮ್ ಅನ್ನು ನಿಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ದೇವೇಗೌಡರು ರಾಷ್ಟ್ರಪತಿ ಆಗ್ತಾರಾ?

ದೆಹಲಿ: ದೇಶದಲ್ಲಿ ರಾಷ್ಟ್ರಪತಿ ಚುನಾವಣೆಯ ಕಾವು ದಿನೇ ದಿನೇ ಹೆಚ್ಚುತ್ತಿದೆ. ಭಾರತದ ಮುಂದಿನ ರಾಷ್ಟ್ರಪತಿ (Next President Of India) ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಕ್ಕಾಗಿ ದೇಶದ ಜನರು ಕಾಯುತ್ತಿದ್ದಾರೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (President Ramnath Kovind) ಅವರ ಅವಧಿ ಜುಲೈ 24ರಂದು ಮುಕ್ತಾಯವಾಗಲಿದೆ. ಜುಲೈ 18ರಂದು ಹೊಸ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇದೀಗ ಅಚ್ಚರಿಯ ನಡೆಯೊಂದರಲ್ಲಿ ಮಾಜಿ ಪ್ರಧಾನಿ, ಕರ್ನಾಟಕದ ಹೆಚ್.ಡಿ.ದೇವೇಗೌಡ (HD Deve Gowda) ಅವರು ರಾಷ್ಟ್ರಪತಿ ಆಗಲಿದ್ದಾರಾ? ಎಂಬ ಪ್ರಶ್ನೆಯೊಂದು ದೆಹಲಿಯಿಂದ  ರವಾನೆಯಾಗಿದೆ.  ಹೆಚ್ ಡಿ ದೇವೇಗೌಡ ಅವರ ಹೆಸರು ರಾಷ್ಟ್ರಪತಿ ರೇಸ್​ನಲ್ಲಿ ತೀವ್ರ ಮುನ್ನೆಲೆಗೆ ಬಂದಿದೆ.

ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಬಿಎಂಪಿ ಚುನಾವಣೆ (BBMP Election) ಹಿನ್ನೆಲೆ ಬಿಜೆಪಿ ಸಖತ್ ಆ್ಯಕ್ಟಿವ್​ ಆಗಿದೆ. ಬೆಂಗಳೂರಲ್ಲಿ ನಿನ್ನೆಯಿಂದ ಸಿಎಂ ಬಸವರಾಜ ಬೊಮ್ಮಾಯಿ ನಗರ ಪ್ರದಕ್ಷಿಣೆ ಹಾಕ್ತಿದ್ದಾರೆ. ಇಂದು ಸಹ ಬಸವರಾಜ ಬೊಮ್ಮಾಯಿ (Basavaraj Bommai) ಸಿಟಿ ರೌಂಡ್ಸ್ ​ ಮುಂದುವರಿಸಿದ್ದು, ಹಲವು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ್ರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಂಚ ಬಿಡುವು ಮಾಡಿಕೊಂಡು ಬಸವನಗುಡಿಯ ಗಾಂಧಿ ‌ಬಜಾರ್​ನ ವಿದ್ಯಾರ್ಥಿ ಭವನ ಹೋಟೆಲ್​ಗೆ ತೆರಳಿ ಮಸಾಲೆ ದೋಸೆ ಸವಿದರು.

8ನೇ ಬಾರಿಗೆ ಗೆದ್ದು ದಾಖಲೆ ಬರೆದ ಬಸವರಾಜ ಹೊರಟ್ಟಿ

ಬೆಳಗಾವಿ: ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ (West Teachers Constituency) ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ (Basavaraj Horatti) ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ. ಗೆಲುವಿನ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ 4 ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ ಜಯದ ನಗೆ ಬೀರಿದ್ದಾರೆ. ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ವೇಳೆಗೆ ಹೊರಟ್ಟಿ 7500ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ವಿಧಾನ ಪರಿಷತ್​ನ 2 ಶಿಕ್ಷಕರು ಹಾಗೂ 2 ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ಸಂಜೆಯೊಳಗೆ ನಾಲ್ಕು ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

ನಾಳೆ ಪಿಯುಸಿ ಫಲಿತಾಂಶ ಇಲ್ಲ; ಸುಳ್ಳು ಸುದ್ದಿ ನಂಬಬೇಡಿ

ಬೆಂಗಳೂರು: ನಾಳೆ (ಜೂನ್ 16)  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತೆ ಅಂತ ನಿಮಗೂ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್ ಬಂತಾ? ನಿಮ್ಮ ಕಾಲೇಜಿನ-ಕ್ಲಾಸಿನ ಗ್ರೂಪ್​ಗಳಲ್ಲೂ ಈ ಮೆಸೇಜ್ ಹರಿದಾಡುತ್ತಿದೆಯಾ? ನೀವು ಆ ಮೆಸೇಜ್​ನ್ನು ನಂಬಬೇಡಿ. ಏಕೆಂದರೆ ನಾಳೆ ಅಂದರೆ ಜೂನ್ 16ರಂದೇ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results) ಪ್ರಕಟವಾಗಲಿದೆ ಎಂದು ಸುಳ್ಳು ಸುದ್ದಿಯನ್ನು (Fake Alert) ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ. ಈಕುರಿತು ಸ್ವತಃ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಸ್ಪಷ್ಟನೆ ನೀಡಿದ್ದಾರೆ. ಯಾರೋ ಕಿಡಿಗೇಡಿಗಳು ನಾಳೆಯೇ ದ್ವಿತೀಯು ಪಿಯುಸಿ ಫಲಿತಾಂಶ ಬಿಡುಗಡೆ ಆಗಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
Published by:Pavana HS
First published: