Evening Digest: ಜೊತೆ ಜೊತೆಯಲಿ ಸೇರುತ್ತಾರಾ ಈ ನಟ, ತುಮಕೂರಲ್ಲಿ ಭೀಕರ ಅಪಘಾತ! ಇಂದಿನ ಟಾಪ್ ಸುದ್ದಿಗಳು ಇಲ್ಲಿವೆ

ರಾಜ್ಯ, ದೇಶ, ವಿದೇಶದಲ್ಲಿ ಇಂದು ಏನೇನಾಯ್ತು? ರಾಜಕೀಯ, ಉದ್ಯೋಗ, ಕ್ರೀಡೆ, ಸಿನಿಮಾ ಕ್ಷೇತ್ರಗಳ ಅಪ್‌ಡೇಟ್ಸ್ ಏನು? ವಾಣಿಜ್ಯ ಕ್ಷೇತ್ರ ಹೇಗೆ ನಡೀತಿದೆ? ಸೀರಿಯಲ್‌ಗಳಲ್ಲಿ ಏನ್ ಆಗ್ತಿದೆ? ನೀವು ಓದದೇ ಮಿಸ್ ಮಾಡಿಕೊಂಡ ಈ ಸಂಜೆಯ ಬಿಸಿ ಬಿಸಿ ಸುದ್ದಿಗಳು ಇಲ್ಲಿವೆ ಓದಿ...

ಈ ಸಂಜೆಯ ಪ್ರಮುಖ ಸುದ್ದಿಗಳು

ಈ ಸಂಜೆಯ ಪ್ರಮುಖ ಸುದ್ದಿಗಳು

  • Share this:
ಜೊತೆ ಜೊತೆಯಲಿ ಆರ್ಯವರ್ಧನ್ ಪಾತ್ರಕ್ಕೆ ಇವರು ಜೀವ ತುಂಬ್ತಾರಾ?

ಜೊತೆ ಜೊತೆಯಲಿ (Jothe Jotheyali) ಸೀರಿಯಲ್ (Serial), ಜೀ ಕನ್ನಡದ (Zee Kannada) ಜನಪ್ರಿಯ ಧಾರಾವಾಹಿಗಳಲ್ಲಿ ಒಂದು. ಪ್ರೀತಿಗೆ ವಯಸ್ಸಿನ ಅಂತರ ಇಲ್ಲ ಎಂದು ತೋರಿಸಿಕೊಟ್ಟ ಸೀರಿಯಲ್. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8.30ಕ್ಕೆ ಜನ ಟಿವಿ ಮುಂದೆ ಕೂರುವಂತೆ ಮೋಡಿ ಮಾಡಿರುವ ಸೀರಿಯಲ್. ನಟ ಆರ್ಯವರ್ಧನ್ , ನಟಿ ಅನು ಸಿರಿಮನೆ. ಅನು, ಆರ್ಯವರ್ಧನ್‍ಗಿಂತ 20 ವರ್ಷ ಚಿಕ್ಕವಳು ಆದರೂ ಅವರನ್ನೇ ಪ್ರೀತಿಸಿ, ಮನೆಯವರ ಅನುಮತಿ ಪಡೆದು ಮದುವೆಯಾಗಿದ್ದಾರೆ. ರೀಲ್ ಕಥೆಯೇನೋ ಚೆನ್ನಾಗಿ ಓಡುತಿತ್ತು. ಅದ್ರೆ ರಿಯಲ್ ಆಗಿ ಶೂಟಿಂಗ್ ವೇಳೆ ಮಾತಿನ ಚಕಮಕಿ ನಡೆದು, ಧಾರಾವಾಹಿಯಿಂದ ನಟ ಅನಿರುದ್ಧ್ (Anirudh ) ಔಟ್ ಆಗಿದ್ದಾರೆ. ಆ ಪಾತ್ರಕ್ಕೆ ಹರೀಶ್ ರಾಜ್ (Harish Raj) ಅವರು ಬರ್ತಾರೆ ಅನ್ನೋ ಸುದ್ದಿ ಹರಡಿದೆ.

ಹಬ್ಬಕ್ಕೆಂದು ಊರಿಗೆ ಬಂದಿದ್ದ ಮಗಳು-ಅಳಿಯ, ಮೊಮ್ಮಗನೂ ಮಸಣಕ್ಕೆ!

ಇಂದು ಕರುನಾಡಿಗೆ ಕರಾಳ ಗುರುವಾರ. ಬೆಳಗ್ಗೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ (Kallambella, Tumakuru) ಸಮೀಪದ ಬಾಲೇನಹಳ್ಳಿ ಸಂಭವಿಸಿದ ಅಪಘಾತದಲ್ಲಿ (Tumakuru Accident) ಚಾಲಕ ಸೇರಿ 9 ಜನರು (People Death) ಸಾವನ್ನಪ್ಪಿದ್ದಾರೆ. ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ದಾರುಣ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಒಂದೇ ಕುಟುಂಬದ (Family) ನಾಲ್ವರು ಸಾವನ್ನಪ್ಪಿದ್ದಾರೆ. ಹಬ್ಬಕ್ಕೆಂದು (Festival) ಮನೆಗೆ ಬಂದು ವಾಪಸ್​ ತೆರಳುತ್ತಿದ್ದಾಗ ಮಗಳು-ಅಳಿಯ, ಮೊಮ್ಮಗ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಸಾವನ್ನಪ್ಪಿರುವ 9 ಮಂದಿಯಲ್ಲಿ 6 ಮಂದಿ ನೇತ್ರದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ (PM Narendra Modi) ಮೃತರ ಕುಟುಂಬ ಮತ್ತು ಗಾಯಾಳುಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: Tumakuru Accident: ಹಬ್ಬಕ್ಕೆಂದು ಊರಿಗೆ ಬಂದಿದ್ದ ಮಗಳು-ಅಳಿಯ, ಮೊಮ್ಮಗನೂ ಮಸಣಕ್ಕೆ!

ಏಷ್ಯಾ ಕಪ್​ಗೂ ಮುನ್ನ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಯುವ ವೇಗಿ

ಏಷ್ಯಾ ಕಪ್ 2022 (Asia Cup 2022) ಟೂರ್ನಿಯು ಆಗಸ್ಟ್ 27ರಂದು ಯುಎಇ (UAE) ಅಲ್ಲಿ ಅದ್ಧೂರಿಯಾಗಿ ಆರಂಭವಾಗಲಿದೆ. ಈಗಾಗಲೇ ಬಿಸಿಸಿಐ (BCCI) ಏಷ್ಯಾ ಕಪ್​ಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಿದ್ದು, ರೋಹಿತ್​ ಶರ್ಮಾ (Rohit Sharma) ಅವರನ್ನು ತಂಡದ ನಾಯಕರನ್ನಾಗಿ ಮತ್ತು ಕನ್ನಡಿಗ ಕೆಎಲ್​ ರಾಹುಲ್ (KL Rahul)​ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಿದೆ. ಇದರ ನಡುವೆ ಬಿಸಿಸಿಐ ಅಂತಿಮ ಕ್ಷಣದಲ್ಲಿ ತಂಡಕ್ಕೆ ಹೊಸ ಆಟಗಾರನನ್ನು ಆಯ್ಕೆ ಮಾಡಿದೆ.  ಭಾರತ ತಂಡದ ಅಭ್ಯಾಸಕ್ಕಾಗಿ ಯುವ ಬೌಲರ್ ಕುಲ್ದೀಪ್ ಸೇನ್ (Kuldeep Sen) ಅವರನ್ನು ನೆಟ್ ಬೌಲರ್ ಆಗಿ ಆಯ್ಕೆ ಮಾಡಿದೆ. ಇದೇ ಮೊದಲ ಬಾರಿಗೆ ಕುಲ್ದೀಪ್ ಸೇನ್ ಅವರು ಟೀಂ ಇಂಡಿಯಾದ ನೆಟ್​ ಬೌಲರ್ ಆಗಿ ಆಯ್ಕೆ ಆಗಿದ್ದು, ಅವರು ಭಾರತ ತಂಡವನ್ನು ಆದಷ್ಟು ಭೇಗ ಸೇರಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ನಾಪತ್ತೆಯಾದ್ರಾ ಆಮ್‌ ಆದ್ಮಿ ಶಾಸಕರು? 

ದೆಹಲಿ: ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದ ದೆಹಲಿಯ (Delhi) ಆಮ್ ಆದ್ಮಿ ಸರ್ಕಾರ (Aam Admi Government) ಹಾಗೂ ಬಿಜೆಪಿ (BJP) ನಡುವಿನ ಸಂಘರ್ಷ (conflict) ಜೋರಾಗುತ್ತಿದೆ. ದೆಹಲಿಯ ಎಎಪಿ ಸರ್ಕಾರ (AAP Government) ಬೀಳಿಸಲು ಬಿಜೆಪಿ ನಾಯಕರು (BJP Leaders) ಪ್ರಯತ್ನಿಸುತ್ತಿದ್ದಾರೆ ಅಂತ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. “ನನ್ನ ಸರ್ಕಾರವನ್ನು ಬೀಳಿಸಲು 40 ಮಂದಿ ಶಾಸಕರಿಗೆ (MLAs) ಬಿಜೆಪಿ ಬರೋಬ್ಬರಿ 800 ಕೋಟಿ ರೂಪಾಯಿ ಹಣ ನೀಡಿದ್ದಾರೆ” ಅಂತ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ತಮ್ಮ ನಿವಾಸದಲ್ಲಿಂದು ಆಮ್ ಆದ್ಮಿ ಪಕ್ಷದ ಶಾಸಕರ ಸಭೆ ನಡೆಸಿದ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal: ನಾಪತ್ತೆಯಾದ್ರಾ ಆಮ್‌ ಆದ್ಮಿ ಶಾಸಕರು? ಬಿಜೆಪಿ ವಿರುದ್ಧ ಕೇಜ್ರಿವಾಲ್ ಕೆಂಡ!

ಈದ್ಗಾ ಮೈದಾನದಲ್ಲಿ ಶುಕ್ರವಾರದ ಪ್ರಾರ್ಥನೆಗಿಲ್ಲ ಅವಕಾಶ

ಚಾಮರಾಜಪೇಟೆ ಈದ್ಗಾ ಮೈದಾನ (Idgah Ground) ಮಾಲೀಕತ್ವ ವಿವಾದ ಸಂಬಂಧ ಹೈಕೋರ್ಟ್ (Karnataka High Court) ಮಹತ್ವದ ಆದೇಶ ನೀಡಿದೆ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಆಟದ ಮೈದಾನವಾಗಿ (Play Ground) ಬಳಸಬೇಕು ಅಂತಾ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ತಿಳಿಸಿದೆ. ರಂಜಾನ್, ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆಗೆ (Prayer) ಬಳಸಲು ಅನುಮತಿ ಇದೆ. ಆದರೆ ಶುಕ್ರವಾರದ (Friday) ಪ್ರಾರ್ಥನೆಗೆ ಅವಕಾಶ ಇಲ್ಲ ಅಂತಾ ಹೈಕೋರ್ಟ್ ಹೇಳಿದೆ. ಮುಂದಿನ ಆದೇಶದವರೆಗೂ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚಿಸಿದೆ. ಯಾವುದೇ ವಿವಾದಕ್ಕೆ (Controversy) ಆಸ್ಪದ ಮಾಡಿಕೊಡಬೇಡಿ. ಮೈದಾನವಾಗಿರುವುದರಿಂದ ಯಥಾಸ್ಥಿತಿ ಕಾಪಾಡಿ ಎಂದು ಸರ್ಕಾರಕ್ಕೆ ಪೀಠ ಸೂಚನೆ ನೀಡಿದೆ. ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಆದೇಶ ನೀಡಿದೆ.
Published by:Annappa Achari
First published: