Evening Digest: ದ್ರೌಪದಿ ಮುರ್ಮುಗೆ ಮಾಯಾವತಿ ಬೆಂಬಲ: 7 ಭ್ರೂಣಗಳ ಪತ್ತೆ ಹಿನ್ನೆಲೆ ಹೆರಿಗೆ ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್ ಸೀಜ್: ಇಂದಿನ ಪ್ರಮುಖ ಸುದ್ದಿಗಳು

Kannada News Today: ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳ ಗುಚ್ಛ ಇಲ್ಲಿದೆ.

ಸಂಜೆ ಸುದ್ದಿ

ಸಂಜೆ ಸುದ್ದಿ

  • Share this:
ದ್ರೌಪದಿ ಮುರ್ಮುಗೆ ಮಾಯಾವತಿ ಬೆಂಬಲ: ಬಹುಜನ ಸಮಾಜ ಪಕ್ಷದ (BSP) ಮುಖ್ಯಸ್ಥೆ ಮಾಯಾವತಿ (Mayawati) ಅವರು ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು (NDA's Presidential election candidate Droupadi Murmu) ಅವರನ್ನು ಬೆಂಬಲಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು ಘೋಷಿಸಿದರು. ತಮ್ಮ ನಿಲುವನ್ನು ಸ್ಪಷ್ಟಪಡಿಸಿದ ಅವರು, ಎನ್‌ಡಿಎ ಅಥವಾ ಕೇಂದ್ರವನ್ನು ಬೆಂಬಲಿಸಲು ಬಿಎಸ್‌ಪಿ ಈ ರೀತಿ ಮಾಡುತ್ತಿಲ್ಲ. ಆದಿವಾಸಿ ಸಮಾಜವು ಪಕ್ಷದ ಚಳವಳಿಯ ಪ್ರಮುಖ ಭಾಗವಾಗಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಬಿಎಸ್​​ಪಿ ನಿರ್ಧರಿಸಿದೆ ಎಂದು ಮಾಯಾವತಿ ಹೇಳಿದರು. ಬಿಜೆಪಿ ಅಥವಾ ಎನ್‌ಡಿಎಯನ್ನು ಬೆಂಬಲಿಸಲು ಅಥವಾ ವಿರೋಧ ಪಕ್ಷವಾದ ಯುಪಿಎ ವಿರುದ್ಧ ಹೋಗಲು ಈ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೆ ನಮ್ಮ ಪಕ್ಷ ಮತ್ತು ಅದರ ಆಂದೋಲನವನ್ನು ಗಮನದಲ್ಲಿಟ್ಟುಕೊಂಡು ಸಮರ್ಥ ಮತ್ತು ಸಮರ್ಪಿತ ಆದಿವಾಸಿ ಮಹಿಳೆಯನ್ನು ದೇಶದ ಅಧ್ಯಕ್ಷರನ್ನಾಗಿ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಯಾವತಿ ತಮ್ಮ ಉದ್ದೇಶವನ್ನು ಸ್ಪಷ್ಟಪಡಿಸಿದರು.

ರಾಷ್ಟ್ರಪತಿ ದ್ರೌಪದಿಯಾದರೆ ಪಾಂಡವರು ಯಾರು? ಕೌರವರು ಯಾರು?

ವಿವಾದಗಳ ಕಿಂಗ್’ (Controversy King) ಎಂದೇ ಅಪಖ್ಯಾತಿ ಪಡೆದ ಬಾಲಿವುಡ್‌ನ ಖ್ಯಾತ ನಿರ್ದೇಶಕ (Bollywood Famous Director) ರಾಮ್ ಗೋಪಾಲ್ ವರ್ಮಾ (Ram Gopal Varma) ಮತ್ತೆ ವಿವಾದದ ಮೂಲಕ ಸುದ್ದಿ ಮಾಡಿದ್ದಾರೆ. ಅಂದಹಾಗೆ ‘ವಿವಾದ ಅಂದ್ರೆ ರಾಮ್ ಗೋಪಾಲ್ ವರ್ಮಾ, ರಾಮ್ ಗೋಪಾಲ್ ವರ್ಮಾ ಅಂದ್ರೆ ವಿವಾದ’ ಎನ್ನುವುದು ಎಲ್ಲರಿಗೂ ಗೊತ್ತಿರುವಂತದ್ದೇ. ಇದೀಗ ಎನ್‌ಡಿಎ (NDA) ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ (NDA Presidential candidate) ದ್ರೌಪದಿ ಮುರ್ಮು (Draupadi Murmur) ವಿರುದ್ಧ ಅವಹೇಳನದ ಟ್ವೀಟ್ (Tweet) ಮಾಡಿ ಆರ್‌ಜಿವಿ (RGV) ಭಾರೀ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. “ದ್ರೌಪದಿ ರಾಷ್ಟ್ರಪತಿ ಆದರೆ, ಪಾಂಡವರು (Pandavas) ಯಾರು? ಮುಖ್ಯವಾಗಿ ಕೌರವರು (Kauravas) ಯಾರು?” ಅಂತ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ. ಇದೀಗ ಈ ಟ್ವೀಟ್‌ಗೆ ಸಾರ್ವಜನಿಕ ವಲಯ ಹಾಗೂ ಬಿಜೆಪಿ (BJP) ಪಾಳೆಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹೈದರಾಬಾದ್‌ನಲ್ಲಿ (Hyderabad) ಬಿಜೆಪಿ ನಾಯಕರೋರ್ವರು ರಾಮ್ ಗೋಪಾಲ್ ವರ್ಮಾ ವಿರುದ್ಧ ದೂರು (Complaint) ಕೂಡ ದಾಖಲಿಸಿದ್ದಾರೆ.

7 ಭ್ರೂಣಗಳ ಪತ್ತೆ ಹಿನ್ನೆಲೆ ಹೆರಿಗೆ ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್ ಸೀಜ್

ಮೂಡಲಗಿ ಪಟ್ಟಣದ ಹಳ್ಳದಲ್ಲಿ7  ಭ್ರೂಣಗಳ ಮೃತದೇಹ (Neonatal Babies) ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಡಿಎಚ್​ಒ ಮಹೇಶ (DHO Mahesh) ಕೋಣಿ ಅವರು ಪೊಲೀಸರ (Police) ನೇತೃತ್ವದಲ್ಲಿ ಮೂಡಲಗಿಯ ಸ್ಕ್ಯಾನಿಂಗ್​,  6 ಮೆಟರ್ನಿಟಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ರು.  ವೆಂಕಟೇಶ ಮೆಟರ್ನಿಟಿ ಆಸ್ಪತ್ರೆಯನ್ನು (Venkatesha Maternity Hospital) ಸೀಜ್ ಮಾಡಿದ್ದಾರೆ.  ಮೂರು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಏಳು ಭ್ರೂಣಗಳ ಲಿಂಗ ಪತ್ತೆ ಮಾಡಿ ಹತ್ಯೆ ಮಾಡಿದ ಅನುಮಾನವಿದೆ. ಹೀಗಾಗಿ ಅಸ್ಪತ್ರೆ ಬಂದ್ ಮಾಡಿ ಇನ್ನಷ್ಟು ತನಿಖೆ (Investigation) ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು (Officer) ತಿಳಿಸಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ: Belagavi: 7 ಭ್ರೂಣಗಳ ಪತ್ತೆ ಕೇಸ್, ಹೆರಿಗೆ ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್ ಸೀಜ್; ಸಚಿವ ಸುಧಾಕರ್ ಖಡಕ್​ ಆದೇಶ

ಅಂಜನಾದ್ರಿ ಬೆಟ್ಟಕ್ಕೆ 430 ಮೀಟರ್ ರೋಪ್ ವೇ

ಅಂಜನಾದ್ರಿ ಬೆಟ್ಟಕ್ಕೆ 430 ಮೀಟರ್ ರೋಪ್ ವೇ ನಿರ್ಮಿಸಲು ಪ್ರಸ್ತಾಪಿಸಲಾಗಿದ್ದು, ಈ ಯೋಜನೆಯ ಟೆಂಡರ್ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿಯವರು ಸೂಚಿಸಿದರು. ಈ ಯೋಜನೆಯಡಿ ರೋಪ್‍ ವೇ ಬೇಸ್‍ನಲ್ಲಿ ಪ್ರವಾಸಿಗರಿಗೆ ಅಗತ್ಯ ಸೌಕರ್ಯ, ಸರದಿಯಲ್ಲಿ ಕಾಯುವ ಸಂದರ್ಭ ಬಂದಾಗ ಅಗತ್ಯ ಮೂಲಸೌಕರ್ಯಗಳು, ಪಾರ್ಕಿಂಗ್ ಸೌಲಭ್ಯಗಳನ್ನು ಕಲ್ಪಿಸಲು ಸೂಚಿಸಿದರು. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೊಮ್ಮಾಯಿ ಸೂಚಿಸಿದರು. ಜುಲೈ 15 ರೊಳಗೆ ತಾವು ಖುದ್ದು ಅಂಜನಾದ್ರಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಕನ್ನಡ ಕಡೆಗಣಿಸಿದ ಕಿಂಗ್​ ಖಾನ್

ಪಠಾಣ್ ಚಿತ್ರವನ್ನು ಕೇವಲ ಹಿಂದಿ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ಶಾರುಖ್ ಖಾನ್ ತಿಳಿಸಿದ್ದಾರೆ. ಇದು ಕನ್ನಡಿಗರಿಗೆ ಬೇಸರ ತರಿಸಿದೆ. ಇಷ್ಟು ದೊಡ್ಡ ಮಟ್ಟದ ಮಾರ್ಕೆಟ್​​ ಇದ್ದರೂ ಸಹ ಏಕೆ ಕನ್ನಡದಲ್ಲಿ ಬಿಡುಗಡೆ ಮಾಡುತ್ತಿಲ್ಲ ಎಂದು ಕನ್ನಡಿಗರು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಟ್ವಿಟರ್​ ನಲ್ಲಿ  #NoKannadaNoBusiness ಎಂಬ ಹ್ಯಾಷ್​ಟ್ಯಾಗ್ ಟ್ರೆಂಡ್​ ಆಗುತ್ತಿದೆ.
Published by:Kavya V
First published: