Evening Digest: ಕೇಂದ್ರದ ನೌಕರರಿಗೆ ದೀಪಾವಳಿ ಬಂಪರ್; ಹೆಂಡತಿಯ ಖಾಸಗಿ ಫೋಟೋಗಳನ್ನು ಹರಿಬಿಟ್ಟ ಗಂಡ; ಇಂದಿನ ಪ್ರಮುಖ ಸುದ್ದಿಗಳು

Kannada news Today: ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳ ಗುಚ್ಛ ಇಲ್ಲಿದೆ.

evening digest

evening digest

  • Share this:
ಕೇಂದ್ರದ ನೌಕರರಿಗೆ ದೀಪಾವಳಿ ಬಂಪರ್ : ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ (central government Employees and pensioner ) ಕೇಂದ್ರ ಸರ್ಕಾರ ದೀಪಾವಳಿಯ ಬಂಪರ್​ ಉಡುಗೊರೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇಕಡ 3 ರಷ್ಟು ಡಿಎ ಭತ್ಯೆ (Dearness Allowance) ಹೆಚ್ಚಿಸಲು ಕೇಂದ್ರ ಸರ್ಕಾರದ ಕ್ಯಾಬಿನೆಟ್​ ಸಮಿತಿ (cabinet committee ) ಅನುಮೋದಿಸಿದೆ. ಕಳೆದ ಮೂರು ತಿಂಗಳ ಹಿಂದೆ ಜುಲೈನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ  ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಡಿಎ (DA) ಮತ್ತು ಡಿಆರ್ (Dearness Relief) ಅನ್ನು ಶೇ 17  ರಿಂದ  ಶೇ 28 ಕ್ಕೆ ಹೆಚ್ಚಿಸಿತು. ಈ ಹೆಚ್ಚಳದ  ಡಿಎ ಮತ್ತು ಡಿಆರ್ ಜುಲೈ 1 ರಿಂದ ಜಾರಿಗೆ ಬಂದಿತು. ಈಗ ಮತ್ತೊಮ್ಮೆ ಶೇಕಡ 3 ರಷ್ಟು ಡಿಎ ಹೆಚ್ಚಿಸಿ ಆದೇಶ ನೀಡಲಾಗಿದೆ. ಈ ಮೂಲಕ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೋವಿಡ್ -19 ಏಕಾಏಕಿ ಜನವರಿ 2020 ರಿಂದ ಜೂನ್ 2021 ರವರೆಗೆ ಡಿಎ ಹೆಚ್ಚಳವನ್ನು 2020 ರಲ್ಲಿ ಸ್ಥಗಿತಗೊಳಿಸಲಾಗಿತು. ಈ ಹಿನ್ನಲೆ ಈಗ ಮತ್ತೊಮ್ಮೆ ಡಿಎ ಹೆಚ್ಚಳಕ್ಕೆ ಕೇಂದ್ರ ಮುಂದಾಗಿದೆ.ಇದಾದ ಬಳಿಕ ಆಗಸ್ಟ್ 2021 ರಿಂದ ಕೇಂದ್ರ ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆಯನ್ನು (HRA) ಕೇಂದ್ರ ಸರ್ಕಾರ ಹೆಚ್ಚಿಸಿತು.

ವಿಧಾನಸೌಧದಿಂದ ತಳಹಂತದವರೆಗೂ ಬೆಟ್ಟಿಂಗ್

ವಿಜಯಪುರ ಜಿಲ್ಲೆಯೂ ಸೇರಿ ರಾಜ್ಯದ ಅನೇಕ ಕಡೆ ಮಟ್ಕಾ, (Matka gambling) ಬೆಟ್ಟಿಂಗ್‌ ದಂಧೆಗಳು (Betting) ಅವ್ಯಾಹತವಾಗಿ ನಡೆಯುತ್ತಿದ್ದು, ಅನೇಕ ಬಡ ಕುಟುಂಬಗಳು ಬೀದಿ ಪಾಲಾಗಿವೆ. ಆದರೂ ರಾಜ್ಯದ ಬಿಜೆಪಿ ಸರಕಾರ (State BJP Government) ಚಕಾರ ಎತ್ತದೇ ಮೌನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ (HD Kumaraswamy) ಅವರು ನೇರ ಆರೋಪ ಮಾಡಿದರು. ಸಿಂಧಗಿ ಕ್ಷೇತ್ರದ ಉಪ ಚುಣಾವಣೆ ನಿಮಿತ್ತ ಪ್ರಚಾರ ಕೈಗೊಂಡಿರುವ ಅವರು ಕ್ಷೇತ್ರದ ಯಂಕಂಚಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ಈ ದಂಧೆಯ ಕಬಂಧಬಾಹುಗಳು ವಿಧಾನಸೌಧದಿಂದ ತಳಹಂತದವರೆಗೂ ವ್ಯಾಪಕವಾಗಿ ಚಾಚಿಕೊಂಡಿದ್ದು, ಸರಕಾರ ಕೈಕಟ್ಟಿ ಕೂತಿದೆ. ಬಡಕುಟುಂಬಗಳು ಇಂಥ ದಂಧೆಗಳಿಗೆ ಸಿಕ್ಕಿ ಬಲಿಯಾಗುತ್ತಿವೆ. ಆ ಕುಟುಂಬಗಳ ಮಕ್ಕಳು ಹೆಚ್ಚು ಬಡ್ಡಿಗೆ ಸಾಲ ಮಾಡಿಕೊಂಡು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಹೆಂಡತಿಯ ಖಾಸಗಿ ಫೋಟೋಗಳನ್ನು ಹರಿಬಿಟ್ಟ ಪತಿ

ಅಸಹಜ ಲೈಂಗಿಕ ಕ್ರಿಯೆಗೆ (unnatural sex) ಪತ್ನಿ ನಿರಾಕರಿಸಿದ ಕಾರಣಕ್ಕೆ ಆಕೆಯ ಕೆಲವು ಖಾಸಗಿ ಫೋಟೋಗಳನ್ನು (objectional photo) ಪತಿ ಸಾಮಾಜಿಕ ಜಾಲತಾಣದಲ್ಲಿ (social Media) ಅಪ್​ಲೋಡ್​ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗಪುರದ (Maharashtra Nagpur) ನಂದನವನದಲ್ಲಿ ನಡೆದಿದೆ. ಈ ಸಂಬಂಧ 21 ವರ್ಷದ ಪತ್ನಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. 27 ವರ್ಷದ ಪತಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೆ ತನ್ನ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ. ಅಲ್ಲದೇ ಈತ ಈಗಾಗಲೇ ಒಂದು ಮದುವೆಯಾಗಿದ್ದು, ಈ ವಿಷಯವನ್ನು ನನ್ನಿಂದ ಮುಚ್ಚಿಟ್ಟಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಕಟೀಲ್ ಜೋಕರ್ ಲೆವೆಲ್ ರಾಜಕಾರಣಿ

ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ (rahul Gandhi) ಡ್ರಗ್​ ಪೆಡ್ಲರ್​​​​​ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ (nalin kumar kateel) ಹೇಳಿಕೆ ವಿರುದ್ಧ ಕಾಂಗ್ರೆಸ್ಸಿಗರು ಕೆಂಡಾಮಂಡಲರಾಗಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah )ಅವರು ಕಟೀಲ್​ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು ನಳೀನ್​ ಕುಮಾರ್​ ಕಟೀಲ್​​​ ಜೋಕರ್ ರಾಜಕಾರಣಿ, ಪ್ರಬುದ್ದ ರಾಜಕಾರಣಿ ಅಲ್ಲ. ಕಟೀಲ್ ತಲೆ ಕೆಟ್ಟಿದೆ ಅಂತ ಕಾಣುತ್ತೆ ಎಂದು ಕಿಡಿಕಾರಿದರು. ಇನ್ನು ಮಾಜಿ ಸ್ಪೀಕರ್​ ರಮೇಶ್ ಕುಮಾರ್​​ನ (ramesh kumar) ಜೈಲಿಗೆ ಕಳಿಸ್ತೀನಿ ಎಂಬ ಸಚಿವ ಕೆ. ಸುಧಾಕರ್ (k sudhakar) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ದುಡ್ಡಿನ ಮದ ಅವರಿಗೆ. ಕಾಂಗ್ರೆಸ್ ನಿಂದ ಗೆದ್ದು ಹೋಗಿದ್ದವರು. ಇಂಥ ದುರಹಂಕಾರದ ಮಾತುಗಳಿಗೆ ಜನ ಬುದ್ದಿ ಕಲಿಸ್ತಾರೆ ಎಂದು ಎಚ್ಚರಿಸಿದರು.

ಅಪ್ರಾಪ್ತನ ಜೊತೆ ಗೃಹಿಣಿಯ ಸರಸ

ಬನಶಂಕರಿ ಠಾಣಾ ವ್ಯಾಪ್ತಿಯ (banashankari police station) ಯಾರಬ್ ನಗರದಲ್ಲಿ(yarab nagar) ನಡೆದಿದ್ದ ಮಹಿಳೆಯ ಕೊಲೆಗೆ ಟ್ವಿಸ್ಟ್ ಸಿಕ್ಕಿದೆ. ನಗರದ ಜನತೆಯನ್ನು ಬೆಚ್ಚಿ ಬೀಳಿಸಿದ್ದ ಒಂಟಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣ ಸಂಬಂಧ ತನಿಖೆ ಕೈಗೊಂಡ ಕೆಲವೇ ಗಂಟೆಗಳಲ್ಲಿ ಬನಶಂಕರಿ ಪೊಲೀಸರು  ಹಂತಕನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.  ಯಾರಬ್ ನಗರದ ಮನೆಯೊಂದರಲ್ಲಿ ನಿನ್ನೆ ಸಂಜೆ 28 ವರ್ಷದ ಅಫ್ರೀಂ ಖನಂ ಎಂಬುವರ ಹತ್ಯೆಯಾಗಿತ್ತು‌.‌  ಮೆಲ್ನೋಟಕ್ಕೆ ಮಹಿಳೆಯ ಕೊಲೆಯನ್ನ ಪತಿಯೇ ಮಾಡಿರಬಹುದು ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತಪಡಿಸಿದ್ದರು‌‌. ಈ ಸಂಬಂಧ ವಿಚಾರಣೆ ನಡೆಸಿದ್ದ ಇನ್ ಸ್ಪೆಕ್ಟರ್ ಪುಟ್ಟಸ್ವಾಮಿ ನೇತೃತ್ವದ ತಂಡ ಮಹಿಳೆಯ ಪತಿ ಹಾಗೂ ಸಂಬಂಧಿಕರನ್ನು ಪ್ರಶ್ನಿಸಿದಾಗ ಹತ್ಯೆಗೆ ಗಂಡನಲ್ಲ, ಸಂಬಂಧಿಕನೇ ಕಾರಣ ಎಂಬುದು ಬಯಲಾಗಿದೆ. ಮಹಿಳೆಯ ಸಂಬಂಧಿಕನಾಗಿದ್ದ 17 ವರ್ಷದ ಬಾಲಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Published by:Kavya V
First published: