Evening digest Sep 19: ಪಂಜಾಬ್​​​ಗೆ ಹೊಸ ಸಿಎಂ-ಐವರ ಸಾವು ಪ್ರಕರಣಕ್ಕೆ ಡೈರಿಯಿಂದ ಟ್ವಿಸ್ಟ್​​; ಇಂದಿನ ಪ್ರಮುಖ ಸುದ್ದಿಗಳು

ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳ ಗುಚ್ಛ ಇಲ್ಲಿದೆ.

evening digest

evening digest

  • Share this:
ಪಂಜಾಬ್​ ನೂತನ ಸಿಎಂ ಸುಖಜಿಂದರ ಸಿಂಗ್ ರಾಂಧವ: ಪಂಜಾಬ್ ರಾಜ್ಯ ರಾಜಕೀಯ ಬಿಕ್ಕಟ್ಟು (Punjab Politics) ಇದೀಗ ಮತ್ತೊಂದು ದಿಕ್ಕಿಗೆ ಹೊರಳಿದೆ. ಅನಿಶ್ಚಿತ ಬೆಳವಣಿಗೆಯ ನಡುವೆ ಪಂಜಾಬ್ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ (Captain Amarinder Singh) ಅವರು ಶನಿವಾರ ರಾಜೀನಾಮೆ ಸಲ್ಲಿಸಿದ್ದರು. ಇವರ ಸ್ಥಾನಕ್ಕೆ ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿದು (Navjot Singh Sidu) ಅವರು ಆಯ್ಕೆ ಆಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಹೈಕಮಾಂಡ್ ಇದೀಗ ಅಚ್ಚರಿಯ ಅಭ್ಯರ್ಥಿಯ ಹೆಸರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆ. ಸುಖಜಿಂದರ್ ಸಿಂಗ್ ರಾಂಧವ  (Sukhjinder Singh Randhawa to be the next CM of Punjab) ಅವರು ಪಂಜಾಬ್ ಮುಂದಿನ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲಿದ್ದಾರೆ.

ನಾಳೆ ದ್ವಿತೀಯ ಪಿಯು ಫಲಿತಾಂಶ

ಕೊರೊನಾ (Coronavirus) ಕಾರಣ ದ್ವಿತೀಯ ಪಿಯು ಪರೀಕ್ಷೆ (2nd PUC)ರದ್ದಾಗಿದ್ದ ಕಾರಣ ಪಿಯುಸಿ ಫಲಿತಾಂಶವನ್ನು  ಪ್ರಥಮ ಪಿಯುಸಿ ಮತ್ತು SSLCಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂಕ ನಿಗದಿಗೊಳಿಸಲು ತೀರ್ಮಾನಿಸಲಾಗಿತ್ತು.  ಜತೆಗೆ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ  ಫಲಿತಾಂಶವನ್ನು ಘೋಷಣೆ ಮಾಡಲಾಗಿತ್ತು.  ಆದರೆ ಹಲವಾರು ವಿದ್ಯಾರ್ಥಿಗಳು ಆ ಫಲಿತಾಂಶವನ್ನು  ಒಪ್ಪಿರಲಿಲ್ಲ. ಅದನ್ನು ತಿರಸ್ಕರಿಸಿ ಪರೀಕ್ಷೆ ಬರೆದಿದ್ದರು. ಅದರ ಫಲಿತಾಂಶ ನಾಳೆ ಘೋಷಣೆಯಾಗಲಿದೆ. ಸೆಪ್ಟೆಂಬರ್ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಪರೀಕ್ಷೆ ನಡೆದಿತ್ತು. ಅದರ ಫಲಿತಾಂಶವನ್ನು ನಾಳೆ ಬೆಳಗ್ಗೆ 10. 30  ಸುಮಾರಿಗೆ ಪ್ರಕಟ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಡೆತ್​ ನೋಟ್ ಪತ್ತೆ, ಪರೋಕ್ಷವಾಗಿ ತಂದೆಯೇ ಸಾವಿಗೆ ಕಾರಣ?

ಒಂದೇ ಕುಟುಂಬದ ಐವರು ಸಾವನ್ನಪ್ಪಿದ(Bengaluru mass Suicide) ಪ್ರಕರಣ ಸಂಬಂಧ ಇಂದು ಬ್ಯಾಡರಹಳ್ಳಿ ಪೊಲೀಸರು(Byadarahalli police) ಸ್ಥಳ ಮಹಜರು ನಡೆಸಿದರು.  ಮಹಜರು ವೇಳೆ ಪೊಲೀಸರಿಗೆ ಮನೆಯಲ್ಲಿ ಬಹುಮುಖ್ಯ ಸಾಕ್ಷಿಗಳು ದೊರೆತಿವೆ.  ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ದೃಷ್ಟಿಯಿಂದ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದ ಬಳಿಕ ಪೊಲೀಸರು ಮನೆಗೆ ಬೀಗ ಹಾಕಿದ್ದರು. ನಿನ್ನೆ ಮರಣೋತ್ತರ ಪರೀಕ್ಷೆಯ ನಂತರ ಮೃತರ ಅಂತ್ಯಕ್ರಿಯೆ ಮುಗಿದಿದೆ. ಇಂದು ಪೊಲೀಸರು ಮನೆಯ ಯಜಮಾನ ಶಂಕರ್ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸ್ಥಳ ಮಹಜರು ನಂತರ ನಾಲ್ಕು ಫೋನ್, 3 ಲ್ಯಾಪ್ ಟಾಪ್ ಹಾಗೂ ಕೆಲ ದಾಖಲೆಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇಬ್ಬರು ಹೆಣ್ಮಕ್ಕಳು ಬರೆದಿರುವ ಡೆತ್​ನೋಡ್ ಕೂಡ ಪೊಲೀಸರಿಗೆ ಲಭ್ಯವಾಗಿದೆ. ಗಂಡನ ಮನೆ ತೊರೆದು ತವರು ಸೇರಿದ್ದ ಸಿಂಚನಾ ಮತ್ತು ಸಿಂಧೂರಾಣಿ ಇಬ್ಬರೂ ಸಹ ಸಾಯುವ ಮುನ್ನ ಡೆತ್​ ನೋಟ್ ಬರೆದಿದ್ದಾರೆ. ಆ ಡೆತ್​ನೋಟ್​​ನಲ್ಲಿ ತಮ್ಮ ತಂದೆ ಶಂಕರ್ ವಿರುದ್ಧ ಆರೋಪ ಮಾಡಿದ್ದಾರೆ. ಜೊತೆಗೆ ಇನ್ನೂ ಕೆಲವು ಅಂಶಗಳನ್ನು ಉಲ್ಲೇಖ ಮಾಡಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆ ಮುಕ್ತಾಯ

ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಧಿಕಾರ ನೀಡಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ (BJP Core Committee Meeting) ಚರ್ಚೆ ಆಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ (CM Basavaraja Bommai) ಹೇಳಿದರು. ಬಿಜೆಪಿ ಕಾರ್ಯಕಾರಿಣಿ ಸಭೆ ಮುಕ್ತಾಯವಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ಕಾರ್ಯಕಾರಿಣಿ ಸಭೆ ಯಶಸ್ವಿಯಾಗಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ಸಂಕಲ್ಪ ಮಾಡಿದ್ದೇವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಆಡಳಿತದ ಚುಕ್ಕಾಣಿ ಚುಕುರುಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ  ಎಂದರು.

IPL ಜ್ವರ ಶುರು

ಇಂಡಿಯಾದ ಕ್ರಿಕೆಟ್ ಜಾತ್ರೆ ಶುರುವಾಗಿದೆ.  ಯುಎಇಯಲ್ಲಿ ಇಂದಿನಿಂದ 27 ದಿನಗಳ ಕಾಲ ಐಪಿಎಲ್ ಹಬ್ಬ (IPL 2021 Cricket Carnival) ಇರಲಿದೆ. ಭಾರತದಲ್ಲಿ ಆಯೋಜನೆಗೊಂಡಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಕೊರೋನಾದಿಂದಾಗಿ ಮೇ ತಿಂಗಳಿನಲ್ಲಿ ದಿಢೀರ್ ಸ್ಥಗಿತಗೊಳಿಸಲಾಗಿತ್ತು. ಆಟಗಾರರು ಹಾಗೂ ಸಿಬ್ಬಂದಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಬಿಸಿಸಿಐ ಕಳೆದ ಮೇ 4ರಂದು ಟೂರ್ನಿಯನ್ನು ಸ್ಥಗಿತಗೊಳಿಸಿತ್ತು. ಇದೀಗ ಇಂದಿನಿಂದ ಇನ್ನುಳಿದ 31 ಪಂದ್ಯಗಳು ಆರಂಭವಾಗಲಿದೆ. ಈ ಹೈವೋಲ್ಟೇಜ್ ಕ್ರಿಕೆಟ್ ಜಾತ್ರೆಯನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಪ್ರೇಮಿಗಳು  ಕಾತುರದಿಂದ ಕಾಯುತ್ತಿದ್ದಾರೆ.
Published by:Kavya V
First published: