Top-5 News: ಅಶ್ವತ್ಥ ನಾರಾಯಣ ತಲೆದಂಡ ಆಗಲೇಬೇಕು ಎಂದ HDK, ಬರಿಗೈಲಿ ಟಾಯ್ಲೆಟ್ ಕ್ಲೀನ್ ಮಾಡಿದ ಬಿಜೆಪಿ ಸಂಸದ; ಇಂದಿನ ಟಾಪ್‌ ನ್ಯೂಸ್ ಇಲ್ಲಿವೆ

ರಾಜ್ಯ, ದೇಶ, ವಿದೇಶದಲ್ಲಿ ಇಂದು ಏನೇನಾಯ್ತು? ರಾಜಕೀಯ, ಉದ್ಯೋಗ, ಕ್ರೀಡೆ, ಸಿನಿಮಾ ಕ್ಷೇತ್ರಗಳ ಅಪ್‌ಡೇಟ್ಸ್ ಏನು? ವಾಣಿಜ್ಯ ಕ್ಷೇತ್ರ ಹೇಗೆ ನಡೀತಿದೆ? ಸೀರಿಯಲ್‌ಗಳಲ್ಲಿ ಏನ್ ಆಗ್ತಿದೆ? ನೀವು ಓದದೇ ಮಿಸ್ ಮಾಡಿಕೊಂಡ ಈ ಸಂಜೆಯ ಬಿಸಿ ಬಿಸಿ ಸುದ್ದಿಗಳು ಇಲ್ಲಿವೆ ಓದಿ

ಸಂಜೆ ಸುದ್ದಿ

ಸಂಜೆ ಸುದ್ದಿ

  • Share this:
ಸಚಿವ ಅಶ್ವತ್ಥ ನಾರಾಯಣ ತಲೆದಂಡ ಆಗಲೇಬೇಕು

ಬೆಂಗಳೂರು (ಸೆ. 23):  ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ (HD Kumarswamy) ಹಾಗೂ ಸಚಿವ ಅಶ್ವತ್ಥ ನಾರಾಯಣ (Minister Ashwattha Narayan) ನಡುವಿನ ವಾಕ್​ ಸಮರ ಮುಂದುವರಿದೆ. ಬಿಎಂಎಸ್‌ ಟ್ರಸ್ಟ್‌ನಲ್ಲಿ ಅಕ್ರಮ ನಡೆದಿದ್ದು, ಉನ್ನತ ಶಿಕ್ಷಣ ಸಚಿವ ಸಿ.ಎನ್‌ ಅಶ್ವತ್ಥ ನಾರಾಯಣ ಕೂಡಲೇ ರಾಜೀನಾಮೆ (Resignation) ನೀಡಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ (Tweet)​ ಮಾಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ನವದೆಹಲಿ (ಸೆ.23):  ಭ್ರಷ್ಟಾಚಾರ (Corruption) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು (Lokayukta Police) ದಾಖಲಿಸಿರುವ ಎಫ್ಐಆರ್‌ನ ತನಿಖೆಗೆ ಸುಪ್ರೀಂ ಕೋರ್ಟ್ (Supreme Court) ತಡೆಯಾಜ್ಞೆ ನೀಡಿದೆ.  12 ಕೋಟಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ (Investigation) ಅಸ್ತು ಎಂದಿರುವ ಕರ್ನಾಟಕ ಹೈಕೋರ್ಟ್​ನ ತೀರ್ಪು ಪ್ರಶ್ನಿಸಿ ಮಾಜಿ ಸಿಎಂ ಬಿಎಸ್​ವೈ ಸುಪ್ರೀಂಕೋರ್ಟ್​ ಮೆಟ್ಟಿಲು ಏರಿದ್ದು, ಇಂದು ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​​,  ಪ್ರಕರಣದ ತನಿಖೆಗೆ ತಡೆ ನೀಡಿದ್ದು, ಪ್ರತಿವಾದಿಗಳಿಗೆ ನೋಟಿಸ್ (Notice)​ ಜಾರಿ ಮಾಡಿದೆ.

ಇದನ್ನೂ ಓದಿ: B S Yediyurappa: ಮಾಜಿ ಸಿಎಂ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್; ಲಂಚ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್​ ತಡೆ

ಬರಿಗೈಲಿ ಟಾಯ್ಲೆಟ್ ಕ್ಲೀನ್ ಮಾಡಿದ ಬಿಜೆಪಿ ಸಂಸದ!

ಬಿಜೆಪಿ ಸಂಸದರೊಬ್ಬರು ಬರಿಗೈಲಿ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ. ಸದ್ಯ ಈ ವಿಡಿಯೋ ಭಾರೀ ವೈರಲ್ (Viral Video) ಆಗಿದೆ. ಬಾಲಕಿಯರ ಹಾಸ್ಟೇಲ್​ನ ಶೌಚಾಲಯವನ್ನು ಮಧ್ಯ ಪ್ರದೇಶ ಬಿಜೆಪಿ ಸಂಸದ (Madhya Pradesh BJP MP Viral Video) ಜನಾರ್ಧನ್ ಮಿಶ್ರಾ ಬರಿ ಕೈಯಲ್ಲಿ ಸ್ವಚ್ಛಗೊಳಿಸಿದ್ದಾರೆ.  ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಸ್ವಚ್ಛತೆ ಮತ್ತು ಸೇವೆಗೆ ಸಂಬಂಧಿಸಿದ ಯೋಜನೆಗಾಗಿ ಬರಿಗೈಲಿ ಬಾಲಕಿಯರ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾಗಿ ಮಧ್ಯ ಪ್ರದೇಶ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ (BJP MP Janardan Mishra) ತಿಳಿಸಿದ್ದಾರೆ.

ಗಾಂಧಿ ಕುಟುಂಬದ ಯಾರೂ ಕಾಂಗ್ರೆಸ್ ಅಧ್ಯಕ್ಷರಾಗಲ್ಲ

ದೆಹಲಿ: ಗಾಂಧಿ ಕುಟುಂಬದಿಂದ ಯಾರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಬಾರದೆಂದು (Congress President Poll) ಸ್ವತಃ ರಾಹುಲ್ ಗಾಂಧಿಯವರೇ (Rahul Gandhi) ಸ್ಪಷ್ಟಪಡಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಗೆಹ್ಲೋಟ್  (Ashok Gehlot) ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ  ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ (Congress President Election) ಖಚಿತಪಡಿಸಿದ ಅವರು ರಾಜಸ್ಥಾನದ ಮುಖ್ಯಮಂತ್ರಿಯಾಗಿ ಯಾರನ್ನು ಬದಲಿಸಬೇಕು ಎಂಬುದರ ಕುರಿತು ಯಾವುದೇ ನಿರ್ಧಾರವನ್ನು ಸೋನಿಯಾ ಗಾಂಧಿ (Sonia Gandhi) ನಿರ್ಧರಿಸುತ್ತಾರೆ  ಎಂದು ಸಹ ತಿಳಿಸಿದ್ದಾರೆ.

ಇದನ್ನೂ ಓದಿ: Congress President Election: ಗಾಂಧಿ ಕುಟುಂಬದ ಯಾರೂ ಕಾಂಗ್ರೆಸ್ ಅಧ್ಯಕ್ಷರಾಗಲ್ಲ; ಅಶೋಕ್ ಗೆಹ್ಲೋಟ್

ತಾಯಿ ಅಗಲಿಕೆಯ ನೋವಲ್ಲೂ ಕರ್ತವ್ಯಕ್ಕೆ ಹಾಜರಾದ ಇನ್ಸ್​ಪೆಕ್ಟರ್​

ಹುಬ್ಬಳ್ಳಿ (ಸೆ.23): ಸಿನಿಮೀಯ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಪನಗರ ಠಾಣೆ ಇನ್ಸ್ ಪೆಕ್ಟರ್ (Police Inspector) ರವಿಚಂದ್ರ ಬಡಫಕೀರಪ್ಪನವರ್ ಯಶಸ್ವಿಯಾಗಿದ್ದಾರೆ. ಒಂದೇ ವಾರದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ಅವಳಿ ನಗರದಲ್ಲಿ ನಡೆದಿದ್ದವು. ಆಗ ಉಪನಗರ ಠಾಣೆಯಲ್ಲೂ ಕೂಡ ಕಳ್ಳತನವಾಗಿತ್ತು. ಈ ಸಂದರ್ಭದಲ್ಲಿ ಇನ್ಸ್ ಪೆಕ್ಟರ್ ರವಿಚಂದ್ರ ಅವರ ತಾಯಿ (Mother) ಹೃದಯ ಸಂಬಂಧಿ ಖಾಯಿಲೆಯಿಂದ ಮೃತಪಟ್ಟಿದ್ದರು (Death). ಆದ್ರೆ ತಾಯಿ ಅಗಲಿಕೆ ನಡುವೆಯೇ ಮೂರು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾದ ರವಿಚಂದ್ರ ಅವರು ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Published by:ಪಾವನ ಎಚ್ ಎಸ್
First published: