Evening Digest: ಇಂದಿನಿಂದ ಬಿಜೆಪಿ ಕಾರ್ಯಕಾರಿಣಿ ಸಭೆ; ಟಿಎಂಸಿ ಸೇರಿದ ಬಿಜೆಪಿ ನಾಯಕ: ಇಲ್ಲಿದೆ ಈ ದಿನ ಸುದ್ದಿ ಸಾರಾಂಶ

ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳು

evening digest

evening digest

 • Share this:
  ಬಿಎಸ್​ವೈ ರಾಜ್ಯ ಪ್ರವಾಸ
  ಯಡಿಯೂರಪ್ಪ ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಹಿರಿಯ ನಾಯಕ ಅವರು ಪ್ರವಾಸ ಮಾಡಬಹುದು. ಅದಕ್ಕೆ ಗ್ರೀನ್ ಸಿಗ್ನಲ್ ನೀಡುವ ಅವಶ್ಯಕತೆ ಇಲ್ಲ ಎಂದು ದಾವಣಗೆರೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಬಿಜೆಪಿ ವಿಭಾಗೀಯ ಪ್ರಭಾರಿಗಳು ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್ ಅವರು, ಈಗಾಗಲೇ ಬಗ್ಗೆ ಹಲವಾರು ಸಲ ಈ ಬಗ್ಗೆ ಹೇಳಿರುವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಒಳ್ಳೆಯ ಕೆಲಸ ನಡೆಯುತ್ತಿದೆ. ಸಮಾಜದ ಎಲ್ಲ ಜನಾಂಗದ ಬಗ್ಗೆ ಗಮನ ಹರಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

  ಇಂದಿನಿಂದ ಬಿಜೆಪಿ ಕಾರ್ಯಕಾರಿಣಿ
  ಇಂದಿನಿಂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ (bjp Executive committee meeting) ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯಲಿದೆ. ಬಸವರಾಜ ಬೊಮ್ಮಯಿ ಅವರು ಮುಖ್ಯಮಂತ್ರಿ ಪದವಿ ಅಲಂಕರಿಸಿದ ಬಳಿಕ ನಡೆಯಲಿರುವ ಮೊದಲ ಕಾರ್ಯಕಾರಿಣಿ ಸಭೆ ಇದಾಗಿದೆ. ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆ ಯಲ್ಲಿ ನಡೆಯುವ ರಾಜ್ಯ ಕಾರ್ಯ ಕಾರಿಣಿ ಸಭೆಗೆ ರಾಷ್ಟ-ರಾಜ್ಯ ನಾಯಕರ ದಂಡು ಆಗಮಿಸಲಿದ್ದು, ಇಂದು ಸಂಜೆ ನಗರದ ಅಪೂರ್ವ ರೇಸಾರ್ಟ್ ನಲ್ಲಿ ನಳೀನ್ ಕುಮಾರ್ ಕಟೀಲ್, ಬಿಎಲ್ ಸಂತೋಷ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ ಸಂಜೆ 4 ಗಂಟೆಗೆ ಆರಂಭ ಆಗಲಿದೆ.

  ಪಂಜಾಬ್​ ಸಿಎಂ ಸ್ಥಾನಕ್ಕೆ ಕ್ಯಾ ಅಮರೀಂದರ್​ ರಾಜೀನಾಮೆ
  ಬಹಳ ದಿನಗಳಿಂದ ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ನಡುವಿನ ಜಟಾಪಟಿ ತಾರ್ಕಿಕ ಅಂತ್ಯ ತಲುಪಿದೆ. ಮೊದಲಿಗೆ ರಾಜೀನಾಮೆ ನೀಡಲು ನಿರಾಕರಿಸಿದ್ದ ಅಮರೀಂದರ್ ಸಿಂಗ್ ಅವರು ಶನಿವಾರ‌‌ ಕಾಂಗ್ರೆಸ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ‌. ಈಗ ಪಂಜಾಬಿನ ಹೊಸ ಮುಖ್ಯಮಂತ್ರಿ ಯಾರು ಎಂಬುದು ನಿರ್ಧಾರ ಆಗಬೇಕಿದೆ.

  ಟಿಎಂಸಿ ಸೇರಿದ ಬಿಜೆಪಿ ನಾಯಕ
  ಪಶ್ಚಿಮಬಂಗಾಳದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ. ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬುಲ್ ಸುಪ್ರೀಯೊ ಅವರು ಇಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷ ಸೇರ್ಪಡೆಯಾದರು. ಸುಪ್ರೀಯೋ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸದಸ್ಯರಾದ ದೀರಕ್ ಓಬ್ರೇನ್​ ಉಪಸ್ಥಿತರಿದ್ದರು.

  ಮೂಕ ಮಹಿಳೆ ಮೇಲೆ ಅತ್ಯಾಚಾರ
  ಚಿತ್ರದುರ್ಗದ ತುಪ್ಪದ ಹಳ್ಳಿ ಲಂವಾಹಣಟ್ಟಿ ನಿವಾಸಿ ಮೂವತ್ತೈದು ವರ್ಷದ ವಿಶೇಷ ಚೇತನ ಮೂಕ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಮಾತು ಬಾರದ ಈ ಮೂಕ ಹೆಂಗಸು ದಾವಣಗೆರೆಗೆ ಹೋಗಿ ರಾತ್ರಿ 9:30 ರ ಸುಮಾರಿಗೆ ಬಸ್ಸಿನಲ್ಲಿ ಬಂದು ತುಪ್ಪದಹಳ್ಳಿ ಗ್ರಾಮದಲ್ಲಿ ಇಳಿದಿದ್ದಾರೆ. ಅಲ್ಲಿಂದ ಸ್ವಲ್ಪವೇ ದೂರು ನಡದು ಹೋಗುತ್ತಿದ್ದಂತೆ ಅದೇ ಬಸ್ಸಿನಲ್ಲಿ ಬಂದಿದ್ದ ವ್ಯಕ್ತಿಯೋರ್ವ ಆಕೆಯನ್ನ ಹಿಡಿದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಬಳಿಕ ಮಹಿಳೆಯ ಸಂಬಂಧಿಕರು, ಪೋಲೀಸರಿಗೆ ಮಾಹಿತಿ‌ ನೀಡಿ ಮಹಿಳೆಯನ್ನ ಹೊಳಲ್ಕೆರೆ ತಾಲ್ಲೂಕು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ

  ಮೋದಿ ಹೊಗಳಿದ ಬಾಳೆಹೊನ್ನೂರು ರಂಭಾಪುರಿ ಶ್ರೀ
  ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಓರ್ವ ವ್ಯಕ್ತಿಯಲ್ಲ ಅವರೊಂದು ಶಕ್ತಿ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀ ಪ್ರಸನ್ನ ವೀರಸೋಮೇಶ್ವ ಶಿವಕುಮಾರ ಶಿವಚಾರ್ಯ ಸ್ವಾಮೀಜಿ ಪ್ರಧಾನಿ ನರೇಂದ್ರ ಮೋದಿಯನ್ನ ಹಾಡಿ ಹೊಗಳಿದ್ದಾರೆ.
  Published by:Seema R
  First published: