Evening Digest: ಸಿದ್ದು, ಡಿಕೆಶಿಗೆ ಯಡಿಯೂರಪ್ಪ ತಿರುಗೇಟು, SIIMA 2021-ಕನ್ನಡದ 3 ಚಿತ್ರಗಳು ನಾಮಿನೇಟ್; ಈ ಹೊತ್ತಿನ ಟಾಪ್ ನ್ಯೂಸ್‌ಗಳು ಇಲ್ಲಿವೆ

Kannada News Today: ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳ ಗುಚ್ಛ ಇಲ್ಲಿದೆ.

ಸಂಜೆ ಸುದ್ದಿ

ಸಂಜೆ ಸುದ್ದಿ

  • Share this:
ರಾಷ್ಟ್ರಮಟ್ಟದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಸ್ಥಾನ

ದೆಹಲಿ: ಬಿಜೆಪಿ ನೂತನ ಸಂಸದೀಯ ಮಂಡಳಿಯನ್ನು ರಚಿಸಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರಮಟ್ಟದ ಸಂಸದೀಯ ಮಂಡಳಿಯಲ್ಲಿ (BJP Parliamentary Board) ಸ್ಥಾನ ನೀಡಿದೆ. ಈಮೂಲಕ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ ಎಂಬ ಸಂದೇಶವನ್ನು ಬಿಜೆಪಿ (BJP) ರವಾನಿಸಿದೆ.  ಆದರೆ ಹಿರಿಯ ನಾಯಕರಾದ ನಿತಿನ್ ಗಡ್ಕರಿ (Nitin Gadkari) ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿಯ ಪ್ರಮುಖ ಸಂಸದೀಯ ಸಮಿತಿಯಿಂದ ಕೈಬಿಡಲಾಗಿದೆ. ಅಲ್ಲದೇ ಬಿ.ಎಲ್.ಸಂತೋಷ್ ಅವರನ್ನು ಸಹ ಬಿಜೆಪಿ ಸಂಸದೀಯ ಸಮಿತಿಗೆ ಸೇರ್ಪಡೆ ಮಾಡಿಕೊಂಡಿದೆ. ಬಿಜೆಪಿಯ ನೀತಿ ನಿಯಮಗಳನ್ನು ರೂಪಿಸುವ ಅಧಿಕಾರವನ್ನು ಸಂಸದೀಯ ಮಂಡಳಿ ಹೊಂದಿರಲಿದೆ.


ಸಿದ್ದು, ಡಿಕೆಶಿಗೆ ಯಡಿಯೂರಪ್ಪ ತಿರುಗೇಟು

ಮಾಜಿ ಸಿಎಂ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್​ ರಾಷ್ಟ್ರಮಟ್ಟದ ಸಮಿತಿಯಲ್ಲಿ ಸ್ಥಾನಮಾನ ನೀಡಿದ್ದು ಯಡಿಯೂರಪ್ಪ (BS Yediyurappa) ಸಂತಸಗೊಂಡಿದ್ದಾರೆ. ರಾಜ್ಯ ಬಿಜೆಪಿ ಫುಲ್ ಖುಷ್ ಆಗಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಕಾಂಗ್ರೆಸ್ (Congress) ವಿರುದ್ಧ ಆಕ್ರೋಶ ಹೊರಹಾಕಿದ್ರು. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (Dkshi) ವಿರುದ್ಧ ಹರಿಹಾಯ್ದರು. ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್​ ನಾಯಕರ ವಿರುದ್ಧ ಕಿಡಿಕಾರಿದ್ರು. ಜೊತೆಗೆ ಈ ಬಾರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಎಲೆಕ್ಷನ್​ಗೆ (Election) ಹೋಗ್ತೇವೆ ಅಂತಾನೂ ಘೋಷಿಸಿದರು. ಇದೇ ವೇಳೆ ಯಡಿಯೂರಪ್ಪರಿಗೆ ಸಿಎಂ ಬೊಮ್ಮಾಯಿ ಅಭಿನಂದಿಸಿದರು. ಜೊತೆಗೆ ಸಂಪುಟ (Cabinet) ಪುನರ್​ರಚನೆ ಬಗ್ಗೆಯೂ ಸುಳಿವು ಕೊಟ್ಟರು.

ಇದನ್ನೂ ಓದಿ: BS Yediyurappa: ಇವತ್ತಿನಿಂದ ನಿಮ್ಮಾಟವೆಲ್ಲಾ ನಿಲ್ಲುತ್ತಪ್ಪ, ಸಿದ್ದರಾಮಯ್ಯ, ಡಿಕೆಶಿಗೆ ಬಿಎಸ್​​ವೈ ಟಾಂಗ್!

ಮಹಿಳೆಯರಿಗೆ  ಶಾಕ್ ಕೊಟ್ಟ​ ಕೇರಳ ಕೋರ್ಟ್

ಕೋಝಿಕ್ಕೋಡ್(ಆ.17): ಲೈಂಗಿಕ ಕಿರುಕುಳ ಪ್ರಕರಣದ (Sexual Harassment case)  ಆರೋಪಿಗೆ ಕೇರಳ ನ್ಯಾಯಾಲಯ (Kerala Court)ಜಾಮೀನು ಮಂಜೂರು ಮಾಡಿದೆ. ವಾಸ್ತವವಾಗಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಮಹಿಳೆ 'ಲೈಂಗಿಕ ಪ್ರಚೋದನಕಾರಿ ಬಟ್ಟೆಗಳನ್ನು' ಧರಿಸಿದಾಗ ಮೇಲ್ನೋಟಕ್ಕೆ ಆಕರ್ಷಿತವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇಂತಹ ಪರಿಸ್ಥಿತಿಯಲ್ಲಿ, ಈ ಪ್ರಕರಣದಲ್ಲಿ ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತ (Social Activist) ಸಿವಿಕ್ ಚಂದ್ರನ್‌ಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ. 74 ವರ್ಷದ ಆರೋಪಿ ಚಂದ್ರನ್ ತನ್ನ ಜಾಮೀನು ಅರ್ಜಿಯೊಂದಿಗೆ ಮಹಿಳೆಯ ಪ್ರಚೋದನಕಾರಿ ಚಿತ್ರಗಳನ್ನು ಸಹ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ. ಬಳಿಕ ವಿಚಾರಣೆ ವೇಳೆ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

 SIIMA 2021-ಕನ್ನಡದ 3 ಚಿತ್ರಗಳು ನಾಮಿನೇಟ್

ಪ್ರತಿಷ್ಠಿತ ದಕ್ಷಿಣ ಭಾರತದ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಅಥವಾ ‘ಸೈಮಾ 2021’ನೇ (SIIMA 2021) ಸಾಲಿನ ನಾಮನಿರ್ದೇಶನ ಪಟ್ಟಿ ಬಿಡುಗಡೆ ಆಗಿದೆ. ಸೈಮಾ 10ನೇ ಆವೃತ್ತಿ (2021) ಬೆಂಗಳೂರಿನಲ್ಲಿ ಇದೇ ಸೆ.10 ಹಾಗೂ 11ರಂದು ನಡೆಯಲಿದ್ದು, ಬುಧವಾರ ಸೈಮಾ ನಾಮನಿರ್ದೇಶನಗೊಂಡ ಸಿನಿಮಾಗಳ ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಭಾರತದ ವಿವಿಧ ಸಿನಿಮಾಗಳು ಇಲ್ಲಿ ನಾಮನಿರ್ದೇಶನಗೊಂಡಿವೆ. ಕನ್ನಡದಿಂದ ಮೂರು ಚಿತ್ರಗಳು ನಾಮಿನೇಟ್ ಆಗಿವೆ.

ಇದನ್ನೂ ಓದಿ: SIIMA Awards 2021: ಕನ್ನಡದ 3 ಚಿತ್ರಗಳು ನಾಮಿನೇಟ್​; ನಿಮ್ಮ ನೆಚ್ಚಿನ ಚಿತ್ರಕ್ಕೆ ವೋಟ್ ಮಾಡೋದು ಹೇಗೆ?

ಅಪ್ಪು ಸಮಾಧಿ ಸ್ಥಳ ಅಭಿವೃದ್ಧಿಗೆ ಚಿಂತನೆ

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಮ್ಮನ್ನು ಅಗಲಿ 10 ತಿಂಗಳು ಕಳೆದಿದೆ. ಆದ್ರೂ ಅವರ ಪ್ರತಿಯೊಬ್ಬ ಅಭಿಮಾನಿಗಳ ಮನಸ್ಸಿನಲ್ಲಿದ್ದಾರೆ. ಇನ್ನು ಪುನೀತ್ ​ಅವರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavara Bommai) ಅವರು ಕರ್ನಾಟಕ ರತ್ನ ಘೋಷಣೆ ಮಾಡಿದ್ರು. ರಾಜ್ ಕುಟುಂಬದವರ ಜೊತೆಯೂ ಸಿಎಂ ಉತ್ತಮ ಒಡನಾಟ ಹೊಂದಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ರಾಜ್ ಕುಮಾರ್ ಸಮಾಧಿ ,ಪುನೀತ್ ರಾಜ್ ಕುಮಾರ್ ಸಮಾಧಿ ಮತ್ತು ಪಾರ್ವತಮ್ಮ ಸಮಾಧಿ ಇದೆ. ಈ ಸ್ಥಳವನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲಾಗಿದೆ. ಒಂದೇ ಸ್ಥಳದಲ್ಲಿ ರಾಜ್‌ಕುಟುಂಬದ ಮೂವರ ಸಮಾಧಿ ಇದೆ. ಹಾಗಾಗಿ ಈ ಜಾಗದ ಅಭಿವೃದ್ಧಿಗೆ ರಾಜ್‌ಕುಟುಂಬ ಮುಂದಾಗಿದ್ದು, ಈ ಬಗ್ಗೆ ಸಿಎಂ ಜೊತೆ ಚರ್ಚಿಸಿದ್ದಾರೆ.
Published by:Pavana HS
First published: