Evening Digest: ದಸರಾಗೆ ಚಾಲನೆ, ದೇಶಕ್ಕೆ ಆರ್​ಎಸ್ಎಸ್​ ಕೊಡುಗೆ ಏನು? ಎಂದ ಎಚ್​ಡಿಕೆ; ಈ ದಿನದ ಪ್ರಮುಖ ಸುದ್ದಿಗಳು

Kannada news Today : ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳ ಗುಚ್ಛ ಇಲ್ಲಿದೆ.

evening digest

evening digest

 • Share this:
  ದಸರಾಗೆ ಚಾಲನೆ
  ವಿಶ್ವ ವಿಖ್ಯಾತ ಮೈಸೂರು ದಸರಾಗೆ(Mysuru Dasara) ವಿದ್ಯುಕ್ತ‌ ಚಾಲನೆ ನೀಡಲಾಗಿದ್ದು, ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮೂಲಕ‌ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ(S.M Krishna) ಈ ಬಾರಿ ದಸರಾಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್ , ಡಾ.ಕೆ.ಸುಧಾಕರ್, ಬಿ.ಸಿ.ಪಾಟೀಲ, ಸುನೀಲ್ ಕುಮಾರ್, ಶಿವರಾಂ ಹೆಬ್ಬಾರ್ ಸೇರಿದಂತೆ ಮೈಸೂರು ಭಾಗದ ಶಾಸಕರು, ಸಂಸದರು ಭಾಗಿಯಾಗಿದ್ದರು

  ಶ್ರೀನಿವಾಸ್​ ಮಾನೆ ನಾಮಪತ್ರ ಸಲ್ಲಿಕೆ
  ಹಾನಗಲ್ ಉಪಚುನಾವಣಾ (hangal By Election)​ ಕಾಂಗ್ರೆಸ್​ ಅಭ್ಯರ್ಥಿ ಶ್ರೀನಿವಾಸ್​​ ಮಾನೆ (Congress candidate Srinivas mane) ಇಂದು ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಸತೀಶ್​ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಅವರಿಗೆ ಜೊತೆಯಾಗಿದ್ದರು.

  ಜೆಡಿಎಸ್​ ವಿರುದ್ಧ ಸಿದ್ದರಾಮಯಯ ಕಿಡಿ
  ರಾಜ್ಯದಲ್ಲಿ ಮತ್ತೆ ಉಪ ಚುನಾವಣೆ ಕಾವು ಕಳೆಗಟ್ಟಿದೆ. ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರದ ಉಪ ಚುನಾವಣೆ (By Election) ಕಾಂಗ್ರೆಸ್ (Congress)​ ಮತ್ತು ಬಿಜೆಪಿ (BJP) ಪಾಲಿಗೆ ಜಿದ್ದಾಜಿದ್ದಿ ಕಣವಾಗಿ ಬದಲಾಗಿದೆ. ಈ ಕ್ಷೇತ್ರದಲ್ಲಿ ಕೈ ಮತ್ತು ಕಮಲದ ಅಭ್ಯರ್ಥಿಗಳು ಯಾರು? ಎಂಬುದೇ ದೊಡ್ಡ ಕುತೂಹಲದ ವಿಚಾರವಾಗಿತ್ತು. ಆದರೆ, ಜೆಡಿಎಸ್​ ಈ ಎರಡೂ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತ ಸಮುದಾಯದ ಅಭ್ಯರ್ಥಿಯನ್ನು ಘೋಷಿಸಿದೆ. ಜೆಡಿಎಸ್ ಪಕ್ಷದ ಈ ನಡೆ ಸಾಮಾನ್ಯವಾಗಿ ಅಲ್ಪ ಸಂಖ್ಯಾತ ಸಮುದಾಯದ ಮತಗಳನ್ನು ಒಡೆಯಲಿದ್ದು, ಪರೋಕ್ಷವಾಗಿ ಬಿಜೆಪಿಗೆ ಸಹಕಾರಿಯಾಗಲಿದೆ ಎಂದು ಟೀಕಿಸಿದರು

  ದೇಶಕ್ಕೆ ಆರ್​ಎಸ್ಎಸ್​ ಕೊಡುಗೆ ಏನು?
  ಆರ್​ಎಸ್​ಎಸ್​ ಬಗ್ಗೆ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ಸಿಟಿ ರವಿ (CT Ravi) ಟೀಕೆ ಮಾಡಿದ್ದರು. ಈ ವಿಚಾರವಾಗಿ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಸಿಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ. ಸಿಟಿ ರವಿ ಅವರೇ, 2006ಕ್ಕಿಂತ ಮೊದಲು ರಾಜ್ಯದಲ್ಲಿದ್ದ ಬಿಜೆಪಿ ನಾಯಕರ ಚೆರಿತ್ರೆ ಗಮನಿಸಿ. ಜನರ ಬಾಯಿಯಲ್ಲಿ ಅವರ ಹಗರಣಗಳ ಕಥೆಗಳಿವೆ. RSSನಿಂದ ಅವರೆಲ್ಲ ತರಬೇತಿ ಪಡೆದು ರಾಷ್ಟ್ರ ನಿರ್ಮಾಣ ಮಾಡಿದರೋ, ಜನರ ಹಣ ಲೂಟಿ ಹೊಡೆದು ತಮ್ಮ ಸಾಮ್ರಾಜ್ಯಗಳನ್ನು ನಿರ್ಮಾಣ ಮಾಡಿಕೊಂಡರೋ ಎನ್ನುವುದನ್ನು ತಿಳಿದುಕೊಳ್ಳಿ ಎಂದಿದ್ದಾರೆ

  ಅಂಬಾಲದಲ್ಲಿ ರೈತರ ಮೇಲೆ ವಾಹನ ಹತ್ತಿಸುವ ಯತ್ನದ ಆರೋಪ
  ಉತ್ತರ ಪ್ರದೇಶದ ಲಖೀಂಪುರ ಖೇರಿಯ ಘಟನೆ ಮಾಸುವ ಮುನ್ನವೇ ಹರಿಯಾಣದ ಅಂಬಾಲದಲ್ಲಿ ಅಂತಹುವುದೇ ಒಂದು ಘಟನೆ ನಡೆದಿದೆ. ಬಿಜೆಪಿ ನಾಯಕನನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಲು ಪ್ರಯತ್ನಿಸಿರುವ ಆರೋಪ ಕೇಳಿ ಬಂದಿದೆ. ಕುರುಕ್ಷೇತ್ರದ ಬಿಜೆಪಿ ಸಂಸದ ನಾಯಬ್ ಸೈನಿ ( BJP MP Nayab Saini)ಬೆಂಗಾವಲು ಸಿಬ್ಬಂದಿ ಅಂಬಾಲದ ನಾರಾಯಣಗಢ(Naraingarh near Ambala)ದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಘಟನೆಯಲ್ಲಿ ಗಾಯಗೊಂಡಿರುವ ರೈತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಸಿಧು ಬಂಧನ
  ತರ ಸಾವಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಮಗನನ್ನು ಬಂಧಿಸುವಂತೆ ಒತ್ತಾಯಿಸಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು ಹಾಗೂ ಇಬ್ಬರು ಪಂಜಾಬ್ ಸಚಿವರನ್ನು ಮತ್ತು ಕೆಲವು ಶಾಸಕರೊಂದಿಗೆ ಉತ್ತರಪ್ರದೇಶ ಗಡಿಯಲ್ಲಿರುವ ಶಹಜಹಾನ್ಪುರದಲ್ಲಿ ಬಂಧಿಸಲಾಗಿದೆ.

  ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ
  ಕಾಶ್ಮೀರದಲ್ಲಿ(Jammu and Kashmir) ಮತ್ತೆ ಕೆಲದಿನಗಳಿಂದ ಉಗ್ರರು(Militants) ಅಟ್ಟಹಾಸ ಮೆರೆಯುತ್ತಿದ್ದಾರೆ. ಇಲ್ಲಿ ಕೆಲದಿನಗಳಿಂದ ತಣ್ಣಗಾಗಿದ್ದ ಗುಂಡಿನ ಮೊರೆತ, ಈಗ ಮತ್ತೆ ಜೋರಾಗಿದೆ. ಅಫ್ಘಾನಿಸ್ತಾನ(Afghanistan)ದ ಮೇಲೆ ತಾಲಿಬಾನ್(Taliban) ಹಿಡಿತ ಸಾಧಿಸಿದ ನಂತರ, ಜಮ್ಮು ಮತ್ತು ಕಾಶ್ಮೀರ(Jammu Kashmir)ದಲ್ಲಿ ಪಾಕಿಸ್ತಾನ(Pakistan) ಮೂಲದ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ.
  Published by:Seema R
  First published: